ಅಭಿಪ್ರಾಯ / ಸಲಹೆಗಳು

ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ

                ದಿನಾಂಕ: 29-05-2021 ರಂದು ಪೊನ್ನಂಪೇಟೆ ತಾಲ್ಲೂಕು ಕೆ,ಬಾಡಗ ಗ್ರಾಮದ ನಾಣಚ್ಚಿ ನಿವಾಸಿ ಮಂಜುನಾಥ್‍ ಎಂಬುವವರ ಪತ್ನಿಯವರಿಗೆ ಕೋವಿಡ್‍ ಪಾಸಿಟಿವ್ ಆದ ಕಾರಣ ನಿಯಮಾನುಸಾರ ಅವರ ಮನೆಯನ್ನು ಕಂಟೈನ್‍ ಮೆಂಟ್‍ ಜೋನ್‍ ಮಾಡಿ ಮನೆಯಿಂದ ಯಾರೂ ಹೊರೆಗೆ ಹೋಗದಂತೆ ನಿರ್ದೇಶನ ನೀಡಿದ್ದರೂ ಸಹಾ ದಿನಾಂಕ: 03.05.2021 ರಂದು ಸಾರ್ವಜನಿಕರಿಂದ ಬಂದ ಮಾಹಿತಿ ಮೇರೆ ಪಂಚಾಯಿತಿ ಬಿಲ್‍ ಅಧಿಕಾರಿಗಳು ಮನೆಗೆ ತೆರಳಿ ಪರಿಶೀಲನೆ ಮಾಡಿದಾಗ ಮಂಜುನಾಥ್‍ ರವರು ಮನೆಯಲ್ಲಿ ಇಲ್ಲದೇ ಹನುಮಂತ ಸಾಬ್‍ ಎಂಬುವವರೊಂದಿಗೆ ಕಾರಿನಲ್ಲಿ ಹೆಚ್‍.ಡಿ ಕೋಟೆಗೆ ಹೋಗಿರುವುದು ಕಂಡು ಬಂದಿದ್ದು. ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿ ಕೋವಿಡ್‍-19 ಸಾಂಕ್ರಾಮಿಕ ರೋಗ ಹರಡುವ ಸಂಭವವಿದ್ದರೂ ಸಹಾ ನಿರ್ಲಕ್ಷತೆಯಿಂದ ಹೊರೆಗೆ ಹೋಗಿರುವ ಬಗ್ಗೆ ನೀಡಿದ ದೂರಿನ ಮೇರೆ ಕುಟ್ಟ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ

                ದಿನಾಂಕ: 03-05-2021 ರಂದು ಮಡಿಕೇರಿ ತಾಲ್ಲೂಕು ನಾಪೋಕ್ಲು ಗ್ರಾಮದಲ್ಲಿ ಸಫಾ ವೆಜಿಟೆಬಲ್ಸ್  ಅಂಗಡಿಯಲ್ಲಿ ಮಾಲೀಕರಾದ ಕಮರುದ್ದೀನ್  ಎಂಬುವವರು ಸಹಾ  ಸರ್ಕಾರದ ಮಾರ್ಗಸೂಚಿ ಪಾಲಿಸದೆ ಕೋವಿಡ್‍  ಸಾಂಕ್ರಾಮಿಕ ರೋಗ ಹರಡುವ ಸಂಭವವಿದ್ದರೂ ಸಾರ್ವಜನಿಕರು ಮಾಸ್ಕ್‍ ಧರಿಸದೇ , ಸಾಮಾಜಿಕ ಅಂತರ ಕಾಪಾಡಿಕೊಳ‍್ಳದೇ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡಿರುವುದು ಕಂಡು ಬಂದ ಮೇರೆ ಕಾನೂನು ಕ್ರಮ ಜರುಗಿಸಲು ನಾಪೋಕ್ಲು ಪಂಚಾಯಿತಿ ಅಧಿಕಾರಿ ನೀಡಿದ ದೂರಿನ  ಮೇರೆ ನಾಪೋಕ್ಲು ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ

                ದಿನಾಂಕ: 03-05-2021 ರಂದು ಮಡಿಕೇರಿ ತಾಲ್ಲೂಕು ನಾಪೋಕ್ಲು ಗ್ರಾಮದಲ್ಲಿ ಸಫಾ  ‍ದಿನಸಿ ಅಂಗಡಿಯಲ್ಲಿ ಮಾಲೀಕರಾದ ಹುಸೈನಾರ್ ಎಂಬುವವರು ಸಹಾ  ಸರ್ಕಾರದ ಮಾರ್ಗಸೂಚಿ ಪಾಲಿಸದೆ ಕೋವಿಡ್‍  ಸಾಂಕ್ರಾಮಿಕ ರೋಗ ಹರಡುವ ಸಂಭವವಿದ್ದರೂ ಸಾರ್ವಜನಿಕರು ಮಾಸ್ಕ್‍ ಧರಿಸದೇ , ಸಾಮಾಜಿಕ ಅಂತರ ಕಾಪಾಡಿಕೊಳ‍್ಳದೇ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡಿರುವುದು ಕಂಡು ಬಂದ ಮೇರೆ ಕಾನೂನು ಕ್ರಮ ಜರುಗಿಸಲು ನಾಪೋಕ್ಲು ಪಂಚಾಯಿತಿ ಅಧಿಕಾರಿ ನೀಡಿದ ದೂರಿನ  ಮೇರೆ ನಾಪೋಕ್ಲು ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

                ದಿನಾಂಕ: 03-05-2021 ರಂದು ವಿರಾಜಪೇಟೆ ಪಟ್ಟಣದ ಮಟನ್‍ ಮಾರ್ಕೆಟ್‍ ಬಳಿ ಮಂಜು  ಎಂಬುವವರು  ವರ ಬೈಕ್‍ ನಲ್ಲಿ ಮದ್ಯವನ್ನು ಇಟ್ಟುಕೊಂಡು ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಸಾರ್ವಜನಿಕರಿಗೆ ಮದ್ಯ ಮಾರಾಟ  ಮಾಡುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ಪಟ್ಟಣ ಠಾಣೆ ಪಿಎಸ್‍ಐ ಜಗದೀಶ್‍ ಧೂಳಶೇಟ್ಟಿ  ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಕರ್ತ್ಯವ್ಯ  ನಿರತ ವೈದ್ಯರ ಮೇಲೆ ಹಲ್ಲೆ ಪ್ರಕರಣ

                ದಿನಾಂಕ: 03-05-2021 ರಂದು ಪೊನ್ನಂಪೇಟೆ ತಾಲ್ಲೂಕು ತಿತಿಮತಿ ಆರೋಗ್ಯ ಕೇಂದ್ರದಲ್ಲಿ ವೈದ್ಯರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ. ಹೊಸಮನಿ ಎಂಬುವವರಿಗೆ ತಿತಿಮತಿ ಮರಪಾಲ ಗ್ರಾಮದ ನಿವಾಸಿಗಳಾದ ಫಿರೋಜ್‍, ಸಮೀರ್‍, ಸೈದಲವಿ ಎಂಬುವವರು ರೋಗಿಗಳಿಗೆ ಚಿಕಿತ್ಸೆ ನೀಡಲು ಅಡ್ಡಿ ಪಡಿಸಿ ವಿನಾ ಕಾರಣ ಹಲ್ಲೆ ಮಾಡಿ ತಳ್ಳಿ ಕೆಳಗೆ ಬೀಳಿಸಿದ ಪರಿಣಾಮ ವೈದ್ಯರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ

                ದಿನಾಂಕ: 03-05-2021 ರಂದು ವಿರಾಜಪೇಟೆ ತಾಲ್ಲೂಕು ನಲವತ್ತೆಕ್ರೆ ಗ್ರಾಮದ ನಿವಾಸಿ ಅಬ್ದುಲ್ಲಾ ಎಂಬುವವರು ಕೋವಿಡ್‍-19 ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗಟ್ಟಲು ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿ ಉಲ್ಲಂಘಿಸಿ ಅವಧಿ ಮೀರಿದ ನಂತರ ದಿನಸಿ ಅಂಗಡಿಯನ್ನು ತೆರೆದು ಸಾರ್ವಜನಿಕರು ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡುತ್ತಿದ್ದ ಮೇರೆ ವಿರಾಜಪೇಟೆ ಠಾಣೆ ಪಿಎಸ್‍ಐ ಬೋಜಪ್ಪ ಮತ್ತು ಸಿಬ್ಬಂದಿಯವರು ಪರಿಶೀಲನೆ ಮಾಡಿ ನೀಡಿದ ವರದಿ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ಧಾರೆ.

ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ

                ದಿನಾಂಕ: 03-05-2021 ರಂದು ಸೋಮವಾರಪೇಟೆ ತಾಲ್ಲೂಕು ವೇರಳ ಶ್ರೀಮಂಗಲ  ಗ್ರಾಮದ ನಿವಾಸಿ ರಫೀಕ್‍ ಎಂಬುವವರು ಕೋವಿಡ್‍-19 ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗಟ್ಟಲು ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿ ಉಲ್ಲಂಘಿಸಿ ಅವಧಿ ಮೀರಿದ ನಂತರ ಕೋಳಿ ಮಾಂಸದ  ಅಂಗಡಿಯನ್ನು ತೆರೆದು ಸಾರ್ವಜನಿಕರು ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡುತ್ತಿದ್ದ ಮೇರೆ ಪಂಚಾಯತಿ ಅಧಿಕಾರಿಗಳು  ಪರಿಶೀಲನೆ ಮಾಡಿ ನೀಡಿದ ವರದಿ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ಧಾರೆ.

ಇತ್ತೀಚಿನ ನವೀಕರಣ​ : 04-05-2021 06:10 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080