ಅಭಿಪ್ರಾಯ / ಸಲಹೆಗಳು

ಹಲ್ಲೆ ಪ್ರಕರಣ

            ದಿನಾಂಕ: 04-08-2021 ರಂದು ಪೊನ್ನಂಪೇಟೆ ತಾಲ್ಲೂಕು ಅತ್ತೂರು ಗ್ರಾಮದ ನಿವಾಸಿ ಚಿನ್ನದೊರೆ ಎಂಬುವವರಿಗೆ ಅದೇ ಗ್ರಾಮದ ನಿವಾಸಿ ಮುನಿಯಪ್ಪ ಎಂಬುವವರು ಹಳೆ ವೈಷಮ್ಯದಿಂದ ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 04-08-2021 ರಂದು ವಿರಾಜಪೇಟೆ ತಾಲ್ಲೂಕು ಅಂಬಟ್ಟಿ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-18-ಇಬಿ-7447 ರ ಬೈಕನ್ನು ಅದರ ಸವಾರ ಕಾಳಪ್ಪ ಎಂಬುವವರು ಅತಿವೇ ಗಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-12-ಎಸ್-5343‌ ರ ಸ್ಕೂಟರ್‌ಗೆ ಡಿಕ್ಕಿಪಡಿಸಿದ ಪರಿಣಾಮ ಸ್ಕೂಟರ್‌ ಸವಾರ ರಮೇಶ್‌ ಎಂಬುವವರು ಗಾಯಗೊಂಡಿದ್ದು  ಈ ಬಗ್ಗೆ ನೀಡಿದ ದೂರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಸಹಕಾರ ಸಂಘದ ಹಣ ದುರುಪಯೋಗ ಪ್ರಕರಣ

            ವಿರಾಜಪೇಟೆ ತಾಲ್ಲೂಕು ಕೆದಮುಳ್ಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಈ ಹಿಂದೆ  2003 ರಿಂದ 2019 ನೇ ಸಾಲಿನ ವರೆಗೆ ಕಾರ್ಯನಿರ್ವಾಹಕರಾಗಿ  ಕರ್ತವ್ಯದಲ್ಲಿದ್ದ ಸಿ,ಎಂ ಅಚ್ಚಯ್ಯ ಎಂಬುವವರು ಸಂಘದ ಹಣಕಾಸು ವಹಿವಾಟು ದಾಖಲೆಗಳನ್ನು ಅಸಮರ್ಪಕವಾಗಿ ನಿರ್ವಹಣೆ ಮಾಡಿ ತಪ್ಪು ಮಾಹಿತಿ ನಮೂದಿಸಿ ಸುಳ್ಳು ಲೆಕ್ಕಪತ್ರ ಸೃಷ್ಟಿಸಿ ಸಂಘಧ ಸುಮಾರು 35 ಲಕ್ಷಕ್ಕೂ ಮೇಲ್ಪಟ್ಟು ಹಣ ದುರುಪಯೋಗ ಮಾಡಿ ಸಂಘಕ್ಕೆ ನಷ್ಟ ಉಂಟುಮಾಡಿರುವುದು ಲೆಕ್ಕಪರಿಶೋಧನೆಯಿಂದ ಕಂಡುಬಂದಿದ್ದು ಈ ಬಗ್ಗೆ ದಿನಾಂಕ: 04-08-2021 ರಂದು ಸಂಘದ ಅಧ್ಯಕ್ಷರು ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಇತ್ತೀಚಿನ ನವೀಕರಣ​ : 05-08-2021 12:44 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ