ಅಭಿಪ್ರಾಯ / ಸಲಹೆಗಳು

ಹಲ್ಲೆ ಪ್ರಕರಣ

            ದಿನಾಂಕ: 28-02-2021 ರಂದು ವಿರಾಜಪೇಟೆ ತಾಲ್ಲೂಕು ಪಾಲಿಬೆಟ್ಟ ಮಸ್ಕಲ್‍ ಎಸ್ಟೇಟ್‍ ನಿವಾಸಿ ಸುಬ್ರಮಣಿ ಮತ್ತು ಬಾಡಗ ಬಾಣಂಗಾಲ ಗ್ರಾಮದ ನಿವಾಸಿ ವಿನೋದ್ ಎಂಬುವವರು ತೋಟದಲ್ಲಿ ಮೆಣಸು ಕುಯ್ಯುವ ವಿಚಾರದಲ್ಲಿ  ಪರಸ್ಪರ ಜಗಳ ಮಾಡಿಕೊಂಡು ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿಕೊಂಡಿದ್ದು ಈ ಬಗ್ಗೆ ಉಭಯ ಕಡೆಯವರು ನೀಡಿದ ಪುಕಾರಿನ ಮೇರೆ ಸಿದ್ದಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಕಳವು ಪ್ರಕರಣ

            ದಿನಾಂಕ: 27-02-2021 ರಂದು ರಾತ್ರಿ ಸೋಮವಾರಪೇಟೆ ಪಟ್ಟಣದ ಆಲೆಕಟ್ಟೆ ನಿವಾಸಿ ಮಹೇಶ ಅವರು ವಾಸವಿರುವ ಮನೆಯ ಮುಂದೆ ನಿಲ್ಲಿಸಿದ್ದ ಕೆಎ-13-ಯು-2099 ನೋಂದಣಿ ಸಂಖ್ಯೆಯ ಬೈಕನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಕಳವು ಪ್ರಕರಣ

            ದಿನಾಂಕ: 27-02-2021 ರಂದು ರಾತ್ರಿ ಸೋಮವಾರಪೇಟೆ ಪಟ್ಟಣದ ಬಸವೇಶ್ವರ ರಸ್ತೆ ನಿವಾಸಿ ಮಿಲನ್‍ ಎಂಬುವವರು ಅವರು ವಾಸವಿರುವ ಮನೆಯ ಮುಂದೆ ನಿಲ್ಲಿಸಿದ್ದ ಕೆಎ-12-ಯು-0545 ನೋಂದಣಿ ಸಂಖ್ಯೆಯ ಟಿವಿಎಸ್‍ ಅಪಾಚಿ ಆರ್.ಟಿ.ಆರ್ ಬೈಕನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಳವು ಪ್ರಕರಣ

          ದಿನಾಂಕ: 27-02-2021 ರಂದು ಕುಶಾಲನಗರದ ಕೋನಿಕ ಫೋಟೊ ಎಕ್ಸ್ ಪ್ರೆಸ್ ಸ್ಟುಡಿಯೋ ನಡೆಸುತ್ತಿರುವ ವಿಜಯಕುಮಾರ್‍ ಎಂಬುವವರು ಮಧ್ಯಾಹ್ನ ಮಳಿಗೆಯ ಬಾಗಿಲನ್ನು ಹಾಕಿ ಬೀಗಹಾಕದೆ ಮನೆಗೆ ಹೋಗಿ ವಾಪಾಸ್ಸು ಬಂದು ನೋಡಿದಾಗ ಸ್ಟುಡಿಯೋದೋಲಗೆ ಇಟ್ಟಿದ್ದ ಕ್ಯಾಮೆರಾ, ಲೆನ್ಸ್ ಮತ್ತು ನಗದು ಸಹಿತ ₹. 73,000 ಮೌಲ್ಯದ ಸ್ವತ್ತುಗಳನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಎ ನೀಡಿದ ಪುಕಾರಿನ ಮೇರೆ ಕುಶಾಲನಗರ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ರಸ್ತೆ ಅಪಘಾತ ಪ್ರಕರಣ

            ದಿನಾಂಕ: 28-02-2021 ರಂದು ಸೋಮವಾರಪೇಟೆ ತಾಲ್ಲೂಕು ಮಣಜೂರು ಗ್ರಾಮದ ಬಳಿ ಹೆದ್ದಾರಿ ರಸ್ತೆಯಲ್ಲಿ ಕೆಎ-03-ಇಎಲ್-7654 ರ ಬೈಕನ್ನು ಅದರ ಸವಾರ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-09-ಹೆಚ್‍.ಎನ್-2021 ರ ಬೈಕ್‍ ಗೆ ಡಿಕ್ಕಿಪಡಿಸಿದ ಪರಿಣಾಮ ಸವಾರ ಸೋಮಶೇಖರ್‍ ಎಂಬುವವರು ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 01-03-2021 04:39 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ