ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 30-09-2021 ರಂದು ಮಡಿಕೇರಿ ನಗರದ ರಾಜಾಸೀಟು ಬಳಿ ಮುಖ್ಯ ರಸ್ತೆಯಲ್ಲಿ ಜಿತನ್‌ ಎಂಬುವವರು ಹೊಸ ಬೈಕೊಂದನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆಬದಿಯಲ್ಲಿದ್ದ ರಮ್ಯಶ್ರೀ ಎಂಬುವವರಿಗೆ ಡಿಕ್ಕಿಪಡಿಸಿದ ಪರಿಣಾಮ ಜೊತೆಯಲ್ಲಿದ್ದ ಮಗ ಅರ್ಜುನ್‌ ಮತ್ತು ಬೈಕ್‌ನಲ್ಲಿ ಕುಳಿತಿದ್ದ ಹಿಂಬದಿ ಸವಾರ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಳವು ಪ್ರಕರಣ

            ದಿನಾಂಕ: 23-09-2021 ರಿಂದ 24-09-2021 ರ ನಡುವೆ ಮಡಿಕೇರಿ ತಾಲ್ಲೂಕು ಅಯ್ಯಂಗೇರಿ ಗ್ರಾಮದ ನಿವಾಸಿ ಹೇಮಾವತಿ ಎಂಬುವರ ಮನೆಯಯಲ್ಲಿ ಚೀಲದಲ್ಲಿ ತುಂಬಿಸಿ ಇಟ್ಟಿದ್ದ ಅಂದಾಜು ₹. 80,000 ಮೌಲ್ಯದ ಕಾಳು ಮೆಣಸನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಭಾಗಮಂಡಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ,

 ಗಾಂಜಾ ಸೇವನೆ ಪ್ರಕರಣ

            ದಿನಾಂಕ: 29-09-2021 ರಂದು ಮಡಿಕೇರಿ ತಾಲ್ಲೂಕು ಬಾವಲಿ ಗ್ರಾಮದ ಮೂಕೊಂಡ ಬಾಣೆ ಬಳಿ ಬಸ್‌ ತಂಗುದಾಣದ ಬಳಿ ನಾಪೋಕ್ಲು ಗ್ರಾಮದ ಇಂದಿರಾನಗರ ನಿವಾಸಿ ಮನ್ಸೂರ್‌ ಎಂಬುವವನು ಗಾಂಜಾ ಸೇವನೆ ಮಾಡಿದ್ದ ಬಗ್ಗೆ ಪರೀಕ್ಷೆಗೆ ಒಳಪಡಿಸಿ ಗಾಂಜಾ ಸೇವನೆ ದೃಡಪಟ್ಟಿದ್ದರಿಂದ ನಾಪೋಕ್ಲು ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಕೊಲೆ ಯತ್ನ ಪ್ರಕರಣ

            ದಿನಾಂಕ: 30-09-2021 ರಂದು ಸಿದ್ದಾಪುರ ಠಾಣಾ ಸರಹದ್ದಿನ ನೆಲ್ಯಹುದಿಕೇರಿ ಗ್ರಾಮದ ಎಂ.ಜಿ ಕಾಲೋನಿ ನಿವಾಸಿ ಸುಮಿತ್ರ ಎಂಬುವವರಿಗೆ ಅದೇ ಗ್ರಾಮದ ಗೋಮಾಳ ಪೈಸಾರಿ ನಿವಾಸಿ ಕುಮಾರ ಎಂಬುವವನು ಕೊಲೆ ಮಾಡುವ ಉದ್ದೇಶದಿಂದ ಕತ್ತಿಯಿಂದ ಹಲ್ಲೆ ಮಾಡಿ ಮಾರಣಾಂತಿಕ ಗಾಯಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸಿದ್ದಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಎಸ್‌.ಐ ಹುದ್ದೆ ಕೊಡಿಸುವ ನೆಪದಲ್ಲಿ ವಂಚನೆ ಪ್ರಕರಣ

            ಮಡಿಕೇರಿ ನಗರದ ಕನ್ನಿಕ ಬಡಾವಣೆ ನಿವಾಸಿ ನಾರಾಯಣ ಎಂಬುವವರಿಗೆ ಅವರ ಮಗ ಕಾರ್ತಿಕ್‌ ಎಂಬುವವನಿಗೆ ಪೊಲೀಸ್‌ ಇಲಾಖೆಯಲ್ಲಿ ಎಸ್‌.ಐ ಹುದ್ದೆ ಕೊಡಿಸುವುದಾಗಿ ನಂಬಿಸಿ ಪುತ್ತೂರು ನಿವಾಸಿ ಪುನೀತ್‌ ಎಂಬುವವನು ದಿನಾಂಕ: 22-11-2020 ರಿಂದ ಹಂತ ಹಂತವಾಗಿ ಒಟ್ಟು ₹. 22,00,000 ಹಣ ಪಡೆದು  ನಕಲಿ ನೇಮಕಾತಿ ಆದೇಶ ನೀಡಿ ವಂಚನೆ ಮಾಡಿದ್ದು ಈ ಬಗ್ಗೆ ದಿನಾಂಕ 30.09.2021 ರಂದು ನೀಡಿದ ಪುಕಾರಿನ ಮೇರೆ ಮಡಿಕೇರಿ ನಗರ ಠಾಣೆ ಪೊಲೀಸಲು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ಧಾರೆ.

ಇತ್ತೀಚಿನ ನವೀಕರಣ​ : 01-10-2021 01:00 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080