ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 30-06-2021 ರಂದು ಮಡಿಕೇರಿ-ಕುಶಾಲನಗರ ಮುಖ್ಯ ರಸ್ತೆಯಲ್ಲಿ ಗುಡ್ಡೆಹೊಸೂರು ಗ್ರಾಮದ ಬಳಿ ಯಾವುದೋ ಒಂದು ದ್ವಿಚಕ್ರ ವಾಹನವರುರಸ್ತೆ ಬದಿಯಲ್ಲಿದ್ದ ಕುಮಾರ್‌ ಎಂಬುವವರಿಗೆ ಡಿಕ್ಕಿಪಡಿಸಿದ ಪರಿಣಾಮ ಬಿದ್ದು ಗಾಯಗೊಂಡಿದ್ದು, ಡಿಕ್ಕಿಪಡಿಸಿದ ನಂತರ ಸವಾರ ವಾಹನವನ್ನು ನಿಲ್ಲಿಸದೇ ಹೋಗಿದ್ದು ಈ ಬಗ್ಗೆ ದೇವಯ್ಯ ಎಂಬುವವರು ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಅಕ್ರಮ ಮದ್ಯ ಮಾರಾಟ ಪ್ರಕರಣ

ದಿನಾಂಕ: 30-06-2021 ರಂದು ಪೊನ್ನಂಪೇಟೆ ತಾಲ್ಲೂಕು ಹುದಿಕೇರಿ ಗ್ರಾಮದ ೭ನೇ ಮೈಲ್‌ ನಿವಾಸಿ  ದಿಲ್ಲು ಎಂಬುವವರು ಅವರ ಮನೆಯಮುಂಭಾಗದ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ  ಸಾರ್ವಜನಿಕರಿಗೆ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಶ್ರೀಮಂಗಲ  ಠಾಣೆ ಪೊಲೀಸರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಲಾಕ್‌ ಡೌನ್‌ ನಿಯಮ ಉಲ್ಲಂಘನೆ ಪ್ರಕರಣ

                ದಿನಾಂಕ: 30.06.2021ರಂದು ಮಡಿಕೇರಿ ಹೊಸಬಡಾವಣೆ  ಬಳಿ ಸ್ಯಾನ್‌ ಇನ್‌  ಎಂಬ ಹೋಸ್ಟೇ ಯ ಮಾಲೀಕರು  ಪ್ರವಾಸಿಗರಿಗೆ ತಂಗುವ ವ್ಯಸ್ಥೆಯನ್ನು ಮಾಡಿ, ಸಾಂಕ್ರಾಮಿಕ ರೋಗ ಹರಡುವ ಸಂಭವವಿದ್ದರೂ ಸಹಾ ಕೋವಿಡ್‍-19 ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗಟ್ಟಲು ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿ ಉಲ್ಲಂಘಿಸಿರುವ ಬಗ್ಗೆ ಮಡಿಕೇರಿ ನಗರ ಸಭೆ ಅಧಿಕಾರಿಗಳು ಪರಿಶೀಲನೆ ಮಾಡಿ ನೀಡಿದ ವರದಿ ಮೇರೆ ಮಡಿಕೇರಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಲಾಕ್‌ ಡೌನ್‌ ನಿಯಮ ಉಲ್ಲಂಘನೆ ಪ್ರಕರಣ

                ದಿನಾಂಕ: 30-06-2021 ರಂದು ಪೊನ್ನಂಪೇಟೆ ತಾಲ್ಲೂಕು ಗೋಣಿಕೊಪ್ಪ ನಗರದಲ್ಲಿರುವ ಸ್ಮಾರ್ಟ್‌ ಸಿಟಿ ಅಂಗಡಿಯ ಮಾಲೀಕರಾದ ಶಕೀರ್‌ ಎಂಬುವವರು  ಕೋವಿಡ್‍-19 ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗಟ್ಟಲು ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿ ಉಲ್ಲಂಘಿಸಿ ಅತ್ಯಾವಶ್ಯಕವಲ್ಲದ ಎಲೆಕ್ರ್ಟಾನಿಕ್‌ ವ್ಯಾಪಾರ ವಹಿವಾಟು ನಡೆಸುತ್ತಿದ್ದು  ಈ ಬಗ್ಗೆ ಗೋಣಿಕೊಪ್ಪ ಠಾಣೆ ಪಿಎಸ್‌ಐ ಸುಬ್ಬಯ್ಯ ಮತ್ತು ಸಿಬ್ಬಂದಿಯವರು ಪರಿಶೀಲಿಸಿ  ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ಧಾರೆ.

ಲಾಕ್‌ ಡೌನ್‌ ನಿಯಮ ಉಲ್ಲಂಘನೆ ಪ್ರಕರಣ

                ದಿನಾಂಕ: 30-06-2021 ರಂದು ಪೊನ್ನಂಪೇಟೆ ತಾಲ್ಲೂಕು ಗೋಣಿಕೊಪ್ಪ ನಗರದಲ್ಲಿರುವ ಶಕ್ತಿ ಎಲೆಕ್ಟ್ರಾನಿಕ್ಸ್ ಅಂಗಡಿಯ ಮಾಲೀಕರಾದ ತಿರುಪತಿ ಎಂಬುವವರು  ಕೋವಿಡ್‍-19 ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗಟ್ಟಲು ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿ ಉಲ್ಲಂಘಿಸಿ ಅತ್ಯಾವಶ್ಯಕವಲ್ಲದ ಎಲೆಕ್ರ್ಟಾನಿಕ್‌ ವ್ಯಾಪಾರ ವಹಿವಾಟು ನಡೆಸುತ್ತಿದ್ದು  ಈ ಬಗ್ಗೆ ಗೋಣಿಕೊಪ್ಪ ಠಾಣೆ ಪಿಎಸ್‌ಐ ಸುಬ್ಬಯ್ಯ ಮತ್ತು ಸಿಬ್ಬಂದಿಯವರು ಪರಿಶೀಲಿಸಿ  ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ಧಾರೆ.

ಉಯ್ಯಾಲೆ ಆಟವಾಡುವಾಗ ಮಕ್ಕಳ ಆಕಸ್ಮಿಕ ಸಾವು ಪ್ರಕರಣ

                ದಿನಾಂಕ: 30-06-2021 ರಂದು ಸೋಮವಾರಪೇಟೆ ತಾಲ್ಲೂಕು ಉಂಜಿಗನಹಳ್ಳಿ ಗ್ರಾಮದ ನಿವಾಸಿ ಗಿರೀಶ್‌ ಎಂಬುವವರ ಮಗಳು ಮತ್ತು ಮಗ ಅವರ ತಂದೆಯ ಮನೆಯ ಕೌಕೋಲಿಗೆ ಸೀರೆ ಮತ್ತು ವೇಲ್‌ ಕಟ್ಟಿಕೊಂಡು ಉಯ್ಯಾಲೆ ಆಡುತ್ತಿರುವಾಗ ಆಕಸ್ಮಿಕವಾಗಿ ಸೀರೆ ಕುತ್ತಿಗೆಗೆ ಸುತ್ತಿಕೊಂಡು ಇಬ್ಬರೂ ಮಕ್ಕಳು ಧಾರುಣ ಸಾವನ್ನಪ್ಪಿದ್ದು ಈ ಬಗ್ಗೆ ಮೃತರ ತಂದೆ ನೀಡಿದ ದೂರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

                ಮಕ್ಕಳು ಸೀರೆ ಉಪಯೋಗಿಸಿ ಉಯ್ಯಾಲೆ ಆಟವಾಡುವಾಗ ಕುತ್ತಿಗೆಗೆ ಸೀರೆ ಸುತ್ತಿಕೊಂಡು ಉರುಳಾಗಿ ಪರಿಣಮಿಸಿ ಮಕ್ಕಳು ಧಾರುಣವಾಗಿ ಸಾವನಪ್ಪಿರುವ ಘಟನೆಗಳುನಡೆದಿದ್ದು, ಮಕ್ಕಳು ಉಯ್ಯಾಲೆ ಆಟವಾಡಲು ಸೀರೆ, ವೇಲ್‌, ಇತರ ಯಾವುದೇ ರೀತಿಯ ಬಟ್ಟೆ, ಹಗ್ಗ, ವೈರ್‌ ಇತ್ಯಾದಿ ಉಯ್ಯಾಲೆ ಆಡುವಾಗ ಅಪಾಯಕಾರಿಯಾಗಿ ಪರಿಣಮಿಸುವ ಯಾವುದೇ ವಸ್ತುಗಳನ್ನು ಉಪಯೋಗಿಸದಂತೆ ಪೋಷಕರು ತಮ್ಮ ಮಕ್ಖಳಿಗೆ ತಿಳುವಳಿಕೆ ನೀಡಿ ಎಚ್ಚರ ವಹಿಸುವಂತೆ ಕೋರಲಾಗಿದೆ. ಹಾಗೂ ಮಕ್ಳಳು ನೀರು ಸಂಗ್ರಹ ಸ್ಥಳಗಳು,  ಕೆರೆ-ಕಟ್ಟೆ, ಬಾವಿಗಳ ಸಮೀಪ ಆಟವಾಡುವಾಗ ಎಚ್ಚರಿಕೆ ವಹಿಸುವಂತೆ, ಬೆಂಕಿ, ವಿದ್ಯುತ್‌ ಉಪಕರಣಗಳನ್ನು ಉಪಯೋಗಿಸುವಾಗ ಸದಾ ಎಚ್ಚರಿಕೆಯಿಂದ ಇರುವಂತೆ ತಿಳುವಳೆಕೆ ನೀಡಲು ಕೋರಲಾಗಿದೆ.

ಇತ್ತೀಚಿನ ನವೀಕರಣ​ : 01-07-2021 07:41 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ