ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ          

            ದಿನಾಂಕ: 01.09.2021 ರಂದು ಪೊನ್ನಂಪೇಟೆ ತಾಲ್ಲೂಕು ಹೈಸೊಡ್ಲೂರು ಗ್ರಾಮದ ಬಳಿ ಸಾರ್ವಜನಿಕ ರಸ್ತೆಯಲ್ಲಿ ಕೆಎ-12-ಎ-5229 ರ ಲಾರಿಯನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ಲಾರಿ ಮಗುಚಿ ಬಿದ್ದುದರಿಂದ ಲಾರಿಯ ಹಿಂದೆ ಕುಳಿತಿದ್ದ ಬಿಮಲ್‍ ರಾಯ್‍ ಮತ್ತು ದುಲಾಲ್ ರಾಯ್‍ ಎಂಬುವವರ ಮೇಲೆ ಲಾರಿ ಬಿದ್ದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದು ಈ ಬಗ್ಗೆ ನೀಡಿದ ದೂರಿನ ಮೇರೆ ಶ್ರೀಮಂಗಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಕೋವಿಡ್‍ ನಿಯಮ ಉಲ್ಲಂಘನೆ ಪ್ರಕರಣ.

            ದಿನಾಂಕ: 01-09-2021 ರಂದು ಮಡಿಕೇರಿ ನಗರದ ಕೋವಿಡ್‍ ಆಸ್ಪತ್ರೆ ಆವರಣದಲ್ಲಿ ಕೋವಿಡ್‍-19 ಸಂಬಂಧ ನೀಡಲಾಗಿರುವ ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿ ಗುಂಪು ಸೇರಿ ಯಾ ವುದೇ ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿದ ಸಂಬಂಧ ನಗರ ಸಭೆ ಅಧಿಕಾರಿಗಳು ಪರಿಶೀಲನೆ ಮಾಡಿ ನೀಡಿದ ವರದಿ ಮೇರೆ ಕೊಡಗು ಜಿಲ್ಲಾ ರಕ್ಷಣಾ ವೇದಿಕೆ ಸದಸ್ಯರ ವಿರುದ್ದ ಮಡಿಕೇರಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಮನೆ ಕಳವು ಪ್ರಯತ್ನ ಪ್ರಕರಣ

            ದಿನಾಂಕ: 25-08-2021 ರಿಂದ 01-09-2021 ರ ನಡುವಿನ ದಿನಗಳಲ್ಲಿ ಪೊನ್ನಂಪೇಟೆ ತಾಲ್ಲೂಕು ಹಾತೂರು ಬೈಗೋಡು ಗ್ರಾಮದ ನಿವಾಸಿ ಮಾಚಯ್ಯ ಎಂಬುವವರಿಗೆ ಸೇರಿದ ಮನೆಯ ಬಾಗಿಲಿಗೆ ಹಾಕಿದ್ದ ಬೀಗವನ್ನು ಯಾರೋ ಕಳ್ಳರು ಒಡೆದು ಒಳನುಗ್ಗಿ ಕಳ್ಳತನ ಮಾಡಲು ಪ್ರಯತ್ನಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಇತ್ತೀಚಿನ ನವೀಕರಣ​ : 02-09-2021 03:01 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ