ಅಭಿಪ್ರಾಯ / ಸಲಹೆಗಳು

ಸುಲಿಗೆ ಪ್ರಕರಣ

            ದಿನಾಂಕ: 05-04-2022 ರಂದು ವಿರಾಜಪೇಟೆ ತಾಲ್ಲೂಕು ಕೆ.ಬೋಯಿಕೇರ ಗ್ರಾಮದ ನಿವಾಸಿ ರಾಜಮ್ಮ ಎಂಬುವವರು ವಿರಾಜಪೇಟೆ ನಗರದಲ್ಲಿ ಅವರ ಪತಿಯೊಂದಿಗೆ ಇದ್ದಾಗ ಈ ಹಿಂದೆ ನೋಡಿ ಪರಿಚಯವಿದ್ದ ಒಬ್ಬ ಗಂಡಸು ಮತ್ತು ಹೆಂಗಸು ಮಣಿ ನಂಜಪ್ಪ ಎಂಬುವವರ ಮನೆಯಲ್ಲಿ ತಿಂಗಳಿಗೆ 9000 ರೂ ಸಂಬಂಳಕ್ಕೆ ಕೆಲಸ ಕೊಡಿಸುವುದಾಗಿ ಹೇಳಿ ಆಟೋ ರಿಕ್ಷಾದಲ್ಲಿ ಕರೆದುಕೊಂಡು ಹೋಗಿ ಅರ್ಧ ದಾರಿಯಲ್ಲಿ ಆಟೋ ನಿಲ್ಲಿಸಿ ಮೂವರೂ ಕೆಳಗೆ ಇಳಿದರು. ನಂತರ ಸ್ವಲ್ಪ ದೂರ ನಡೆದುಕೊಂದು ಹೋಗಬೇಕಾಗಿ ತಿಳಿಸಿ ರಾಜಮ್ಮರವರು ಮುಂದೆ ಹೋಗುತ್ತಿದ್ದಾಗ ಹಿಂಬದಿಯಿಂದ ತಳ್ಳಿ ಕೆಳಗೆ ಬೀಳಸಿ ಕಿವಿಯಲ್ಲಿದ್ದ ಓಲೆ ಕೋಡುವಂತೆ ತಿಳಿಸಿ ಕೊಡದಿದ್ದರೆ ಕೊಲೆ ಮಾಡುವುದಾಗಿ ಹೇಳಿ ಕುತ್ತಿಗೆಯನ್ನು ಬಟ್ಟಿ ಸುತ್ತಿ ಹಿಡಿದಾಗ ಪ್ರಜ್ಞೆ ತಪ್ಪಿರುತ್ತಾರೆ. ನಂತರ ಎಚ್ಚರಗೊಂಡು ನೋಡಿದಾಗ ಆ ಇಬ್ಬರು ವ್ಯಕ್ತಿಗಳು ಕಿವಿಯಲ್ಲಿದ್ದ ₹. 2000 ಮೌಲ್ಯದ ಓಲೆಗಳನ್ನು ಬಿಚ್ಚಿಕೊಂಡು ಪರಾರಿಯಾಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 05-04-2022 ರಂದು ವಿರಾಜಪೇಟೆ ತಾಲ್ಲೂಕು ಕೆದಮುಳ್ಳೂರು ಗ್ರಾಮದ ಬಳಿ ಸಾರ್ವಜನಿಕ ರಸ್ತೆಯಲ್ಲಿ ಕೆಎ-12-ಕೆ-3416 ರ ಸ್ಕೂಟರನ್ನು ಸವಾರ ಮಹೇಂದ್ರ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗು ಎದುರುಗಡೆಯಿಂದ ಬರುತ್ತಿದ್ದ ಕೆಎ-11-ಎಕ್ಸ್-7961 ರ ಬೈಕ್‌ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್‌ ಸವಾರ ಸುದಿನ್‌ ಎಂಬುವವರು ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಪಡಿತರ ಅಕ್ಕಿ ಅಕ್ರಮ ಸಾಗಾಟ ಪ್ರಕರಣ

            ದಿನಾಂಕ: 04-04-2022 ರಂದು ವಿರಾಜಪೇಟ ತಾಲ್ಲೂಕು ಮಾಕುಟ್ಟ ಚೆಕ್‌ ಪೋಸ್ಟ್‌ ಮೂಲಕ ಕೇರಳ ರಾಜ್ಯಕ್ಕೆ ಕರ್ನಾಟಕ ರಾಜ್ಯ ಸರ್ಕಾರವು ವಿತರಿಸುವ ಪಡಿತರ ಅಕ್ಕಿಯನ್ನು ಕೆಎ-01-ಎಇ-9054 ಮತ್ತು ಕೆಎ-12-ಬಿ 8084 ರ  ಲಾರಿಗಳಲ್ಲಿ ತಲಾ 50 ಕೆ.ಜಿ ತೂಕದ 250 ಚೀಲಕ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವು ಚೆಕ್‌ ಪೋಸ್ಟ್‌ ಕರ್ತವ್ಯದಲ್ಲಿದ್ದ ಪೊಲೀಸರು ಪರಿಶೀಲನೆ ಮಾಡುವಾಗ ಪತ್ತೆಯಾಗಿದ್ದು ಈ ಬಗ್ಗೆ ಕಂದಾಯ ಇಲಾಖೆ ಅಧಿಕಾರಿಗಳು ಪರಿಶೀಲನೆ ಮಾಡಿ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 06-04-2022 05:05 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080