ಅಭಿಪ್ರಾಯ / ಸಲಹೆಗಳು

ಆನ್‍ ಲೈನ್ ವಂಚನೆ ಪ್ರಕರಣ

ದಿನಾಂಕ: 22-03-2021 ರಂದು ಮಡಿಕೇರಿ ತಾಲ್ಲೂಕು ಸಿಂಗತ್ತೂರು ಗ್ರಾಮದ ನಿವಾಸಿ ವಿಜಯಕುಮಾರ್‍ ಎಂಬುವವರಿಗೆ ಅಂಚೆ ಮೂಲಕ ಕ್ರೆಡಿಟ್ ಕಾರ್ಡ್‍ ಬಂದಿದ್ದು ಅದೇ ದಿನ 9905913541 ಸಂಖ‍್ಯೆಯಿಂದ ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬ ಕ್ರೆಡಿಟ್‍ ಕಾರ್ಡ್‍ ಚಾಲನೆಗೊಳಿಸಲು ಬ್ಯಾಂಕ್‍ನಿಂದ ಕರೆ ಮಾಡುತ್ತಿರುವುದಾಗಿ ಹೇಳಿ ಕಾರ್ಡ್ ನಂಬರ್‍ ಮತ್ತು ಒಟಿಪಿ ವಿವರ ಪಡೆದು ₹. 83,350 ಹಣವನ್ನು ಕ್ರೆಡಿಟ್‍ ಕಾರ್ಡ್‍ ಮೂಲಕ ತೆಗೆದು ವಂಚನೆ ಮಾಡಿದ್ದು ಈ ಬಗ್ಗೆ ದಿನಾಂಕ:05-04-2021 ರಂದು ನೀಡಿದ ಪುಕಾರಿನ ಮೇರೆ ಕೊಡಗು ಸೈಬರ್‍  ಅಪರಾಧ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಬ್ಯಾಂಕ್ ಅಥವಾ ಇತರೆ ಹಣಕಾಸು ಸಂಸ್ಥೆಗಳ ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿ ಮೋಸದಿಂದ ಆನ್ ಲೈನ್ ಮೂಲಕ ಹಣ ವರ್ಗಾವಣೆ ಮಾಡಿಕೊಂಡು ಸಾರ್ವಜನಿಕರಿಗೆ ವಂಚನೆ ಮಾಡುತ್ತಿರುವ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದೆ. ಯಾವುದೇ ಅಧಿಕೃತ ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಗಳು ಸಾರ್ವಜನಿಕರೊಂದಿಗೆ ಫೋನ್ ಮೂಲಕ ವ್ಯವಹರಿಸುವುದಿಲ್ಲ. ಸಾರ್ವಜನಿಕರು ತಮ್ಮ ಬ್ಯಾಂಕ್ ಖಾತೆ, ಕ್ಆರೆಡಿಟ್ನ್‍ ಕಾರ್ಡ್,  ಲೈನ್‍ ಹಣ ವರ್ಗಾವಣೆ, ಎ.ಟಿ.ಎಂ, ಮ್ಯೂಚುವಲ್ ಫಂಡ್, ಉಳಿತಾಯ ಪತ್ರಗಳು ಹಾಗೂ ಇತರ ಯಾವುದೇ ರೀತಿಯ ಹಣಕಾಸು ವಹಿವಾಟಿನ ಪ್ರಕ್ರಿಯೆಗಳ ಚಾಲನೆಯಲ್ಲಿ ತೊಡಕುಂಟಾದಾಗ ನೇರವಾಗಿ ಸಂಬಂದಪಟ್ಟ ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಗಳಿಗೆ ತೆರಳಿ ಪರಿಹರಿಸಿಕೊಳ್ಳುವುದು. ಹಣಕಾಸು ಸಂಸ್ಥೆಗಳ ಅಥವಾ ಯು.ಪಿ.ಐ ಆಧಾರಿತ ಆನ್ ಲೈನ್ ಸೇವಾ ಸಂಸ್ಥೆಗಳ ಹೆಸರಿನಲ್ಲಿ ಕರೆ ಮಾಡುವ ವ್ಯಕ್ತಿಗಳು ಬ್ಯಾಂಕ್ ಅಕೌಂಟ್ ನಂಬರ್, ಕ್ರೆಡಿಟ್‍ ಕಾರ್ಡ್‍ ನಂಬರ್‍, ಎ.ಟಿ.ಎಂ ನಂಬರ್, ಸಿವಿವಿ ನಂಬರ್, ಒ.ಟಿ.ಪಿ, ಎಟಿಎಂ ಪಿನ್ ನಂಬರ್, ಗೂಗಲ್ ಪೇ, ಫೋನ್ ಪೇ, ಪೇಟಿಎಂ, ಇತರೆ ಯು.ಪಿ.ಐ ಆಧಾರಿತ ಆನ್ ಲೈನ್ ಹಣಕಾಸು ವರ್ಗಾವಣೆ ಅಪ್ಲಿಕೇಶನ್ ಗಳ ಕ್ಯೂ.ಆರ್ ಕೋಡ್‍ ಸ್ಕ್ಯಾನ್‍ ಮಾಡಲು ಹೇಳಿ ಹಾಗೂ ಕೋಡ್ ಗಳನ್ನು ಕೇಳಿ ಪಡೆದು ವಂಚನೆ ಮಾಡುತ್ತಿದ್ದು ಇಂತಹ ಗೌಪ್ಯ ಸಂಖ್ಯೆಗಳನ್ನು ಯಾರಿಗೂ ನೀಡದಂತೆ ಸೂಚಸಲಾಗಿದೆ.

 ಕೊಲೆ ಬೆದರಿಕೆ ಪ್ರಕರಣ

                ದಿನಾಂಕ: 05-04-2021 ರಂದು ವಿರಾಜಪೇಟೆ ತಾಲ್ಲೂಕು ಬಾಡಗ ಬಾಣಂಗಾಲ ಗ್ರಾಮದ ನಿವಾಸಿ ಸಿ.ಟಿ ಪೊನ್ನಪ್ಪ ಮತ್ತು ಅದೇ ಗ್ರಾಮದ ನಿವಾಸಿಗಳಾದ ಮುತ್ತಣ್ಣ ಮತ್ತು ಇತರರರು ಜಾಗದ ವಿಚಾರದಲ್ಲಿ ವೈಷಮ್ಯದಿಂದ ಪರಸ್ಪರ ಅವಾಚ್ಯ ಪದಗಳಿಂದ ಬೈದು ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ಉಭಯ ಕಡೆಯವರು ನೀಡಿದ ಪುಕಾರಿನ ಮೇರೆ ಸಿದ್ದಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

            ದಿನಾಂಕ: 05-04-2021 ರಂದು ಸೋಮವಾರಪೇಟೆ ತಾಲ್ಲೂಕು ಹಾರಂಗಿ ಗ್ರಾಮದ  ನಿವಾಸಿ  ಸತ್ಯಕುಮಾರ್‍ ಎಂಬುವವರು  ಅವರ ಮನೆಯ  ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಮಾಡುತ್ತಿದ್ದ ಪ್ರಕರಣವನ್ನು ಕುಶಾಲನಗರ ಗ್ರಾಮಾಂತರ  ಠಾಣೆ ಪಿಎಸ್‍ಐ ಶಿವಶಂಕರ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಕಾರು ಡಿಕ್ಕಿ, ಪಾದಚಾರಿಗೆ ಗಾಯ.

                ದಿನಾಂಕ: 04-04-2021 ರಂದು ವಿರಾಜಪೇಟೆ ತಾಲ್ಲೂಕು ಕೈಕೇರಿ ಗ್ರಾಮದ ಬಳಿ ಮುಖ‍್ಯ ರಸ್ತೆಯಲ್ಲಿ ಕೆಎ-12-ಎಂಎ-7208 ರ ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ನಡೆದುಕೊಂಡು ಹೋಗುತ್ತಿದ್ದ ಗೋಪಾಲಕೃಷ್ಣ ಎಂಬುವವರಿಗೆ ಡಿಕ್ಕಿಪಡಿಸದ ಪರಿಣಾಮ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಳವು ಪ್ರಕರಣ

                ದಿನಾಂಕ: 04-04-2021 ರಂದು ವಿರಾಜಪೇಟೆ ತಾಲ್ಲೂಕು ಅರಮೇರಿ ಗ್ರಾಮದ ನಿವಾಸಿ ಪಿ.ಎಂ ನಂದ ಎಂಬುವವರ ಮನೆಯ ಬಾಗಿಲಿನ ಬೀಗವನ್ನು ಯಾರೋ ಕಳ್ಳರು ಮುರಿದು ಒಳನುಗ್ಗಿ ಗಾಡ್ರೆಜ್‍ ಬೀರುವಿನಲ್ಲಿಟ್ಟಿದ್ದ ₹. 3,67,000 ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 06-04-2021 01:32 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ