ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 04-03-2022 ರಂದು ವಿರಾಜಪೇಟೆ ತಾಲ್ಲೂಕು ಸಿದ್ದಾಪುರ ಗ್ರಾಮದ ರಾಯಲ್‍ ಫುಟ್‍ವೇರ್ ಮಳಿಗೆ  ಯ  ಬಳಿ ನಿಲ್ಲಿಸಿದ್ದ ಕೆಎ-12-ಎಂಎ-8967 ರ ಕಾರಿಗೆ ಕೆಎ-12-ಎಸ್-8652 ರ ಸ್ಕೂಟರನ್ನು ಸವಾರ ತಾಜುದ್ದೀನ್‍ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಡಿಕ್ಕಿಪಡಿಸಿದ ಪರಿಣಾಮ ಸ್ಕೂಟರ್‍ ಸವಾರ ಮತ್ತು ಹಿಂಬದಿ ಸವಾರ ಶಾಫಿ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸಿದ್ದಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ
            ದಿನಾಂಕ: 05-03-2022 ರಂದು ವಿರಾಜಪೇಟೆ ಪಟ್ಟಣದ ನೆಹರು ನಗರ ನಿವಾಸಿ ಅಬ್ದುಲ್‍ ರೆಹಮಾನ್‍ ಎಂಬುವವರು ಸ್ಕೂಟರ್‍ಗೆ ಪೆಟ್ರೋಲ್‍ ಹಾಕಿಸುತ್ತಿರುವಾಗ ನಿಶಾನ್‍ ಎಂಬುವವರು ಕಾರಿನಲ್ಲಿ ಬಂದು ಸ್ಕೂಟರ್‍ ಅಡ್ಡಗಟ್ಟಿ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ, ಪಾದಚಾರಿಗೆ ಗಾಯ.

            ದಿನಾಂಕ: 04-03-2022 ರಂದು ವಿರಾಜಪೇಟೆ ಪಟ್ಟಣದ ಗಡಿಯಾರ ಕಂಬದ ಬಳಿ ಮುಖ್ಯ  ರಸ್ತೆಯಲ್ಲಿ ಕೆಎ-12-ಎಂಎ-1599 ರ ಜೀಪನ್ನು ಚಾಲಕ ಅನಿಲ್‍ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕಾಳಪ್ಪ ಎಂಬುವವರಿಗೆ ಡಿಕ್ಕಿಪಡಿಸಿದ ಪರಿಣಾಮ ಕೆಳಗೆ ಬಿದ್ದಾಗ ಜೀಪಿನ ಚಕ್ರ ಕಾಲಿನ ಮೇಲೆ ಹರಿದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಜೂಜಾಟ ಪ್ರಕರಣ

            ದಿನಾಂಕ: 05-03-2022 ರಂದು ಸೋಮವಾರಪೇಟೆ  ತಾಲ್ಲೂಕು ಗಣಗೂರು ಗ್ರಾಮದ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಇಸ್ಪೀಟ್‌ ಜೂಜಾಟಾಡುತ್ತಿದ್ದ ಪ್ರಕರಣವನ್ನು ಸೋಮವಾರಪೇಟೆ  ಠಾಣೆ ಪಿಎಸ್‌ಐ ವಿರೂಪಾಕ್ಷ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ವಾಹನಗಳ ಬ್ಯಾಟರಿ ಮತ್ತು ಡೀಸೆಲ್‍ ಕಳವು ಪ್ರಕರಣ

ದಿನಾಂಕ: 04-03-2022 ರಂದು ರಾತ್ರಿ ಮಡಿಕೇರಿ ತಾಲ್ಲೂಕು ಮದೆನಾಡು ಗ್ರಾಮದ ಕರ್ತೋಜಿ ಎಂಬಲ್ಲಿ ಮಡಿಕೇರಿ ಕನ್ಸ್ಟ್ರಕ್ಷನ್‍ ಪ್ರೈವೇಟ್ ಲಿಮಿಟೆಡ್‍ ಸಂಸ್ಥೆಯವರಿಗೆ ಸೇರಿದ ಹಿಟಾಚಿ ಮತ್ತು ಲಾರಿಯ ಟ್ರೈಲರ್‍ ಗಳಿಂದ  ಒಟ್ಟು ₹. 41,500 ಮೌಲ್ಯದ 4 ಬ್ಯಾಟರಿ ಮತ್ತು 60ಲೀ ಡೀಸೆಲ್ ನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ಸಂಸ್ಥೆಯ ಸೂಪರ್‍ ವೈಸರ್ ನೀಡಿದ ಪುಕಾರಿನ ಮೇರೆ  ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 06-03-2022 03:27 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080