ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 31-07-2021 ರಂದು ಕುಶಾಲನಗರ ತಾಲ್ಲೂಕು ಗುಡ್ಡೆಗೊಸೂರು ಗ್ರಾಮದ ಬಳಿ ಹೆದ್ದಾರಿ ರಸ್ತೆಯಲ್ಲಿ ಕೆಎ-12-ಯು-6897 ರ ಬೈಕನ್ನು ಅದರ ಸವಾರ ಚಂದು ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ಡಿಕ್ಕಿಪಡಿಸಿದ ಪರಿಣಾಮ ಮಹಿಳೆ ಮತ್ತು ಸ್ಕೂಟರ್‌ ಸವಾರ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ದೂರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 31-07-2021 ರಂದು ವಿರಾಜಪೇಟೆ ಪಟ್ಟಣದ ಗೋಣಿಕೊಪ್ಪ ರಸ್ತೆಯಲ್ಲಿ ಕೆಎ-12-ಆರ್-7459 ರ ಬೈಕನ್ನು ಅದರ ಸವಾರ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-12-ಎಸ್-9459‌ ರ ಬೈಕ್‌ ಗೆ ಡಿಕ್ಕಿಪಡಿಸಿದ ಪರಿಣಾಮ ಸವಾರ ರಕ್ಷಿತ್‌ ಎಂಬುವವರು ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ದೂರಿನ ಮೇರೆ ವಿರಾಜಪೇಟೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

            ದಿನಾಂಕ: 31-07-2021 ರಂದು ಕುಶಾಲನಗರ ತಾಲ್ಲೂಕು ಹಕ್ಕೆ ಗ್ರಾಮದ ನಿವಾಸಿ ಚಲುವರಾಜ್‌ ಎಂಬುವವರಿಗೆ ಅದೇ ಗ್ರಾಮದ ನಿವಾಸಿ ಗುರುರಾಘವೇಂದ್ರ ಮತ್ತು ಮನೆಯವರು ಕ್ಷುಲ್ಲಕ ಕಾರಣಕ್ಕೆ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕೊಲೆ ಪ್ರಕರಣ

            ದಿನಾಂಕ: 29-07-2021 ರಂದು ವಿರಾಜಪೇಟೆ ತಾಲ್ಲೂಕುಬಾಳುಗೋಡು ಗ್ರಾಮದ ನಿವಾಸಿ ಮಾಧವನ್‌ ಎಂಬುವವರು ರಾಜಪ್ಪ ಎಂಬುವವರ ತೋಟದಲ್ಲಿ ಪುನರ್ಪುಳಿ ಕುಯ್ಯುತ್ತಿರುವಾಗ ಉದಯ ಎಂಬುವವರು ತನ್ನ ಕೈಯ್ಯಲ್ಲಿದ್ದ ಕೋವಿಯಿಂದ ಮಾಧವನ್‌ ರವರಿಗೆ ಗುಂಡು ಹೊಡೆದು ಕೊಲೆ ಮಾಡಿ ಮೃತ ದೇಹವನ್ನು ಪಕ್ಕದಲ್ಲಿ ಹಿರಿಯುತ್ತಿದ್ದ ತೋಡಿನ ಬಳಿ ತೆಗೆದುಕೊಂಡು ಹೋಗಿ ಹಾಕಿದ್ದು ಈ ಬಗ್ಗೆ ಮೃತರ ಪತ್ನಿ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 01-08-2021 04:26 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ