ಅಭಿಪ್ರಾಯ / ಸಲಹೆಗಳು

ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ಉದ್ಯೋಗ ಪಡೆದು ವಂಚನೆ ಪ್ರಕರಣ

                2019 ನೇ ಸಾಲಿನಲ್ಲಿ ಅಂಚೆ ಇಲಾಖೆಯು ಬ್ರಾಂಚ್ ಪೋಸ್ಟ್‍ ಮಾಸ್ಟರ್‍ ಹುದ್ದೆಗೆ ನಡೆಸಿದ ನೇಮಕಾತಿಯಲ್ಲಿ ಸೋಮವಾರಪೇಟೆ ತಾಲ್ಲೂಕು ಕಾರೆಕಾಡು, ಜಂಬೂರು  ಗ್ರಾಮದ ನಿವಾಸಿ ಸಂದೇಶ್ ಎಂಬುವವರು ಅರ್ಜಿ ಸಲ್ಲಿಸಿ ನೇಮಕಾತಿ ಸಮಯದಲ್ಲಿ ಹೆಚ್ಚು ಅಂಕ ನಮೂದಿಸಿದ 10 ನೇ ತರಗತಿಯ ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದು ವಂಚನೆ ಮಾಡಿದ್ದು ಈ ಬಗ್ಗೆ ದಿನಾಂಕ 02-02-2022 ರಂದು ಅಂಚೆ ಇಲಾಖೆ ಅಧಿಕಾರಿಗಳು ನೀಡಿದ ಪುಕಾರಿನ ಮೇರೆ ಮಡಿಕೇರಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

                ದಿನಾಂಕ: 31.01.2021 ರಂದು ವಿರಾಜಪೇಟೆ ತಾಲ್ಲೂಕು ಹಳೆ ಸಿದ್ದಾಪುರ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಎಚ್-9685 ರ ಮೋಟಾರ್ ಸೈಕಲನ್ನು ಸವಾರ ಪುರುಷೋತ್ತಮ್‍ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಚಂದ್ರನ್‍ ಎಂಬುವವರಿಗೆ ಡಿಕ್ಕಿಪಡಿಸಿದ ಪರಿಣಾಮ ಚಂದ್ರನ್ ಮತ್ತು ಬೈಕ್‍ ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆಯೊಬ್ಬರು ಸಹ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸಿದ್ದಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಅಕ್ರಮ ಗಾಂಜಾ ಮಾರಾಟ ಪ್ರಕರಣ

          ದಿನಾಂಕ 02-02-2022 ರಂದು ವಿರಾಜಪೇಟೆ ಪಟ್ಟಣದ  ಮಗ್ಗುಲ ಗ್ರಾಮದ ಬಳಿ ಬೈಕ್‌ ನಲ್ಲಿ  6 ಜನ ಯುವಕರು ಅಕ್ರಮವಾಗಿ ಸಾರ್ವಜನಿಕರಿಗೆ ಮಾರಾಟ ಮಾಡಲು ಗಾಂಜಾ ಇಟ್ಟುಕೊಂಡಿದ್ದ ಪ್ರಕರಣವನ್ನು ವಿರಾಜಪೇಟೆ ನಗರ ಠಾಣೆ ಪಿಎಸ್‍ಐ ಜಗದೀಶ್ ಧೂಳಶೆಟ್ಟಿ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಅಕ್ರಮ ಮರಳು ಸಾಗಾಟ ಪ್ರಕರಣ

            ದಿನಾಂಕ: 02-02-2022 ರಂದು ವಿರಾಜಪೇಟೆ ತಾಲ್ಲೂಕು ಅರಪಟ್ಟು ಗ್ರಾಮದ ನಿವಾಸಿ ನಂದಕುಮಾರ್ ಎಂಬುವವರು ಕಡಂಗ  ಗ್ರಾಮದ ಬಳಿ ಪಿಕ್‌ ಅಪ್‌ ವಾಹನ ಸಂಖ್ಯೆ ಕೆಎ-12-9215 ರಲ್ಲಿ ಅಕ್ರಮವಾಗಿ ಮರಳನ್ನು ತೆಗೆದು ತುಂಬಿಸಿಕೊಂಡು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ಗ್ರಾಮಾಂತರ ಠಾಣೆ ಪಿಎಸ್‌ಐ ಸಿದ್ದಲಿಂಗ ಬಾನಸೆ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 03-02-2022 04:44 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080