ಅಭಿಪ್ರಾಯ / ಸಲಹೆಗಳು

ಫೇಸ್‌ಬುಕ್‌ ನಕಲಿ ಖಾತೆ ಪ್ರಕರಣ

            ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರು ಅವರ ವೈಯಕ್ತಿಕ  ಫೇಸ್‌ ಬುಕ್‌ ಖಾತೆ ಹೊಂದಿದ್ದು ಯಾರೋ ವಂಚಕರು ಈ ಖಾತೆಯ ಹೆಸರು ಮತ್ತು ಭಾವಚಿತ್ರ ಬಳಸಿ ನಕಲಿ ಫೇಸ್‌ ಬುಕ್‌ ಖಾತೆ ತೆರೆದು ಶಾಸಕರ ಫೇಸ್‌ಬುಕ್‌ ಗೆಳೆಯರೊಂದಿಗೆ ₹. 30,000 ಹಣವನ್ನು ಗೂಗಲ್‌ ಪೇ ಮೂಲಕ ಕಳುಹಿಸುವಂತ ಸಂದೇಶ ಕಳುಹಿಸಿದ್ದು ಈ ಬಗ್ಗೆ ಶಾಸಕರ ಆಪ್ತ ಸಹಾಯಕರಾದ ರವಿ ಎಂಬುವವರು ದಿನಾಂಕ: 05-06-2021 ರಂದು ನೀಡಿದ ಪುಕಾರಿನ ಮೇರೆ ಕೊಡಗು ಸೈಬರ್‌ ಅಪರಾಧ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಹಲ್ಲೆ ಪ್ರಕರಣ

            ದಿನಾಂಕ: 05-06-2021 ರಂದು ಸೋಮವಾರಪೇಟೆ ತಾಲ್ಲೂಕು ಇಗ್ಗೋಡ್ಲು ಗ್ರಾಮದ ನಿವಾಸಿ ನಾಣಿಯಪ್ಪ ಎಂಬುವವರಿಗೆ ಅದೇ ಗ್ರಾಮದ ನಿವಾಸಿಗಳಾದ ಚಂಗಪ್ಪ, ಮಹೇಶ್‌, ನಾಗೇಶ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಆಕಸ್ಮಿಕವಾಗಿ ಮರದಿಂದ ಬಿದ್ದು ವ್ಯಕ್ತಿ ಸಾವು.

            ದಿನಾಂಕ: 05-06-2021 ರಂದು ಮಡಿಕೇರಿ ತಾಲ್ಲೂಕು ಅರೆಕಾಡು ಗ್ರಾಮದ ಬಿದ್ದಪ್ಪ ಎಂಬುವವರ ಕಾಫಿ ತೋಟದಲ್ಲಿ ಮರಕಪಾತು ಮಾಡುತ್ತಿದ್ದ ವೇಳೆ ಅದೇ ಗ್ರಾಮದ ನಿವಾಸಿ  ಹಂಸ ಎಂಬುವವರು ಆಕಸ್ಮಿಕವಾಗಿ ಮರದಿಂದ ಬಿದ್ದು ಗಾಯಗೊಂಡವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಿದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದು ಈ ಬಗ್ಗೆ ನೀಡಿದ ದೂರಿನ ಮೇರೆ ಸಿದ್ದಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಆಕಸ್ಮಿಕವಾಗಿ ಬಿದ್ದು ವ್ಯಕ್ತಿ ಸಾವು     

     ದಿನಾಂಕ: 04-06-2021 ರಂದು ಸೋಮವಾರಪೇಟೆ ತಾಲ್ಲೂಕು ಬಸವನಹಳ್ಳಿ ಗ್ರಾಮದ ನಿವಾಸಿ ರವಿ ಎಂಬುವವರು ವಿಪರೀತ ಮದ್ಯ ಸೇವನೆ ಮಾಡಿ ಮೂತ್ರ ಮಾಡಲು ಮನೆಯ ಹೊರಗಡೆ ಹೋಗಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಚರಂಡಿಗೆ ಬಿದ್ದು ಗಾಯಗೊಂಡವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಿದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದು ಈ ಬಗ್ಗೆ ನೀಡಿದ ದೂರಿನ ಮೇರೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 06-06-2021 12:52 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ