ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ ಪ್ರಕರಣ

            ದಿನಾಂಕ: 06-04-2021 ರಂದು ಪೊನ್ನಂಪೇಟೆ ತಾಲ್ಲೂಕು ಲಕ್ಕುಂದ ಗ್ರಾಮದ  ನಿವಾಸಿ  ಸುಬ್ಬಯ್ಯ ಎಂಬುವವರು  ಅವರ ಅಂಗಡಿಯ  ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಸಾರ್ವಜನಿಕರಿಗೆ ಮದ್ಯ ಮಾರಾಟ  ಮಾಡುತ್ತಿದ್ದ ಪ್ರಕರಣವನ್ನು ಕುಟ್ಟ ಠಾಣೆ ಪಿಎಸ್‍ಐ ಹೆಚ್‍.ಜೆ ಚಂದ್ರಪ್ಪ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

            ದಿನಾಂಕ: 06-04-2021 ರಂದು ಸೋಮವಾರಪೇಟೆ ತಾಲ್ಲೂಕು ಕೂಡಿಗೆ ಗ್ರಾಮದ  ನಿವಾಸಿ  ಶಿವಪ್ಪ ಎಂಬುವವರು  ಅವರ ಮನೆಯ  ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಮಾಡುತ್ತಿದ್ದ ಪ್ರಕರಣವನ್ನು ಕುಶಾಲನಗರ ಗ್ರಾಮಾಂತರ  ಠಾಣೆ ಪಿಎಸ್‍ಐ ಶಿವಶಂಕರ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಕಾಡಾನೆ ದಾಳಿ, ವೃದ್ದ ಮಹಿಳೆ ಸಾವು.

                ದಿನಾಂಕ: 05-04-2021 ರಂದು ವಿರಾಜಪೇಟೆ ತಾಲ್ಲೂಕು ತೂಬನಕೊಲ್ಲಿ ಬಿಬಿಟಿಸಿ ಎಸ್ಟೇಟ್‍ ಲೈನ್‍ ಮನೆಯಲ್ಲಿ ವಾಸವಿದ್ದ ಲಕ್ಷ್ಮಿ ಎಂಬುವವರು ರಾತ್ರಿ ಮನೆಯ ಹೊರಗೆ ಅಂಗಳಕ್ಕೆ ಹೋದಾಗ ಕಾಡಾನೆ ದಾಳಿ ಮಾಡಿದ ಪರಿಣಾಮ ಗಾಯಗೊಂಡವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾರೆ. ಈ ಬಗ್ಗೆ ನೀಡಿದ ದೂರಿನ ಮೇರೆ ಸಿದ್ದಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕೊಲೆ ಆರೋಪಿ ಆತ್ಮಹತ್ಯೆ.

                ತನ್ನ ಪತ್ನಿಯ ಮೇಲಿನ ವೈಷಮ್ಯದಿಂದ ಪತ್ನಿಹಾಗೂ ಆಕೆಯ ಜೊತೆಯಲ್ಲಿ ಮಲಗಿದ್ದವರ ಮೇಲೆ ಪೆಟ್ರೋಲ್‍ ಸುರಿದು ಬೆಂಕಿ ಹಚ್ಚಿ 8 ಅಮಾಯಕರ ಸಾವಿಗೆ ಕಾರಣನಾಗಿದ್ದ ಆರೋಪಿ ಬೋಜ ಎಂಬಾತನ ಮೃತ ಶರೀರ ಕಾಫಿ ತೋಟವೊಂದರಲ್ಲಿ ಪತ್ತೆಯಾಗಿರುತ್ತದೆ.

          ದಿನಾಂಕ: 02-04-2020 ರಂದು ರಾತ್ರಿ ಆರೋಪಿ ಬೋಜ ರವರು ಎಲ್ಲರೂ ಮಲಗಿದ್ದಾಗ ಮನೆಯ ಬಾಗಿಲುಗಳಿಗೆ ಬೀಗ ಹಾಕಿ ಮೇಲ್ಚಾವಣಿ ಹಂಚನ್ನು ತೆಗೆದು ತನ್ನ ಪತ್ನಿಯನ್ನು ಕೊಲ್ಲುವ ಉದ್ದೇಶದಿಂದ ಪತ್ನಿ ಬೇಬಿ ಮತ್ತು ಮಕ್ಕಳು ಮಲಗಿದ್ದಲ್ಲಿಗೆ ಪೆಟ್ರೋಲ್‍ ಸುರಿದು ಬೆಂಕಿ ಹಚ್ಚಿದ್ದು ಇದರಿಂದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು ಮತ್ತು ಗಾಯಗೊಂಡಿದ್ದ ಐವರು  ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು ಈ ಬಗ್ಗೆ ಪೊನ್ನಂಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು.

                ದಿನಾಂಕ: 06-04-2021 ರಂದು ಮುಗುಟಗೇರಿ ಗ್ರಾಮದ ಬಿದ್ದಪ್ಪ ಎಂಬುವವರ ತೋಟದ ಬಳಿ ಸಿದ್ದು ಎಂಬುವವರು ಹೋಗುತ್ತಿರುವಾಗ ಕಾಫಿ ತೋಟದೊಳಗೆ ಬೋಜ ರವರು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವುದು ಪತ್ತೆಯಾಗಿದ್ದು ಈ ಬಗ್ಗೆ ನರೇಶ್‍ ಎಂಬುವವರು ನೀಡಿದ ದೂರಿನ ಮೇರೆ ಪೊನ್ನಂಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 07-04-2021 04:15 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ