ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 01-07-2021 ರಂದು ಪೊನ್ನಂಪೇಟೆ ತಾಲ್ಲೂಕು ತಾವಳಗೇರಿ ಗ್ರಾಮದ ಬಳಿ ರಸ್ತೆಯಲ್ಲಿ ಕೆಎ-12-ಜೆಡ್‍-4240 ರ ಓಮ್ನಿ ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-51-ಎ-2584 ರ ಲಾರಿಗೆ ಡಿಕ್ಕಿಪಡಿಸಿದ ಪರಿಣಾಮ ಕಾರು ಚಾಲಕ ಮತ್ತು ಓರ್ವ ಪ್ರಯಾಣಿಕ ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಶ್ರೀಮಂಗಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಬೈಕ್‍ ಕಳವು ಪ್ರಕರಣ

            ದಿನಾಂಕ: 27-06-2021 ರಂದು ಸೋಮವಾರಪೇಟೆ ತಾಲ್ಲೂಕು ನೆಲ್ಯಹುದಿಕೇರಿ ಗ್ರಾಮದ ನಿವಾಸಿ ಮಹಮ್ಮದ್ ತಾನ್ಸೀರ್ ಎಂಬುವವರು ಅವರ ಮನೆಯ ಮುಂದೆ ನಿಲ್ಲಿಸಿದ್ದ ಕೆಎ-12-ಎಸ್‍-8200 ರ ಬಜಾಜ್ ಪಲ್ಸರ್ ಬೈಕನ್ನು ಯಾರೋ ಕಳ್ಳರುಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ದಿನಾಂಕ; 01-07-2021 ರಂದು ನೀಡಿದ ಪುಕಾರಿನ ಮೇರೆ ಸಿದ್ದಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಲಾಕ್‌ ಡೌನ್‌ ನಿಯಮ ಉಲ್ಲಂಘನೆ ಪ್ರಕರಣ

                ದಿನಾಂಕ: 01.07.2021 ರಂದು ಸೋಮವಾರಪೇಟೆ ತಾಲ್ಲೂಕು 7ನೇ ಹೊಸಕೋಟೆ ಗ್ರಾಮದಲ್ಲಿರುವ ಕೂರ್ಗ್‍ ಕಾಫಿ ಫ್ಲವರ್‍ ಎಂಬ ರೆಸಾರ್ಟ್‍ ನಲ್ಲಿ  ಮಾಲೀಕ ಕಾವೇರಪ್ಪ  ಎಂಬುವವರು ಪ್ರವಾಸಿಗರಿಗೆ ತಂಗುವ ವ್ಯಸ್ಥೆಯನ್ನು ಮಾಡಿ, ಸಾಂಕ್ರಾಮಿಕ ರೋಗ ಹರಡುವ ಸಂಭವವಿದ್ದರೂ ಸಹಾ ಕೋವಿಡ್‍-19 ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗಟ್ಟಲು ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿ ಉಲ್ಲಂಘಿಸಿರುವ ಬಗ್ಗೆ ಪಂಚಾಯಿತಿ ಅಧಿಕಾರಿಗಳು ಪರಿಶೀಲನೆ ಮಾಡಿ ನೀಡಿದ ವರದಿ ಮೇರೆ ಸುಂಟಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಲಾಕ್‌ ಡೌನ್‌ ನಿಯಮ ಉಲ್ಲಂಘನೆ ಪ್ರಕರಣ

                ದಿನಾಂಕ: 01.07.2021 ರಂದು ವಿರಾಜಪೇಟೆ ಪಟ್ಟಣದಲ್ಲಿರುವ ಕಾವೇರಿ ಲಾಡ್ಜ್ ನ ಮಾಲೀಕರು ಪ್ರವಾಸಿಗರಿಗೆ ತಂಗುವ ವ್ಯಸ್ಥೆಯನ್ನುಮಾಡಿದ್ದು  ಸಾಂಕ್ರಾಮಿಕ ರೋಗ ಹರಡುವ ಸಂಭವವಿದ್ದರೂ ಸಹಾ ಕೋವಿಡ್‍-19 ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗಟ್ಟಲು ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿ ಉಲ್ಲಂಘಿಸಿರುವ ಬಗ್ಗೆ ವಿರಾಜಪೇಟೆ ನಗರ ಠಾಣೆ ಪಿಎಸ್‍ಐ ರವರು  ಸಭೆ ಪರಿಶೀಲನೆ ಮಾಡಿ ನೀಡಿದ ವರದಿ ಮೇರೆ ಮಡಿಕೇರಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 02-07-2021 05:01 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ