ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ
            ದಿನಾಂಕ: 03-11-2021 ರಂದು ಪೊನ್ನಂಪೇಟೆ ತಾಲ್ಲೂಕು ಬೇಗೂರು ಗ್ರಾಮದ ಬಳಿ ಸಾರ್ವಜನಿಕ ರಸ್ತೆಯಲ್ಲಿ ಕೆಎ-12-ಬಿ-9423 ರ ಪಿಕ್‌ ಅಪ್‌ ವಾಹನವನ್ನು ಚಾಲಕ ಯೂಸುಫ್‌ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆ-12-ಎಂ-9128 ರ ಕಾರಿಗೆ ಡಿಕ್ಕಿಪಡಿಸಿದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಪೊನ್ನಂಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

                ದಿನಾಂಕ: 03-11-2021 ರಂದು ಸೋಮವಾರಪೇಟೆ ತಾಲ್ಲೂಕು ದೊಡ್ಡ ಹಣಕೋಡು ಗ್ರಾಮದ ನಿವಾಸಿ  ಮಹಿಳೆಯೊಬ್ಬರು ಕಾಗಡಿಕಟ್ಟೆ ಗ್ರಾಮದಲ್ಲಿರುವ  ಅವರ ಅಂಗಡಿಯ ಹೊರಭಾಗದಲ್ಲಿ ಅಕ್ರಮವಾಗಿ  ಮದ್ಯವನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಮಾಡುತ್ತಿದ್ದ ಪ್ರಕರಣವನ್ನು ಸೋಮವಾರಪೇಟೆ ಠಾಣೆ ಪಿಎಸ್‌ಐ ಶ್ರೀಧರ್‌ ಮತ್ತು ಸಿಬ್ಬಂದಿಯವರು  ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ರಸ್ತೆ ಅಪಘಾತ ಪ್ರಕರಣ

                ದಿನಾಂಕ 02-11-2021 ರಂದು ಕುಶಾಲನಗರ ತಾಲ್ಲೂಕು ಹೆಬ್ಬಾಲ ಗ್ರಾಮದ ಬಳಿ ಬಾಣಾವಾರ ರಸ್ತೆಯಲ್ಲಿ ಕೆಎ-12-ಆರ್‌-4974 ರ ಬೈಕನ್ನು ಅದರ ಸವಾರ ಸುನಿಲ್‌ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ಬೈಕ್‌ ನಿಯಂತ್ರಣ ತಪ್ಪಿ ಬಿದ್ದುದರಿಂದ ಸವಾರ ಮತ್ತು ಹಿಂಬದಿ ಸವಾರ ಅರವಿಂದ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ದೂರಿನ ಮೇರೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 04-11-2021 12:31 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080