ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

                ದಿನಾಂಕ: 05-03-2021 ರಂದು ಮಡಿಕೇರಿ ತಾಲ್ಲೂಕು ಕಗ್ಗೋಡ್ಲು ಗ್ರಾಮದ ಬಳಿ ಮುಖ‍್ಯ ರಸ್ತೆಯಲ್ಲಿ ಕೆಎ-12-ಎ-9029 ರ ಗೂಡ್ಸ್ ವಾಹನವನ್ನು ಅದರ ಚಾಲಕ ಮಡಿಕೇರಿ ನಗರದ ಮಲ್ಲಿಕಾರ್ಜುನ ನಗರ ನಿವಾಸಿ ಶಿವಕುಮಾರ್‍ ಎಂಬುವವರು ಅತಿವೇಗ ಮತ್ತು ಅಜಾಗರಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ವೃದ್ದ ಮಹಿಳೆಯೊಬ್ಬರಿಗೆ ಡಿಕ್ಕಿಪಡಿಸಿದ ಪರಿಣಾಮ ಮಹಿಳೆ ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಸಹಕಾರ ಬ್ಯಾಂಕ್ ಅಧ್ಯಕ್ಷರಿಗೆ ಬೆದರಿಕೆ ಪ್ರಕರಣ.

                ದಿನಾಂಕ: 05-03-2021 ರಂದು ಕೊಡ್ಲಿಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕ್‍ ಅಧ್ಯಕ್ಷರಾದ ಧರ್ಮಪ್ಪ ಎಂಬುವವರು ಕೊಡ್ಲಿಪೇಟೆ ಬಸ್‍ ನಿಲ್ದಾಣದ ಬಳಿ ನಡೆದುಕೊಂಡು ಹೋಗುತ್ತಿರುವಾಗ ದೊಡ್ಡಕುಂದ ಗ್ರಾಮದ ನಿವಾಸಿ ತೇಜಕುಮಾರ್‍ ಎಂಬುವವರು ಕಾರಿನಲ್ಲಿ ಹೋಗಿ ಅಡ್ಡಗಟ್ಟಿ ಬ್ಯಾಂಕ್‍ ಸಾಲ ಮಂಜೂರಾತಿ ವಿಚಾರದಲ್ಲಿ ವೈಷಮ್ಯದಿಂದ ಅವಾಚ್ಯ ಪದಗಳಿಂದ ಬೈದು ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಶನಿವಾರಸಂತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

                ದಿನಾಂಕ: 02-03-2021 ರಂದು ರಾತ್ರಿ ಕೊಡ್ಲಿಪೇಟೆ ಗ್ರಾಮದ ನಿವಾಸಿ ರಾಜೇಶ್‍ ಎಂಬುವವರು ಕೆಲಸ ಮುಗಿಸಿ ಮನೆಗೆ ಹೋಗುತ್ತಿರುವಾಗ ದೊಡ್ಡಕುಂದ ಗ್ರಾಮದ ನಿವಾಸಿ ತೇಜಕುಮಾರ್ @ ತೇಜ ಎಂಬುವವರು ಅವರ ಕೆಎ-12-ಜೆಡ್-5905 ರ ಕಾರಿನಲ್ಲಿ ಹೋಗಿ ಅಡ್ಡಗಟ್ಟಿ ಹಳೆ ವೈಷಮ್ಯದಿಂದ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ದಿನಾಂಕ: 05-03-2021 ರಂದು ನೀಡಿದ ಪುಕಾರಿನ ಮೇರೆ ಶನಿವಾರಸಂತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 06-03-2021 03:38 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ