ಅಭಿಪ್ರಾಯ / ಸಲಹೆಗಳು

ಚಿನ್ನಾಭರಣ ಕಳವು, ಪ್ರಕರಣ ದಾಖಲು

ಸೋಮವಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಕುಂಬಾರಗಡಿಗೆ ಗ್ರಾಮದ ನಿವಾಸಿ ಕೆ.ಆರ್.ಸೋಮಯ್ಯ ಎಂಬವರ ಮನೆಯ ಮಲಗುವ ಕೋಣೆಯಲ್ಲಿ ಪೆಟ್ಟಿಗೆಯೊಂದರಲ್ಲಿ ಇಟ್ಟಿದ 20 ಗ್ರಾಂ ಚಿನ್ನದ ಸರ, 12 ಗ್ರಾಂ ತೂಕದ ಕಡಗ ಮತ್ತು 8 ಗ್ರಾಂ ತೂಕದ ಒಂದು ಜೊತೆ ಓಲೆ ಒಟ್ಟು 1,40,000 ರೂಮೌಲ್ಯದ ಚಿನ್ನಾಭರಣ ಕಾಣೆಯಾಗಿದ್ದು, ಇದನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು  ದಿನಾಂಕ 11-6-2021 ರಂದು ಕೆ.ಆರ್. ಸೋಮಯ್ಯನವರು ನೀಡಿದ ದೂರಿನ ಮೇರೆಗೆ ಸೋಮವಾರಪೇಟೆ ಠಾಣೆಯಲ್ಲಿ ದೂರು ದಾಖಲಿಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕೋವಿಡ್-19 ಕರ್ತವ್ಯಕ್ಕೆ ಅಡ್ಡಿ.

ದಿನಾಂಕ 10-6-2021 ರಂದು ವಿರಾಜಪೇಟೆ ತಾಲೋಕಿನ ಐಮಂಗಲ ಗ್ರಾಮದಲ್ಲಿ ಒಂದು ಕೋವಿಡ್-19 ಪ್ರಕರಣ ದಾಖಲಾಗಿದ್ದು ಸದರಿ ಪ್ರಕರಣವನ್ನು ಕಂಟೈನ್ ಮೆಂಟ್ ಜೋನ್ ಎಂದು ಪರಿಗಣಿಸಲಾಗದ್ದು,  ಕೋವಿಡ್ ಪಾಸಿಟಿವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಥಮ ಹಾಗು ದ್ವಿತೀಯ ಸಂಪರ್ಕ ವ್ಯಕ್ತಿಗಳ ಗಂಟಲು ದ್ರವ ಪರೀಕ್ಷಿಸುವ ಕರ್ತವ್ಯಕ್ಕೆ ಆರೋಗ್ಯ ಇಲಾಖೆಯ ಎ.ಎನ್.ಎಂ. ಆಶಾ ಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆ ಮತ್ತು ಗ್ರಮ ಮಟ್ಟದ ಟಾಸ್ಕ್ ಫೋರ್ಸ್  ಸಮಿತಿ ಸದಸ್ಯರು  ಕೋವಿಡ್ ಪಾಸಿಟಿವ್ ಪ್ರಕರಣ ಇರುವ ಮನೆಗೆ ಹೋದಾಗ ಸಲೀಂ ಎಸ್.ಕೆ. ಮತ್ತು ಸೋಯಲ್ ಎಸ್.ಕೆ. ರವರು  ಸರಕಾರಿ ಕೆಲಸಕ್ಕೆ ಅಡ್ಡಿಪಡಿಸಿ ಅವಾಚ್ಯ ಶಬ್ದಗಳಿಂದ ಅಧಿಕಾರಿಗಳಿಗೆ

5 ಜನ ಬಾಲಕಾರ್ಮಿಕರ ರಕ್ಷಣೆ

ಜಿಲ್ಲಾ ಮಕ್ಕಳ ಸಹಾಯವಾಣಿಗೆ ಬಂದ ದೂರನ್ನು ಆಧರಿಸಿ ದಿನಾಂಕ 11/06/2021 ರಂದು ವಿರಾಜಪೇಟೆ ತಾಲ್ಲೂಕಿನ ಮಂಚಳ್ಳಿ ಗ್ರಾಮಗಳ ಕಾಫಿ ತೋಟ ಹಾಗೂ ಸ್ಥಳೀಯ ಮನೆಗಳಿಗೆ ತೆರಳಿ ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಧೆಯ  ಕಾರ್ಮಿಕ ಕಾಯ್ದೆಯಡಿ ತಪಾಸಣೆಯನ್ನು ನಡೆಸಲಾಯಿತು.   ಸದರಿ ಕಾರ್ಯಾಚರಣೆ ಸಂದರ್ಭ ತೋಟದ ಕೆಲಸಗಳಲ್ಲಿ ನಿರತರಾಗಿದ್ದ ಐದು  ಬಾಲ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದ್ದು, ಸದರಿ ಮಕ್ಕಳ ಪೋಷಣೆ ಹಾಗೂ ರಕ್ಷಣೆಯ ಉದ್ದೇಶದಿಂದ ಮಡಿಕೇರಿಯಲ್ಲಿರುವ ಸರ್ಕಾರಿ ಬಾಲಮಂದಿರದಲ್ಲಿ ಮಕ್ಕಳನ್ನು ಪುನರ್ವಸತಿಗೋಳಿಸಲಾಗಿದೆ ಹಾಗೂ ತಪ್ಪಿತಸ್ಥ ಮಾಲೀಕರ ವಿರುದ್ಧ ಕ್ರಮಕೈಗೊಳ್ಳಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಕು.ಕಾವ್ಯ ರಾಣಿ ತಹಶಿಲ್ದಾರರು ಪೋನ್ನಂಪೇಟೆ ತಾಲ್ಲೂಕು, ಶ್ರೀ ಜಯಣ್ಣ ಹಿರಿಯ ಕಾರ್ಮಿಕ ನಿರೀಕ್ಷಕರು ವಿರಾಜಪೇಟೆ ವೃತ್ತ,  ಶ್ರೀಮತಿ ಎಂ ಬಿ ಸುಮತಿ ಹಾಗೂ   ಶ್ರೀ ಯು ಎ ಮಹೇಶ್ ಮಕ್ಕಳ ವಿಶೇಷ ಪೋಲಿಸ್ ಘಟಕ ಕೊಡಗು ಜಿಲ್ಲೆ,  ಶ್ರೀ ಆರ್ ಶೀರಾಝ್ ಅಹ್ಮದ್, ಯೋಜನಾ ನಿರ್ದೇಶಕರು ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಕೊಡಗು ಜಿಲ್ಲೆ, ಸಚೀನ್ ಸುವರ್ಣ ಮಕ್ಕಳ ರಕ್ಷಣಾಧಿಕಾರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕೊಡಗು ಜಿಲ್ಲೆ, ಶ್ರೀಮತಿ ಶೋಭಲಕ್ಷಿ, ಶ್ರೀಮತಿ ಮಂಜುಳ ಚೈಲ್ಡ್ ಲೈನ್ ಮಕ್ಕಳ ಸಹಾಯವಾಣಿ ತಂಡದ ಸದಸ್ಯರು ಕೊಡಗು ಜಿಲ್ಲೆ  ರವರುಗಳು ಪಾಲ್ಗೊಂಡಿದ್ದರು.

ಇತ್ತೀಚಿನ ನವೀಕರಣ​ : 12-06-2021 01:16 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080