ಅಭಿಪ್ರಾಯ / ಸಲಹೆಗಳು

ಅಕ್ರಮ ಜೂಜಾಟ ಪ್ರಕರಣ

            ದಿನಾಂಕ: 01-03-2021 ರಂದು ಸೋಮವಾರಪೇಟೆ ತಾಲ್ಲೂಕು ಅಂಕನಹಳ್ಳಿ  ಗ್ರಾಮದ  ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಇಸ್ಪೀಟ್‍ ಜೂಜಾಟವಾಡುತ್ತಿದ್ದ ಪ್ರರಕಣವನ್ನು ಶನಿವಾರಸಂತೆ ಠಾಣೆ ಎ.ಎಸ್.ಐ ಹೆಚ್.ಎಂ ಗೋವಿಂದ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಜೂಜಾಟಕ್ಕೆ ಉಪಯೋಗಿಸಿದ ನಗದು ಹಣ, ಇಸ್ಪೀಟ್‍ ಕಾರ್ಡ್‍ ವಶಕ್ಕೆ ಪಡೆದು ಶರತ್, ಪ್ರಸನ್ನ, ಕುಮಾರ, ಷಣ್ಮುಖ, ನಿಂಗಯ್ಯ, ಮಂಜು, ತೋಟಪ್ಪ ಎಂಬುವವರ ವಿರುದ್ದ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

 

ಮರದಿಂದ ಬಿದ್ದು ವ್ಯಕ್ತಿ ಸಾವು

        ದಿನಾಂಕ; 02-03-2021 ರಂದು ಸೋಮವಾರಪೇಟೆ ತಾಲ್ಲೂಕು ಯಡವನಾಡು ಗ್ರಾಮದ ನಿವಾಸಿ ತೀರ್ಥನ ಎಂಬುವವರು ಸುರೇಶ್‍ ಎಂಬುವವರು ತೊಟದಲ್ಲಿ ಸಪೋಟ ಮರದಿಂದ ಹಣ್ಣು ಕುಯ್ಯುತ್ತಿರುವಾಗ ಮರದ ರೆಂಬೆ ಮುರಿದು ಆಕಸ್ಮಿಕವಾಗಿ ಕೆಳಗೆ ಬಿದ್ದ ಪರಿಣಾಮ ಗಾಯಗೊಂಡವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ  ತೀರ್ಥನ ರವರು ಮೃತಪಟ್ಟಿದ್ದು ಈ ಬಗ್ಗೆ ಮೃತರ ಪತ್ನಿ ನೀಡಿದ ದೂರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

        ದಿನಾಂಕ: 03-03-2021 ರಂದು ವಿರಾಜಪೇಟೆ ತಾಲ್ಲೂಕು ಹೊಸೂರು ಗ್ರಾಮದ ನಿವಾಸಿಗಳಾಗದ ನಟರಾಜನ್‍, ಕೊಳಂದವೇಲು,ಜೋಸ್,ಸುರೇಂದ್ರ ಮತ್ತು ಲಕ್ಷ್ಮಣ ಹಾಗೂ ಇತರರು ಕಾಫಿ ಕುಯ್ಯುವ ವಿಚಾರದಲ್ಲಿ ವೈಷಮ್ಯದಿಂದ ಪರಸ್ಪರ ಹಲ್ಲೆ ಮಾಡಿಕೊಂಡು ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ಉಭಯಕಡೆಯವರು ನೀಡಿದ ಪುಕಾರಿನ ಮೇರೆ ಸಿದ್ದಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

        ದಿನಾಂಕ: 02-03-2021 ರಂದು ರಾತ್ರಿ ಸೋಮವಾರಪೇಟೆ ತಾಲ್ಲೂಕು ಮಲ್ಲೇನಹಳ್ಳಿ ಗ್ರಾಮದ ನಿವಾಸಿ ಸುರೇಶ್ ಎಂಬುವವರಿಗೆ ಅದೇ ಗ್ರಾಮದ ನಿವಾಸಿಗಳಾದ ಗೋವಿಂದರಾಜು  ಮತ್ತು ದೊರೆಸ್ವಾಮಿ ಎಂಬುವವರು ಹಳೆ ವೈಷಮ್ಯದಿಂದ ದೊಣ‍್ಣೆಯಿಂದ ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 04-03-2021 07:51 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ