ಅಭಿಪ್ರಾಯ / ಸಲಹೆಗಳು

ಕಾರು ಅಪಘಾತ, ವೃದ್ದ ಸಾವು.

          ದಿನಾಂಕ: 05-02-2022 ರಂದು ಪೊನ್ನಂಪೇಟೆ ತಾಲ್ಲೂಕು ಟಿ.ಶೆಟ್ಟಿಗೇರಿ-ಬಿರುನಾಣಿ ರಸ್ತೆಯ ವಗರೆ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿ ಕೆಎ-02-ಎಎಫ್—0660 ರ ಟೊಯೊಟ ಇಟಿಯೋಸ್ ಕಾರನ್ನು ಚಾಲಕ ಸಂಜಯ್‍ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ವ್ಯಾಗೆನ್ ಆರ್ ಕೆಎ-12-ಎಂಎ-4821 ರ ಕಾರಿಗೆ ಡಿಕ್ಕಿಪಡಿಸಿದ ಪರಿಣಾಮ ವ್ಯಾಗೆನ್ ಕಾರು ಚಾಲನೆ ಮಾಡುತ್ತಿದ್ದ ಕುಟ್ಟಪ್ಪ ಎಂಬುವವರು ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟು ಇಟಿಯೋಸ್‍ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದು ಈ ಬಗ್ಗೆ ಮೃತರ ಮಗ ಪೂವಯ್ಯ ಎಂಬುವವರು ನೀಡಿದ ಪುಕಾರಿನ ಮೇರೆ ಶ್ರೀಮಂಗಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ, ವ್ಯಕ್ತಿ ಸಾವು.

                ದಿನಾಂಕ: 04-02-2022 ರಂದು ರಾತ್ರಿ ಪೊನ್ನಂಪೇಟೆ ತಾಲ್ಲೂಕು ಕಾನೂರು ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಯಾವುದೋ ಒಂದು ವಾಹನವನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಜೇನುಕುರುಬರ ದಾಸ ಎಂಬುವವರಿಗೆ ಡಿಕ್ಕಿಪಡಿಸಿದ ಪರಿಣಾಮ ಗಾಯೊಂಡು ಮೃತಪಟ್ಟಿದ್ದು , ಡಿಕ್ಕಿಪಡಿಸಿದ ನಂತ ಚಾಲಕ ವಾಹನವನ್ನು ನಿಲ್ಲಿಸದೇ ಹೋಗಿದ್ದು ಈ ಬಗ್ಗೆ ಮೃತ ಮಗ ರಾಜಣ್ಣ ಎಂಬುವವರು ನೀಡಿದ ಪುಕಾರಿನ ಮೇರೆ ಪೊನ್ನಂಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಸ್ಕೂಟರ್‍ ಗೆ ಲಾರಿ ಡಿಕ್ಕಿ, ಸವಾರ ಸಾವು.

                ದಿನಾಂಕ: 05-02-2022 ರಂದು ಪೊನ್ನಂಪೇಟೆ ತಾಲ್ಲೂಕು ಕುಂದ ಈಚೂರು ಬಳಿ ಮುಖ್ಯ ರಸ್ತೆಯಲ್ಲಿ ಕೆಎ12-9223 ರ ಸ್ವರಾಜ್ ಮಜ್ಡಾ ವ್ಯಾನನ್ನು ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-12-ಯು-3487 ರ ಸ್ಕೂಟರ್‍ ಗೆ ಡಿಕ್ಕಿಪಡಿಸಿದ ಪರಿಣಾಮ ಸ್ಕೂಟರ್‍ ಸವಾರ ರಾಜನ್‍ ಎಂಬುವವರು ಗಾಯಗೊಂಡವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ರಾಜನ್‍ ರವರು ಮೃತಪಟ್ಟಿದ್ದು ಈ ಬಗ್ಗೆ ಬಿನೀಶ್‍ ಎಂಬುವವರು ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮರಳು ಸಾಗಾಟ ಪ್ರಕರಣ

            ದಿನಾಂಕ: 05-02-2022 ರಂದು ವಿರಾಜಪೇಟೆ ತಾಲ್ಲೂಕು ಸಿದ್ದಾಪುರ ಗ್ರಾಮದ ನಿವಾಸಿ ಸೈನುದ್ದೀನ್  ಎಂಬುವವರು ಒಂಟಿಯಂಗಡಿ  ಗ್ರಾಮದ ಬಳಿ ಟಿಪ್ಪರ್ ವಾಹನ ಸಂಖ್ಯೆ ಕೆಎ-12-ಬಿ-3462  ರಲ್ಲಿ ಅಕ್ರಮವಾಗಿ ಮರಳನ್ನು ತೆಗೆದು ತುಂಬಿಸಿಕೊಂಡು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ಗ್ರಾಮಾಂತರ ಠಾಣೆ ಪಿಎಸ್‌ಐ ಸಿದ್ದಲಿಂಗ ಬಾನಸೆ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

 

ಇತ್ತೀಚಿನ ನವೀಕರಣ​ : 06-02-2022 12:46 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080