ಅಭಿಪ್ರಾಯ / ಸಲಹೆಗಳು

ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ

                ದಿನಾಂಕ: 02-05-2021 ರಂದು ಪೊನ್ನಂಪೇಟೆ ತಾಲ್ಲೂಕು ಸಹಾಯಕ ತಹಸೀಲ್ದಾರ್‍ ರವರು ‍ಫ್ಲೈಯಿಂಗ್ ಸ್ಕ್ವಾಡ್ ಕರ್ತವ್ಯದಲ್ಲಿದ್ದು ಸಾರ್ವಜನಿಕರು ಕೋವಿಡ್‍-19 ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗಟ್ಟಲು ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿಗಳನ್ನು ಪಾಲನೆ ಮಾಡುತ್ತಿರುವ ಬಗ್ಗೆ ಪರಿಶೀಲನೆ ಮಾಡುವಾಗ ವ್ಯಾಪಾರ ಮಾಡು ಉದ್ದೇಶದಿಂದ ಪೊನ್ನಂಪೇಟೆ ಗ್ರಾಮದ ಭೂಮಿಕಾ ಎಂಟರ್‍ ಪ್ರೈಸಸ್ ಬಟ್ಟೆ ಅಂಗಡಿಯ ಬಾಗಿಲನ್ನು  ಅರ್ಧ ತೆರೆದು ಕೋವಿಡ್ ನಿಯಮ ಉಲ್ಲಂಘಿಸಿದ್ದು ಈ ಬಗ್ಗೆ ನೀಡಿದ ದೂರಿನ ಮೇರೆ ಪೊನ್ನಂಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

                ದಿನಾಂಕ: 02-05-2021 ರಂದು ವಿರಾಜಪೇಟೆ ತಾಲ್ಲೂಕು ಪಾಲಿಬೆಟ್ಟ ಗ್ರಾಮದ ತಿತಿಮತಿ ರಸ್ತೆಯಲ್ಲಿ ಕೆಎ-12-ಪಿ-3903 ರ ಕಾರನ್ನು ಸೂರ್ಯನಾರಾಯಣ  ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಪಡಿಸಿದ ಪರಿಣಾಮ ಕಾರಿನಲ್ಲಿದ್ದ ಚಾಲಕನ ಸಹೋದರಿ ಗಾಯಗೊಂಡಿದ್ದು ಈ ಬಗ್ಗೆ ಬೊಸ್‍ ಎಂಬುವವರು ನೀಡಿದ ದೂರಿನ ಮೇರೆ ಸಿದ್ದಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

                ದಿನಾಂಕ: 02-05-2021 ರಂದು ಮಡಿಕೇರಿ ತಾಲ್ಲೂಕು ಕಡಗದಾಳು  ಗ್ರಾಮದ  ನಿವಾಸಿ  ಸುರೇಶ್  ಎಂಬುವವರು  ಅವರ  ಮನೆಯ ಮುಂಭಾಗದ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಸಾರ್ವಜನಿಕರಿಗೆ ಮದ್ಯ ಮಾರಾಟ  ಮಾಡುತ್ತಿದ್ದ ಪ್ರಕರಣವನ್ನು ಮಡಿಕೇರಿ ಗ್ರಾಮಾಂತರ ಠಾಣೆ ಪಿಐ ರವಿಕಿರಣ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

 

ಇತ್ತೀಚಿನ ನವೀಕರಣ​ : 04-05-2021 06:11 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ