Feedback / Suggestions

ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು

            ದಿನಾಂಕ: 30-11-2020 ರಂದು ಪೊನ್ನಂಪೇಟೆ ತಾಲ್ಲೂಕು ಬೆಕ್ಕೆಸೊಡ್ಲೂರು ಗ್ರಾಮದ ಬಳಿ ರಸ್ತೆಯಲ್ಲಿ ಕೆಎ-12-ಕ್ಯೂ-2440 ರ ಬೈಕನ್ನು ಸವಾರ ರಂಜು ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಿದಾಯಿ ಎಂಬುವವರಿಗೆ ಡಿಕ್ಕಿಪಡಿಸಿ ಪರಿಣಾಮ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಾರಿಯಾಗದೇ ದಿನಾಂಕ: 04-12-2020 ರಂದು ಮೃತಪಟ್ಟಿದ್ದು ಈ ಬಗ್ಗೆ ಪೊನ್ನಂಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

 ರಸ್ತೆ ಅಪಘಾತ ಪ್ರಕರಣ

            ದಿನಾಂಕ: 04-12-2020 ರಂದು ಮಡಿಕೇರಿ ತಾಲ್ಲೂಕು ಎಂ.ಬಾಡಗ ಗ್ರಾಮದ ಬಳಿ ಮುಖ‍್ಯ ರಸ್ತೆಯಲ್ಲಿ ಕೆಎ-45-6838 ರ ಗೂಡ್ಸ್ ವಾಹನವನ್ನು ಚಾಲಕ ಸುಬ್ರಮಣೀ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-05-ಪಿ-9456 ರ ಕಾರಿಗೆ ಡಿಕ್ಕಿಪಡಿಸಿದ ಪರಿಣಾಮ ಕಾರಿನಲ್ಲಿದ್ದ ಹರೀಶ್‍ ಮತ್ತು ಸುಬ್ರಮಣಿ ಎಂಬುವವರು ತೀವ್ರ ಗಾಯಗೊಂಡು ಮೃತಪಟ್ಟಿದ್ದು, ಎರಡೂ ವಾಹನಗಳಲ್ಲಿ ಪ್ರಯಾಣಿಸುತ್ತಿದ್ದ ಇತರ ಮೂವರು ಗಾಯಗೊಂಡಿದ್ದು ಈ ಬಗ್ಗೆ ಅಬ್ದುಲ್‍ ಖಾದರ್‍ ಎಂಬುವವರು ನೀಡಿದ ಪುಕಾರಿನ  ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ರಸ್ತೆ ಅಪಘಾತ ಪ್ರಕರಣ

            ದಿನಾಂಕ: 04-12-2020 ರಂದು ಮಡಿಕೇರಿ ನಗರದ ಎಂ.ಎಂ ವೃತ್ತದ ಬಳಿ ಕೆಎ-51-ಎಂಬಿ-5343 ರ ಕಾರನ್ನು ಚಾಲಕ ತಿಮ್ಮಯ್ಯ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-12-ಹೆಚ್‍.3220 ರ ಬೈಕ್ ಗೆ  ಡಿಕ್ಕಿಪಡಿಸಿದ ಪರಿಣಾಮ ಬಿನು ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 04-12-2020 ರಂದು ಮಡಿಕೇರಿ ಮಂಗಳೂರು ಹೆದ್ದಾರಿ ರಸ್ತೆಯಲ್ಲಿ ಕೆಎಲ್- 14-ಜೆಡ್- 3158 ರ ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-19-ಎಂಬಿ-3318 ರ ಕಾರಿಗೆ ಡಿಕ್ಕಿಪಡಿಸಿದ ಪರಿಣಾಮ ನಾಗೇಶ್, ವಿಠಲ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಆನ್‍ಲೈನ್‍ ವಂಚನೆ ಪ್ರಕರಣ

            ದಿನಾಂಕ: 04-12-2020 ರಂದು ಸೋಮವಾರಪೇಟೆ ತಾಲ್ಲೂಕು ಬಾಣಾವಾರ ಗ್ರಾಮದ ನಿವಾಸಿ ನಂದಕುಮಾರ್‍ ಎಂಬುವವರು ಮೋಬೈಲ್ ಗೆ 8918590433 ನಂಬರ್‍ ನಿಂದ ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬ ಕೆನರಾ ಬ್ಯಾಂಕ್‍ನಿಂದ  ಕರೆ ಮಾಡುತ್ತಿದ್ದು ಎ.ಟಿ.ಎಂ ಕಾರ್ಡ್ ರಿನೀವಲ್‍ ಮಾಡುವುದಾಗಿ ತಿಳಿಸಿ ನಂಬರ್ ಹಾಗೂ ಒ.ಟಿ.ಪಿ ಸಂಖ್ಯೆ ಪಡೆದು ಹಂತ ಹಂತವಾಗಿ ಬ್ಯಾಂಕ್ ಖಾತೆಯಿಂದ 53,841 ರೂ ಹಣವನ್ನು ವರ್ಗಾಯಿಸಿಕೊಂಡು ವಂಚನೆ ಮಾಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕೊಡಗು ಸೈಬರ್ ಅಪರಾಧ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಬ್ಯಾಂಕ್ ಅಥವಾ ಇತರೆ ಹಣಕಾಸು ಸಂಸ್ಥೆಗಳ ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿ ಮೋಸದಿಂದ ಆನ್ ಲೈನ್ ಮೂಲಕ ಹಣ ವರ್ಗಾವಣೆ ಮಾಡಿಕೊಂಡು ಸಾರ್ವಜನಿಕರಿಗೆ ವಂಚನೆ ಮಾಡುತ್ತಿರುವ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದೆ. ಯಾವುದೇ ಅಧಿಕೃತ ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಗಳು ಸಾರ್ವಜನಿಕರೊಂದಿಗೆ ಫೋನ್ ಮೂಲಕ ವ್ಯವಹರಿಸುವುದಿಲ್ಲ. ಸಾರ್ವಜನಿಕರು ತಮ್ಮ ಬ್ಯಾಂಕ್ ಖಾತೆ, ಎ.ಟಿ.ಎಂ, ಮ್ಯೂಚುವಲ್ ಫಂಡ್, ಉಳಿತಾಯ ಪತ್ರಗಳು ಹಾಗೂ ಇತರ ಯಾವುದೇ ರೀತಿಯ ಹಣಕಾಸು ವಹಿವಾಟಿನ ಪ್ರಕ್ರಿಯೆಗಳಲ್ಲಿ ತೊಡಕುಂಟಾದಾಗ ನೇರವಾಗಿ ಸಂಬಂದಪಟ್ಟ ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಗಳಿಗೆ ತೆರಳಿ ಪರಿಹರಿಸಿಕೊಳ್ಳುವುದು. ಹಣಕಾಸು ಸಂಸ್ಥೆಗಳ ಹೆಸರಿನಲ್ಲಿ ಕರೆ ಮಾಡುವ ವ್ಯಕ್ತಿಗಳು ಬ್ಯಾಂಕ್ ಅಕೌಂಟ್ ನಂಬರ್, ಎ.ಟಿ.ಎಂ ನಂಬರ್, ಸಿವಿವಿ ನಂಬರ್, ಒ.ಟಿ.ಪಿ, ಎಟಿಎಂ ಪಿನ್ ನಂಬರ್, ಗೂಗಲ್ ಪೇ, ಫೋನ್ ಪೇ, ಇತರೆ ಯು.ಪಿ.ಐ ಆಧಾರಿತ ಆನ್ ಲೈನ್ ಹಣಕಾಸು ವರ್ಗಾವಣೆ ಅಪ್ಲಿಕೇಶನ್ ಗಳ ಕೋಡ್ ಗಳನ್ನು ಕೇಳಿ ಪಡೆದು ವಂಚನೆ ಮಾಡುತ್ತಿದ್ದು ಇಂತಹ ಗೌಪ್ಯ ಸಂಖ್ಯೆಗಳನ್ನು ಯಾರಿಗೂ ನೀಡದಂತೆ ಸೂಚಸಲಾಗಿದೆ.

  ಅಕ್ರಮ ಮದ್ಯ ಮಾರಾಟ ಪ್ರಕರಣ

                ದಿನಾಂಕ: 04-12-2020 ರಂದು ಸೋಮವಾರಪೇಟೆ ತಾಲ್ಲೂಕು ಮರೂರು  ಗ್ರಾಮದ  ನಿವಾಸಿ ಸ್ವಾಮಿ  ಎಂಬುವವರು ಅವರ ಅಂಗಡಿಯಲ್ಲಿ ಮದ್ಯವನ್ನು ಇಟ್ಟುಕೊಂಡು ಅಕ್ರಮವಾಗಿ ಸಾರ್ವಜನಿಕರಿಗೆ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಕುಶಾಲನಗರ ಗ್ರಾಮಾಂತರ ಠಾಣೆ ಪಿಎಸ್‍ಐ ಶಿವಶಂಕರ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

                ದಿನಾಂಕ: 04-12-2020 ರಂದು ಸೋಮವಾರಪೇಟೆ ತಾಲ್ಲೂಕು ಕಣಿವೆ  ಗ್ರಾಮದ  ನಿವಾಸಿ ನರಸಿಂಹಸ್ವಾಮಿ ಎಂಬುವವರು ಅವರ ಮನೆಯ ಮುಂದಿನ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಇಟ್ಟುಕೊಂಡುಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಮಾಡುತ್ತಿದ್ದ ಪ್ರಕರಣವನ್ನು ಕುಶಾಲನಗರ ಗ್ರಾಮಾಂತರ ಠಾಣೆ ಪಿಎಸ್‍ಐ ಶಿವಶಂಕರ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

Last Updated: 05-12-2020 05:58 PM Updated By: Admin


Disclaimer :

Please note that this page also provides links to the websites / web pages of Govt. Ministries/Departments/Organisations.The content of these websites are owned by the respective organisations and they may be contacted for any further information or suggestion

Website Policies

  • Copyright Policy
  • Hyperlinking Policy
  • Security Policy
  • Terms & Conditions
  • Privacy Policy
  • Help
  • Screen Reader Access
  • Guidelines

Visitors

  • Last Updated​ :
  • Visitors Counter :
  • Version :
CONTENT OWNED AND MAINTAINED BY : Kodagu District Police
Designed, Developed and Hosted by: Center for e-Governance - Web Portal, Government of Karnataka © 2022, All Rights Reserved.

Best viewed in Chrome v-87.0.4280.141, Microsoft Edge v-87.0.664.75, Firefox -v-83.0 Browsers. Resolution : 1280x800 to 1920x1080