ಅಭಿಪ್ರಾಯ / ಸಲಹೆಗಳು

ಕೊಲೆ ಯತ್ನ ಪ್ರಕರಣ

            ದಿನಾಂಕ; 01-08-2021 ರಂದು ರಾತ್ರಿ ಕುಶಾಲನಗರ ನಿವಾಸಿಗಳಾದ ಸಾಗರ್‌ ಮತ್ತು ಚೇತನ್‌ ಎಂಬುವವರು ಸ್ಕೂಟರ್‌ ನಲ್ಲಿ ಹೋಗುತ್ತಿರುವಾಗ ಮುಳ್ಳುಸೋಗೆ ನಿವಾಸಿ ರಾಜೇಶ್‌ ಎಂಬುವವರ ಕುಮ್ಮಕ್ಕಿನಿಂದ ಅಪ್ಪು@ ನವೀನ್‌ ಹಾಗೂ ಮತ್ತಿಬ್ಬರು ಕೆಎ-03-ಎಂಇ-7123 ರ ಕಾರಿನಲ್ಲಿ ಹೋಗಿ ಸ್ಕೂಟರ್‌ಗೆ ಡಿಕ್ಕಿಪಡಿಸಿ ಬೀಳಿಸಿ ಕೊಲೆ ಮಾಡುವ ಉದ್ದೇಶದಿಂದ ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಳವು ಪ್ರಕರಣ

            ದಿನಾಂಕ: 25-07-2021 ರಂದು ಮಡಿಕೇರಿ ನಗರದ ಮಹದೇವಪೇಟೆ ನಿವಾಸಿ ವಿನೋದ್‌ ಕುಮಾರ್‌ ಎಂಬುವವರು ಅವರ ಅಂಗಡಿಯ ಮುಂದೆ ನಿಲ್ಲಿಸಿದ್ದ ಕೆಎ-12-ಕೆ-7392 ರ ಸ್ಕೂಟರನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ದಿನಾಂಕ: 02-08-2021 ರಂದು ನೀಡಿದ ಪುಕಾರಿನ ಮೇರೆ ಮಡಿಕೇರಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

            ದಿನಾಂಕ: 02-08-2021 ರಂದು ಕುಶಾಲನಗರ ತಾಲ್ಲೂಕು ಚಿಕ್ಕಾಳುವಾರ ಗ್ರಾಮದ ನಿವಾಸಿ ನಾಗೇಶ್‌ ಮತ್ತು ಅವರ ತಾಯಿಯವರಿಗೆ ಅದೇ ಗ್ರಾಮದ ನಿವಾಸಿಗಳಾದ ಅರುಣ್‌ ಕುಮಾರ್‌ ಮತ್ತು ಅವರ ತಾಯಿ ಕ್ಷುಲ್ಲಕ ಕಾರಣಕ್ಕೆ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 03-08-2021 05:50 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ