ಅಭಿಪ್ರಾಯ / ಸಲಹೆಗಳು

ಆಕಸ್ಮಿಕವಾಗಿ ಮರದಿಂದ ಬಿದ್ದು ವ್ಯಕ್ತಿ ಸಾವು.

            ದಿನಾಂಕ: 04-06-2021 ರಂದು ಸೋಮವಾರಪೇಟೆ ತಾಲ್ಲೂಕು ಹಣಕೋಡು ಗ್ರಾಮದ ದಯಾನಂದ ಎಂಬುವವರ ಕಾಫಿ ತೋಟದಲ್ಲಿ ಮರಕಪಾತು ಮಾಡುತ್ತಿದ್ದ ವೇಳೆ ತಮಿಳುನಾಡು ಮೂಲದ ಕೆಲಸಗಾರ ಚಿನ್ನಂಡಿ ಎಂಬುವವರು ಆಕಸ್ಮಿಕವಾಗಿ ಮರದಿಂದ ಬಿದ್ದು ಗಾಯಗೊಂಡವರನ್ನು ಚಿಕಿತ್ಸೆಗೆ ಆಸ್ಪತ್ರಗೆ ದಾಖಲಿಸಿದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದು ಈ ಬಗ್ಗೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಲಾಕ್‌ ಡೌನ್‌ ನಿಯಮ ಉಲ್ಲಂಘನೆ ಪ್ರಕರಣ

                ದಿನಾಂಕ: 04.06.2021 ರಂದು ಪೊನ್ನಂಪೇಟೆ ತಾಲ್ಲೂಕು  ವಿನೇಶ್‌ ಕಾಫಿ ಗೋದಾಮಿನ ಲ್ಲಿ ಕೆಲವು ಯುವಕರು ವಿನೀಶ್‌, ಜಯ, ದಿಲೀಪ್‌, ಹರ್ಷಿತ್‌, ರಾಕೇಶ್‌ ಎಂಬುವವರು ಗುಂಪು ಕಟ್ಟಿಕೊಂಡು ಸಾಮಾಜಿಕ ಅಂತರ ಪಾಲನೆ ಮಾಡದೇ ಕೋವಿಡ್-‌19 ಸಾಂಕ್ರಾಮಿಕ ರೋಗ ಹರಡುವ ಸಂಭವವಿದ್ದರೂ ಸಹಾ ಕೋವಿಡ್‍-19 ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗಟ್ಟಲು ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿ ಉಲ್ಲಂಘಿಸಿದ್ದು ಈ ಬಗ್ಗೆ ಕಂದಾಯ ಇಲಾಖೆ ಅಧಿಕಾರಿಗಳು ಪರಿಶೀಲಿಸಿ ನೀಡಿದ ವರದಿ ಮೇರೆ  ಕುಟ್ಟ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ

                ದಿನಾಂಕ: 04-06-2021 ರಂದು ಸೋಮವಾರಪೇಟೆ ತಾಲ್ಲೂಕು ಮಾದಪಟ್ಟಣ ಗ್ರಾಮದ ನಿವಾಸಿ ಗಳಾದ ಮೂವರಿಗೆ ಕೊರೋನ ಪಾಸಿಟಿವ್‌ ಆಗಿ ಹೋಂ ಐಸೋಲೇಷನ್‌ ನಲ್ಲಿದ್ದು ಕೋವಿಡ್-‌19 ಸಾಂಕ್ರಾಮಿಕ ರೋಗ ಹರಡುವ ಸಂಭವವಿದ್ದರೂ ಸಹಾ ಕೋವಿಡ್‍-19 ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗಟ್ಟಲು ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿ ಉಲ್ಲಂಘಿಸಿ ಮಾಸ್ಕ್‍ ಧರಿಸದೇ , ಸಾಮಾಜಿಕ ಅಂತರ ಕಾಪಾಡಿಕೊಳ‍್ಳದೇ ವಿನಾ ಕಾರಣ ಮನೆಯ ಹೊರಗಡೆ ಓಡಾಡಿಕೊಂಡಿದ್ದು ಈ ಬಗ್ಗೆ ಪಂಚಾಯಿತಿ ಅಧಿಕಾರಿಗಳು ಪರಿಶೀಲಿಸಿ ನೀಡದ ವರದಿ ಮೇರೆ ಕುಶಾಲನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 05-06-2021 05:27 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ