ಅಭಿಪ್ರಾಯ / ಸಲಹೆಗಳು

ಅಕ್ರಮ ಜೂಟಾಟ, 5 ಮಂದಿ ಬಂಧನ:

 ದಿನಾಂಕ 02.08.2021ರಂದು ರಾತ್ರಿ 9 ಗಂಟೆಗೆ ದೊರೆತ ಖಚಿತ ಮಾಹಿತಿ ಮೇರೆಗೆ, ಶನಿವಾರಸಂತೆ ಠಾಣೆಯ ಪೋಲಿಸ್ ನಿರೀಕ್ಷಕರಾದ ಎಸ್. ಪರಶಿವಮೂರ್ತಿ ಮತ್ತು ಸಿಬ್ಬಂದಿಗಳು ಕೊಡ್ಲಿಪೇಟೆ ಗ್ರಾಮದ ಮಹೇಶ್ ಎಂಬುವರ ಮನೆಯ ಬಳಿ ದಾಳಿ ಮಾಡಿ ,ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 5 ಜನ ಆರೋಪಿಗಳನ್ನು ದಸ್ತಗಿರಿ ಮಾಡಿದ್ದು ಜೂಜಾಟದಲ್ಲಿ ಪಣವಾಗಿಟ್ಟಿದ್ದ ರೂ 15,620 ಮತ್ತು 2 ಕಾರು, 2 ಸ್ಕೂಟರ್ ಸೇರಿದಂತೆ ಒಟ್ಟು 3,50,000 ಸಾವಿರ ರೂ ಮೌಲ್ಯದ ಸ್ವತ್ತುಗಳನ್ನು ವಶ ಪಡಿಸಿ ಕೊಂಡಿರುತ್ತಾರೆ.

ಈ ಕಾರ್ಯಾಚರಣೆಯು ಪೊಲೀಸ್ ನಿರೀಕ್ಷಕರಾದ ಎಸ್. ಪರಶಿವಮೂರ್ತಿಯವರ ನೇತೃತ್ವದಲ್ಲಿ ನಡೆದಿದ್ದು ಸಿಬ್ಬಂದಿಗಳಾದ ಎಂ.ಎಸ್. ಬೋಪಣ್ಣ, ಹರೀಶ್, ಧನಂಜಯ, ಪ್ರಶಾಂತ್ ಪಾಟೀಲ್, ಪ್ರದೀಪ್ ಮತ್ತು ಚಾಲಕ ಕುಮಾರ್ ರವರು ಭಾಗವಹಿಸಿದ್ದು, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಕಾರ್ಯವನ್ನು ಪ್ರಶಂಸಿಸಲಾಗಿದೆ.

 ರ ಸ್ತೆ ಅಪಘಾತ ಪ್ರಕರಣ

            ದಿನಾಂಕ: 02-08-2021 ರಂದು ಪೊನ್ನಂಪೇಟೆ ತಾಲ್ಲೂಕು ನಡಿಕೇರಿ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಯಾವುದೋ ಒಂದು ವಾಹನವನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇನ್ನಚ್ ಅಲಿ ಎಂಬುವವರಿಗೆ ಡಿಕ್ಕಿಪಡಿಸಿದ ಪರಿಣಾಮ ಬಿದ್ದು ಗಾಯಗೊಂಡಿರುತ್ತಾರೆ. ಡಿಕ್ಕಿಪಡಿಸಿದ ನಂತ ಚಾಲಕನು ವಾಹನವನ್ನು ನಿಲ್ಲಿಸದೇ ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಪೊನ್ನಂಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಳವು ಪ್ರಕರಣ

            ದಿನಾಂಕ: 03-08-2021 ರಂದು ಪೊನ್ನಂಪೇಟೆ ತಾಲ್ಲೂಕು ಮತ್ತೂರು ಗ್ರಾಮದ ನಿವಾಸಿ ಪೂವಯ್ಯ ಎಂಬುವವರ ಮನೆಯ ಬಾಗಿಲಿನ ಲಾಕರನ್ನು ಯಾರೋ ಕಳ್ಳರು ಮುರಿದು ಒಳನುಗ್ಗಿ ಮನೆಯಲ್ಲಿಟ್ಟಿದ್ದ ನಗದು ಸಹಿತ ₹. 85,000 ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಪೊನ್ನಂಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಕಳವು ಪ್ರಕರಣ

ದಿನಾಂಕ: 26-07-2021 ರಿಂದ 28-07-2021 ರ ಮಧ್ಯೆ ವಿರಾಜಪೇಟೆ ನಗರದ ಸಿಲ್ವನಗರ ನಿವಾಸಿ ಅಬ್ದುಲ್ ಸಲೀಂ ಎಂಬುವವರು ಅವರ ಪತ್ನಿಯನ್ನು ಹೆರಿಗೆಯ ಚಿಕಿತ್ಸೆಗೆ ವಿರಾಜಪೇಟೆ ನಗರದಲ್ಲಿರುವ ಅತ್ರೆಯ ಆಸ್ಪತ್ರೆಗೆ ದಾಖಲಿಸಿದ್ದಾಗ ಚಿಕಿತ್ಸೆಯ ಸಮಯದಲ್ಲಿ ಚಿನ್ನಾಭರಣಗಳನ್ನು ಬಿಚ್ಚಿ  ಬ್ಯಾಗಿನಲ್ಲಿ ಇಟ್ಟುರುವಾಗ ಯಾರೋ ಕಳ್ಳರು ಬ್ಯಾಗಿನೊಳಗಿದ್ದ ಚಿನ್ನವನ್ನು ಕಳವು ಮಾಡಿದ್ದು  ಈ ಬಗ್ಗೆ ದಿನಾಂಕ: 03-08-2021 ರಂದು ನೀಡಿದ ಪುಕಾರಿನ ಮೇರೆ ವಿರಾಜಪೇಟೆ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 04-08-2021 06:58 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080