ಅಭಿಪ್ರಾಯ / ಸಲಹೆಗಳು

ಕೊಲೆ ಪ್ರಕರಣ ಪತ್ತೆ, ಆರೋಪಿ ಬಂಧನ:

ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ತಲೆ ಮರೆಸಿ ಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ನಾಪೋಕ್ಲು ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ರವಿ ಮತ್ತು ಬಾಲಕೃಷ್ಣ ಎಂಬುವವರು ಕೂಲಿ ಕೆಲಸಕ್ಕಾಗಿ ನಾಪೆಕ್ಲುವಿಗೆ ಬಂದು ಇಂದಿರಾ ನಗರದ ಗಣೇಶ್ ಎಂಬವರಲ್ಲಿ ವಾಸವಾಗಿದ್ದರು. ಮಾ. 31 ರಂದು ಇವರು ಹೋಟೆಲ್‌ನಲ್ಲಿ ಊಟ ಮುಗಿಸಿ ಮಲಗಲು ಕೊಠಡಿಗೆ ಬಂದಾಗ ಕುಡಿದ ಮತ್ತಿನಲ್ಲಿ ಮಾತಿಗೆ ಮಾತು ಬೆಳೆದು ಬಾಲಕೃಷ್ಣ ರವಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದು ಈ ಬಗ್ಗೆ ನಾಪೋಕ್ಲು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.  ನಾಪೊಕ್ಲು ಠಾಣೆ ಪಿಎಸ್‍ಐ ಮತ್ತು ಸಿಬ್ಬಂದಿಯವರು ಆರೋಪಿ ಆರ್.ಡಿ.ಬಾಲಕೃಷ್ಣ ಎಂಬಾತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.

   ಮಡಿಕೇರಿ ಉಪವಿಭಾಗ ಡಿವೈಎಸ್ಪಿ ದಿನೇಶ್ ಕುಮಾರ್‍ ಅವರ ಮಾರ್ಗದರ್ಶನದಲ್ಲಿ ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕ ರವಿಕಿರಣ್ ನೇತೃತ್ವದಲ್ಲಿ ನಾಪೋಕ್ಲು ಠಾಣಾಧಿಕಾರಿ ಆರ್.ಕಿರಣ್, ಸಿಬ್ಬಂದಿಗಳಾದ ನವೀನ್, ಸಜನ್, ಮಧು, ಮತ್ತು ರವಿ ಮತ್ತಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಪೊಲೀಸ್‍ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯವನ್ನು ಶ್ಲಾಘಿಸಲಾಗಿದೆ.

 ಅಕ್ರಮ ಮದ್ಯ ಮಾರಾಟ ಪ್ರಕರಣ

            ದಿನಾಂಕ: 04-04-2021 ರಂದು ಸೋಮವಾರಪೇಟೆ ತಾಲ್ಲೂಕು ಯಡವಾರೆ ಗ್ರಾಮದ  ನಿವಾಸಿ  ಸತೀಶ್ ಎಂಬುವವರು  ಅವರ ಅಂಗಡಿಯ  ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಮಾಡುತ್ತಿದ್ದ ಪ್ರಕರಣವನ್ನು ಸೋಮವಾರಪೇಟೆ  ಠಾಣೆ ಪಿಎಸ್‍ಐ ಶ್ರೀಧರ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಹಲ್ಲೆ ಪ್ರಕರಣ

                ದಿನಾಂಕ: 04-04-2021 ರಂದು ವಿರಾಜಪೇಟೆ ತಾಲ್ಲೂಕು ಕಡಂಗ ಮರೂರು ಗ್ರಾಮದ ನಿವಾಸಿಗಳಾದ ಅಮ್ಮಂಡ ಅಚ್ಚಯ್ಯ ಮತ್ತು ಇತರರು ಹಾಗೂ ವಿವೇಕ್‍ ಹಾಗೂ ಇತರರು ಕ್ಷುಲ್ಲಕ ಕಾರಣಕ್ಕೆ ಪರಸ್ಪರ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿ ಗಾಯಪಡಿಸಿ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ಉಭಯ ಕಡೆಯವರು ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 05-04-2021 04:51 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ