ಅಭಿಪ್ರಾಯ / ಸಲಹೆಗಳು

ಅಕ್ರಮ ಮರಳು ಸಾಗಾಟ ಪ್ರಕರಣ

            ದಿನಾಂಕ: 04-04-2022 ರಂದು ಪೊನ್ನಂಪೇಟೆ ತಾಲ್ಲೂಕು ಕಾನೂರು ಗ್ರಾಮದ ನಿವಾಸಿ ಬಸಪ್ಪ  ಎಂಬುವವರು ಟಿ.ಶೆಟ್ಟಿಗೇರಿ  ಗ್ರಾಮದ ಬಳಿ ಟಿಪ್ಪರ್ ವಾಹನ ಸಂಖ್ಯೆ ಕೆಎ-12-ಎ-1125  ರಲ್ಲಿ ಅಕ್ರಮವಾಗಿ ಮರಳನ್ನು ತೆಗೆದು ತುಂಬಿಸಿಕೊಂಡು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಶ್ರೀಮಂಗಲ ಠಾಣೆ ಪಿಎಸ್‌ಐ ರವಿಶಂಕರ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

‌ಕೊಲೆ ಬೆದರಿಕೆ ಪ್ರಕರಣ

            ದಿನಾಂಕ: 04-04-2022 ರಂದು ಮಡಿಕೇರಿ ತಾಲ್ಲೂಕು ಕೊಡಂಬೂರು ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ರಾಜು ಕ್ರಿಕೆಟ್‌ ಸಂಸ್ಥೆಯ ಕ್ರಿಡಾಂಗಣದ ಕಾಂಪೌಂಡ್‌ ನಿರ್ಮಾಣ ಕೆಲಸ ಮಾಡುತ್ತಿದ್ದ ಕೆಲಸಗಾರರಿಗೆ ಪಾಲೆಮಾಡು ಪೈಸಾರಿ ನಿವಾಸಿಗಳಾದ ಮೊಣ್ಣಪ್ಪ, ಮಹೇಶ್‌ ಮತ್ತು ಇತರರು ಅಕ್ರಮ ಪ್ರವೇಶ ಮಾಡಿ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ರಸ್ತೆ ಅಪಘಾತ ಪ್ರಕರಣ

            ದಿನಾಂಕ: 04-04-2022 ರಂದು ಮಡಿಕೇರಿ ತಾಲ್ಲೂಕು ಹೆರವನಾಡು ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎಲ್-58-ಎಂ-9779  ರ ಕಾರನ್ನು ಚಾಲಕ ಸಾಬಿತ್‌ ಆಲಿ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-55-ಜೆ-8306 ರ ಬೈಕ್‌ ಗೆ ಡಿಕ್ಕಿಪಡಿಸಿದ ಪರಿಣಾಮ ಸವಾರ ಸುನಿಲ್‌ ಎಂಬುವವರು ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 06-04-2022 01:52 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080