ಅಭಿಪ್ರಾಯ / ಸಲಹೆಗಳು

ಅಕ್ರಮ ಜೂಜಾಟ ಪ್ರಕರಣ

            ದಿನಾಂಕ: 03-10-2021 ರಂದು ಕುಶಾಲನಗರ ತಾಲ್ಲೂಕು ಮಲ್ಲೇನಹಳ್ಳಿ ಗ್ರಾಮದ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಇಸ್ಪೀಟ್‌ ಜೂಜಾಟಾಡುತ್ತಿದ್ದ ಪ್ರಕರಣವನ್ನು ಕುಶಾಲನಗರ ಗ್ರಾಮಾಂತರ ಠಾಣೆ ಪಿಎಸ್‌ಐ ಶಿವಶಂಕರ್‌ ಮತ್ತು ಸಿಬ್ಬಂದಿಯವರ ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

            ದಿನಾಂಕ: 03-10-2021 ರಂದು ಕುಶಾಲನಗರ ತಾಲ್ಲೂಕು ಹಾರಂಗಿ ಗ್ರಾಮದ ನಿವಾಸಿ ಸಾರ್ವಜನಿಕ ಸ್ಥಳದಲ್ಲಿ ದ್ವಚಿಕ್ರ ವಾಹನದಲ್ಲಿ ಅಕ್ರಮವಾಗಿ ಮದ್ಯವನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಕುಶಾಲನಗರ ಠಾಣೆ ಪೊಲೀಸರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಮನ ಕಳವಿಗೆ ಯತ್ನ ಪ್ರಕರಣ

            ದಿನಾಂಕ; 22-09-2021 ರಂದು ರಾತ್ರಿ ಮರಗೋಡು ಗ್ರಾಮದ ವಾಟೆಕಾಡು ಪೈಸಾರಿ ನಿವಾಸಿ ಮೇದಪ್ಪ ಎಂಬುವವರ ಮನೆಯ ಮೇಲ್ಚಾವಣಿ ಹಂಚನ್ನು ತೆಗೆದು ಕಳ್ಳತನ ಮಾಡಲು ಅದೇ ಗ್ರಾಮದ ನಿವಾಸಿ             ಲೋಕೇಶ ಮತ್ತು ಆತನ ಸಂಗಡಿಗನೊಬ್ಬ ಪ್ರಯತ್ನ ಮಾಡಿದ್ದು ಈ ಬಗ್ಗೆ ದಿನಾಂಕ 03.10.2021 ರಂದು ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾನೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕೊಲೆ ಯತ್ನ ಪ್ರಕರಣ

            ದಿನಾಂಕ 03-10-2021 ರಂದು ಕಾವಾಡಿ ಗ್ರಾಮದ ನೆಲ್ಲಮಕ್ಕಡ ಕುಟುಂಬಸ್ಥರ ಸಭೆಯ ನಂತರ ಸಭೆಗೆ ಬಂದಿದ್ದ ದಿನು ನಾಣಯ್ಯ ಎಂಬುವವರಿಗೆ ವಿಜು ನಾಣಯ್ಯ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡುವ ಉದ್ದೇಶದಿಂದ ಬಾಟಲಿಯಿಂದ ತಲೆಗೆ ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 04-10-2021 03:16 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080