ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 02-05-2022 ರಂದು ಪೊನ್ನಂಪೇಟೆ ತಾಲ್ಲೂಕು ತಾವಳಗೇರಿ ಗ್ರಾಮದ ಬಳಿ ಸಾರ್ವಜನಿಕ ರಸ್ತೆಯಲ್ಲಿ ಕೆಎ-12-ಬಿ-8500 ಗೂಡ್ಸ್‌ ವಾಹನವನ್ನು ಚಾಲಕ ಗಣೇಶ್‌ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕರಿಯ ಎಂಬುವವರಿಗೆ ಡಿಕ್ಕಿಪಡಿಸಿದ ಪರಿಣಾಮ ಬಿದ್ದು ಗಾಯಗೊಂಡವರನ್ನು ಚಿಕಿತ್ಸೆಗೆ ಆಸ್ಪತ್ರಗೆ ದಾಖಲಿಸಿದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಶ್ರೀಮಂಗಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

          ದಿನಾಂಕ: 02-05-2022 ರಂದು ಸೋಮವಾರಪೇಟೆ ತಾಲ್ಲೂಕು ಶನಿವಾರಸಂತೆ ಗೋಪಾಲಪುರ ಗ್ರಾಮದ ನಿವಾಸಿ ಮದನ್‌ ಮತ್ತು ಪುಟ್ಟಸ್ವಾಮಿ ಎಂಬುವವರು ಅಂಗಡಿ ಮಳಿಗೆಯ ಮುಂದಿನ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಸಾರ್ವಜನಿಕರು ಮದ್ಯಸೇವನೆ ಮಾಡಲು ಅವಕಾಶ ಮಾಡಿಕೊಡುತ್ತಿದ್ದ ಪ್ರಕರಣವನ್ನು ಶನಿವಾರಸಂತೆ ಠಾಣೆ ಪಿಎಸ್‌ಐ ಗೋವಿಂದರಾಜು ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ರಸ್ತೆ ಅಪಘಾತ ಪ್ರಕರಣ

            ದಿನಾಂಕ: 02-05-2022 ರಂದು ಗೋಣಿಕೊಪ್ಪ ನಗರದ ವಿರಾಜಪೇಟೆ ಮುಖ್ಯ ರಸ್ತೆಯಲ್ಲಿ ಕೆಎ-04-ಎನ್-0239‌ ರ ಕಾರನ್ನು ಚಾಲಕ ಭಜನ್‌ ದೇವಯ್ಯ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ಬದಿಯಲ್ಲಿ ನಿಂತಿದ್ದ ಕೆಎ-12-ಎನ್-5161 ರ ಕಾರಿಗೆ ಡಿಕ್ಕಿಪಡಿಸಿದ ಪರಿಣಾಮ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಮೃತಪಟ್ಟಿದ್ದು ಈ ಬಗ್ಗೆ ಘಟನೆ ಸ್ಥಳದ ಬಳಿ ಕರ್ತವ್ಯದಲ್ಲಿದ್ದ ಪೊಲೀಸ್‌ ಅಧಿಕಾರಿಯವರು ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಳವು ಪ್ರಕರಣ

            ದಿನಾಂಕ: 02-04-2022 ರಂದು ಸೊಮವಾರಪೇಟೆ ಪಟ್ಟಣದ ಬಾಣಾವರ ರಸ್ತೆಲ್ಲಿರುವ ರಮೇಶ್‌ ಎಂಬುವವರ ಮನೆಯ ಕಿಟಕಿಯ ಸರಳುಗಳನ್ನು ಯಾರೋ ಕಳ್ಳರು ಮುರಿದು ಒಳನುಗ್ಗಿ ₹. 50,000 ಮೌಲ್ಯದ ಚಿನ್ನಾಭರಣ ಮತ್ತು ₹. 10,000 ನಗದು ಹಣವನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಇತ್ತೀಚಿನ ನವೀಕರಣ​ : 03-05-2022 01:16 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080