ಅಭಿಪ್ರಾಯ / ಸಲಹೆಗಳು

ಸುಲಿಗೆ ಪ್ರಕರಣ

            ದಿನಾಂಕ: 04-11-2021 ರಂದು ಪೊನ್ನಂಪೇಟೆ ತಾಲ್ಲೂಕು ಕೋತೂರು ಗ್ರಾಮದ ನಿವಾಸಿ ಗಂಗಮ್ಮ ಎಂಬುವವರು ಅವರ ಮನೆಯಲ್ಲಿ ಟಿ.ವಿ ನೋಡುತ್ತಿದ್ದರು. ತೆರೆದಿದ್ದ ಮುಂಭಾಗಿಲಿನ ಮೂಲಕ  ಅಪರಿಚಿತ ವ್ಯಕ್ತಿಯೊಬ್ಬ ಮನೆಯೊಳಗೆ ನುಗ್ಗಿ ಮುಖವನ್ನು  ಬಟ್ಟೆಯಿಂದ  ಮುಚ್ಚಿಕೊಂಡು ಏಕಾಏಕಿ ಮಹಿಳೆಯ ಬಳಿ ಹೋಗಿ ಕಾಲನ್ನು ಒತ್ತಿಹಿಡಿದು ಕಿರುಚದಂತೆ ಬಾಯಿ ಮುಚ್ಚಿ ಹಿಡಿದು ಕೈಗಳಿಗೆ ಕಚ್ಚಿ ಗಾಯಪಡಿಸಿ ಕಿವಿಯಲ್ಲಿದ್ದ ₹. 35,೦೦೦ ಬೆಲೆ ಬಾಳುಬಾಳುವ ಓಲೆಗಳನ್ನು ಬಲವಂತವಾಗಿ ಕಿತ್ತುಕೊಂಡಿದ್ದು ಮನೆಯಿಂದ ಹೊರಗೆ ಹೋಗಿರುತ್ತಾನೆ. ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಟ್ಟ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಸ್ಕೂಟರ್‌ ಕಳವು ಪ್ರಕರಣ

            ದಿನಾಂಕ: 04-11-2021 ರಂದು ಕುಶಾಲನಗರ ಪಟ್ಟಣದ ದಂಡಿನಪೇಟೆ ನಿವಾಸಿ ಹಸೈನಾರ್‌ ಎಂಬುವವರು ಅವರ ಮನೆಯ ಕಾಂಪೌಂಡ್‌ ಒಳಗೆ ನಿಲ್ಲಿಸಿದ್ದ ಕೆಎ-12-ಕೆ-1920 ರ ಹೋಂಡಾ ಸ್ಕೂಟರನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 05-11-2021 06:17 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080