ಅಭಿಪ್ರಾಯ / ಸಲಹೆಗಳು

ಹಲ್ಲೆ ಪ್ರಕರಣ

                ದಿನಾಂಕ 01-11-2021 ರಂದು ಸೋಮವಾರಪೇಟೆ ತಾಲ್ಲೂಕು ಗರಗಂದೂರು ಗ್ರಾಮದ ನಿವಾಸಿ ರಮ್ಯಶ್ರೀ ಎಂಬುವವರಿಗೆ ಅದೇ ಗ್ರಾಮದ ನಿವಾಸಿ ರಮೇಶ್‌ ಎಂಬುವವರು ವಿನಾ ಕಾರಣ ಕತ್ತಿಯಿಂದ ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸುಂಟಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

                ದಿನಾಂಕ: 01-11-2021 ರಂದು ಕುಶಾಲನಗರ ತಾಲ್ಲೂಕು ತೊರೆನೂರು ನಿವಾಸಿ ಶಿವಾನಂದ ಎಂಬುವವರಿಗೆ ಅದೇ ಗ್ರಾಮದ ನಿವಾಸಿ ಶಿವಕುಮಾರ್‌ ಎಂಬುವವರು    ವಿನಾ ಕಾರಣ ಜಗಳ ತೆಗೆದು ಅವಾಚ್ಯ ಪದಗಳಿಂದ ಬೈದು ಕಲ್ಲಿನಿಂದ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕೊಲೆ ಯತ್ನ ಪ್ರಕರಣ

                ದಿನಾಂಕ: 01-11-2021 ರಂದು ಮಡಿಕೇರಿ ತಾಲ್ಲೂಕು ದೇವಸ್ತೂರು ಗ್ರಾಮದ ನಿವಾಸಿ ಸುಜಿತ್‌ ಎಂಬುವವರು ಅವರ ಸ್ನೇಹಿತರೊಂದಿಗೆ ಮಾತನಾಡಿಕೊಂಡಿರುವಾಗ ಭೀಮಯ್ಯ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಕೋವಿಯಿಂದ ಬೆನ್ನಿಗೆ ಗುಂಡುಹೊಡೆದು ಕೊಲೆ ಮಾಡಲು ಪ್ರಯತ್ನಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

                ದಿನಾಂಕ: 01-11-2021 ರಂದು ವಿರಾಜಪೇಟ ಪಟ್ಟಣದ ಶಿವಕೇರಿ ನಿವಾಸಿ ವಿಶ್ವನಾಥ್‌ ಎಂಬುವವರು ಆಟೋ ರಿಕ್ಷಾ ಬಾಡಿಗೆಗೆ ಚಾಲನೆ ಮಾಡಿಕೊಂಡಿದ್ದು ರಾತ್ರಿ ಪಟ್ಟಣದ ಮೂರ್ನಾಡು ಜಂಕ್ಷನ್‌ ಬಳಿ ಆಟೋ ನಿಲ್ಲಿಸಿ ಅಂಗಡಿಯ ಬಳಿ ನಿಂತಿರುವಾಗ ಅಪರಿಚಿತ ವ್ಯಕ್ತಿಯೊಬ್ಬ ಬಂದು ಅವಾಚ್ಯ ಪದಗಳಿಂದ ಬೈದು ಏಕಾಏಕಿ ಕೈಯಿಂದ ಮುಖಕ್ಕೆ ಹಲ್ಲೆ ಮಾಡಿ ಹಲ್ಲು ಮುರಿದಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 02-11-2021 02:52 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080