ಅಭಿಪ್ರಾಯ / ಸಲಹೆಗಳು

ಕಳವು ಪ್ರಕರಣ
            ದಿನಾಂಕ: 01-04-2022 ರಂದು ಮುಂಬೈ ನಿವಾಸಿ ಬಾಲಕೃಷ್ಣನ್‌ ಎಂಬುವವರು ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದ ಇವಾಲ್‌ ಬ್ಯಾಕ್‌ ರೆಸಾರ್ಟನಲ್ಲಿ ತಂಗಿರುವಾಗ ರೂಂ ಲಾಕರ್‌ನಲ್ಲಿ ಇಟ್ಟಿದ್ದ ₹.90,000 ನಗದು, ₹. 5,80,000 ಮೌಲ್ಯದ ವಜ್ರಾಭರಣ, ₹.50,000 ಮೌಲ್ಯದ ಐಪಾಡ್‌ ಹಾಗೂ ಇತರ ದಾಖಲಾತಿಗಳನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸಿದ್ದಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

            ದಿನಾಂಕ: 02-04-2022 ರಂದು ಕುಶಾಲನಗರ ತಾಲ್ಲೂಕು ಕೂಡ್ಲೂರು ನಿವಾಸಿ ಅಮೃತ ಮತ್ತು ನೂತನ್‌ ಎಂಬುವವರಿಗೆ ಅದೇ ಗ್ರಾಮದ ನಿವಾಸಿಗಳಾದ ಮಣಿಕಂಠ, ಕುಮಾರಸ್ವಾಮಿ, ಯಶವಂತ್‌, ಪ್ರಮೋದ್‌, ಹರೀಶ್‌, ಅಶ್ವಿನ್‌ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ 

           ದಿನಾಂಕ 02-04-2022 ರಂದು ವಿರಾಜಪೇಟೆ ತಾಲ್ಲೂಕು ಬೇತ್ರಿ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಎ-2723 ರ ಖಾಸಗಿ ಬಸ್ಸನ್ನು ಚಾಲಕ ಅಚ್ಚುತನ್‌ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿದ್ದರಿಂದ ಬಸ್‌ನಲ್ಲಿದ್ದ ಮೊಹಮ್ಮದ್‌ ಮತ್ತು ಮಗುವೊಂದು ಬಸ್‌ನಿಂದ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 03-04-2022 07:19 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080