ಅಭಿಪ್ರಾಯ / ಸಲಹೆಗಳು

ಕಳವು ಪ್ರಕರಣ ಪತ್ತೆ, ಆರೋಪಿಗಳ ಬಂಧನ:

            ದಿನಾಂಕ:05/08/2021 ರಂದು ಗೋಣಿಕೊಪ್ಪ ಠಾಣಾ ಅತ್ತೂರು ಗ್ರಾಮದ ಕೆ.ಎಸ್.ಮಾಚಯ್ಯರವರ ಮನೆಯಲ್ಲಿ ಹಾಡುಹಗಲೇ ಕಳ್ಳತನ ಮಾಡಿದ್ದ  ಆರೋಪಿತರನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಗೋಣಿಕೊಪ್ಪ ಪೊಲೀಸ್ ವೃತ್ತ ನಿರೀಕ್ಷಕರು ಮತ್ತು ಸಿಬ್ಬಂದಿಯವರು ಯಶಸ್ವಿಯಾಗಿರುತ್ತಾರೆ.

            ಅತ್ತೂರು  ಗ್ರಾಮದ ನಿವಾಸಿ ಕೆ.ಎಸ್.ಮಾಚಯ್ಯ ರವರು ದಿನಾಂಕ:05/08/2021 ರಂದು ಬೆಳಿಗ್ಗೆ 09.00 ಗಂಟೆಗೆ ಮನೆಗೆ ಬೀಗಹಾಕಿಕೊಂಡು ಅಮ್ಮತ್ತಿಯಲ್ಲಿರುವ ತಮ್ಮ ಕಾಫಿ ತೋಟಕ್ಕೆ ಹೋಗಿದ್ದು, ಸಂಜೆ ಮನೆಗೆ ವಾಪಾಸ್ಸು ಬಂದು ನೋಡುವಾಗ್ಗೆ ಮನೆಯ ಹೆಂಚನ್ನು ತೆಗೆದು ಯಾರೋ ಕಳ್ಳರು ಒಳನುಗ್ಗಿ ಗಾಡ್ರೇಜ್ನಲ್ಲಿಟ್ಟಿದ್ದ 50 ಸಾವಿರ ನಗದು ಹಣ ಮತ್ತು ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಸಂಬಂಧ ನೀಡಿದ ಪುಕಾರಿಗೆ ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಮೊ.ಸಂ.98/2021 ಕಲಂ:454, 380 ಐಪಿಸಿ ರೀತ್ಯ ಪ್ರಕರಣ ದಾಖಲಾಗಿ ತನಿಖೆಯನ್ನು ಕೈಗೊಳ್ಳಲಾಗಿತ್ತು.

            ವಿರಾಜಪೇಟೆ ಉಪ-ವಿಭಾಗದ ಪೊಲೀಸ್ ಉಪ-ಅಧೀಕ್ಷಕರವರ ಮಾರ್ಗದರ್ಶನದಲ್ಲಿ ಸಿಪಿಐ ಗೋಣಿಕೊಪ್ಪ ಮತ್ತು ಸಿಬ್ಬಂದಿಯವರ ತಂಡ ದಿನಾಂಕ:07/02/2022 ರಂದು 1). ಆನಂದ @ ಅಮ್ಮಿ @ ಮಮ್ಮಿ ತಂದೆ:ಪೌತಿ ಹನುಮಂತ, ಪ್ರಾಯ 37 ವರ್ಷ, ಗುಜರಿ ಆಯುವ ಕೆಲಸ, ಸ್ವಂತ ಊರು:ಗುಡ್ಡೇನಹಳ್ಳಿ, ಕೊಪ್ಪ, ಪಿರಿಯಾಪಟ್ಣ, ಹಾಲಿ ವಾಸ:ವಾಡಿಕ್ಕಲ್, ತಾಮರಶೇರಿ, ಕೇರಳ ರಾಜ್ಯ. 2). ಶಿವಕುಮಾರ್ @ ಚಂದ್ರಕುಮಾರ್ @ ಕುಮಾರ್ ತಂದೆ:ಚಿನ್ನಪ್ಪ ಗೌಡರ್, ಪ್ರಾಯ 38 ವರ್ಷ, ಕೂಲಿ ಕೆಲಸ, ಸ್ವಂತ ಊರು:ಪುಟಾಣಿನಗರ, ಮಡಿಕೇರಿ. ಹಾಲಿವಾಸ: ಪನಮರಂ, ವಯನಾಡು ಜಿಲ್ಲೆ, ಕೇರಳ ರಾಜ್ಯ. 3). ಗೋಪಾಲ ತಂದೆ:ಲೇಟ್ ಕೃಷ್ಣ, ಪ್ರಾಯ 48 ವರ್ಷ, ಗುಜರಿ ಕೆಲಸ, ಹುಣಸೆವಳ್ಳಿ, ಬಾರೆ,ಆಲೂರು ಗ್ರಾಮ, ಹಾಸನ ಜಿಲ್ಲೆ. ಈ ಮೂವರು ಆರೋಪಿತರನ್ನು ಪತ್ತೆ ಹಚ್ಚಿ ಕಳುವಾದ 3 ಚಿನ್ನದ ನಾಣ್ಯಗಳು, ಒಂದು ಚಿನ್ನದ ಸರ, 6 ಬೆಳ್ಳಿಯ ನಾಣ್ಯಗಳು ಸೇರಿ ಒಟ್ಟು 16 ಗ್ರಾಂ ಚಿನ್ನಾಭರಣ, 30 ಗ್ರಾಂ ಬೆಳ್ಳಿ ಹಾಗೂ ರೂ.1600/- ರೂ ನಗದು ಹಣ ಸೇರಿ ಒಟ್ಟು ರೂ.76600/- ಮೌಲ್ಯದ ಸ್ವತ್ತುಗಳನ್ನು  ವಶಪಡಿಸಿಕೊಂಡಿರುತ್ತಾರೆ.   

            ಈ ಪ್ರಕರಣವನ್ನು  ವಿರಾಜಪೇಟೆ ಉಪವಿಭಾಗ ಡಿವೈ.ಎಸ್‍.ಪಿ ಸಿ.ಟಿ.ಜಯಕುಮಾರ್ ರವರ ಮಾರ್ಗದರ್ಶನದಲ್ಲಿ ಗೋಣಿಕೊಪ್ಪ ವೃತ್ತ ನಿರೀಕ್ಷಕರಾದ ಎಸ್.ಎನ್.ಜಯರಾಮ್, ಎಎಸ್ಐ ಸುಬ್ರಮಣಿ, ಎಎಸ್ಐ ದೇವರಾಜು ಹಾಗೂ ಸಿಬ್ಬಂದಿಯವರಾದ ಹೆಚ್.ಕೆ.ಕೃಷ್ಣ, ಪಿ.ಎ.ಮಹಮದ್ ಅಲಿ, ಎಂ.ಡಿ.ಮನು, ಅಬ್ದುಲ್ ಮಜೀದ್, ಹರೀಶ, ಹೇಮಲತಾ ರೈ  ಮತ್ತು ಚಾಲಕರಾದ ಬಷೀರ್ರವರು ಪತ್ತೆ ಮಾಡಿದ್ದು, ಪೊಲೀಸ್‍ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯವನ್ನು ಶ್ಲಾಘಿಸಲಾಗಿದೆ.  

ರಸ್ತೆ ಅಪಘಾತ ಪ್ರಕರಣ

          ದಿನಾಂಕ 07-02-2022 ರಂದು ಮಡಿಕೇರಿ ತಾಲ್ಲೂಕು ನಾಪೋಕ್ಲು ಗ್ರಾಮದ ಹಳೆ ತಾಲ್ಲೂಕು ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಎ-8743 ರ ಆಟೋ ರಿಕ್ಷಾವನ್ನು ಚಾಲಕ ನಿಶಾಂತ್ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-20-ಸಿ-779 ರ ಬಸ್‍ ಗೆ ಡಿಕ್ಕಿಪಡಿಸಿದ ಪರಿಣಾಮ ಆಟೋ ಚಾಲಕ ಮತ್ತು ಪ್ರಯಾಣಿಕ ಅಪಪ್ಆಜಿ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ಬಸ್  ಚಾಲಕ ಕಿಶೋರ್‍ ಎಂಬುವವರು ನೀಡಿದ ಪುಕಾರಿನ ಮೇರೆ ನಾಪೋಕ್ಲು ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕೊಲೆ ಪ್ರಕರಣ

          ದಿನಾಂಕ: 06-02-2022 ರಂದು ಪೊನ್ನಂಪೇಟೆ ತಾಲ್ಲೂಕು ಟಿ.ಶೆಟ್ಟಿಗೇರಿ ಗ್ರಾಮದ ನಿವಾಸಿಗಳಾದ ಪ್ರೇಮ ಮತ್ತು ವೀಣಾ ಎಂಬುವವರು ಅವರ ತೋಟದ ಬಳಿ ನಡೆದುಕೊಂಡು ಹೋಗುತ್ತಿರುವಾಗ ಯಾರೋ ವೈಷಮ್ಯದಿಂದ ಹರಿತವಾದ ಆಯುಧದಿಂದ ತಲೆ, ಕುತ್ತಿಗೆಗೆ ಹಲ್ಲೆ ಮಾಡಿದ ಪರಿಣಾಮ ಪ್ರೇಮ ರವರು ಮೃತಪಟ್ಟು, ವೀಣಾ ರವರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಶ್ರೀಮಂಗಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಸಹಕಾರ ಸಂಘದ ಹಣ ದುರುಪಯೋಗ ಪ್ರಕರಣ

                ಕುಶಾಲನಗರ ತಾಲ್ಲೂಕು ಬಸವನಹಳ್ಳಿ ಗ್ರಾಮದಲ್ಲಿರುವ ಲ್ಯಾಂಪ್ಸ್ ಸಹಕಾರ ಸಂಘದ 2018-19 ಮತ್ತು 2019-20 ರ ಅವಧಿಯಲ್ಲಿ ಎಸ್‍.ಎನ್‍ ರಾಜಾರಾವ್‍ ಎಂಬುವವರು ಅಧ್ಯಕ್ಷರಾಗಿದ್ದರು. ಈ ಅವಧಿಯಲ್ಲಿ ಸಂಘದಿಂದ ಕಿರು ಅರಣ್ಯ ಉತ್ಪನ್ನ ಮುಂಗಡ ಮತ್ತು ವ್ಯಾಪಾರ ಮುಂಗಡ ಎಂಬ ಲೆಕ್ಕ ತೋರಿಸಿ ಅಂತಹ ಯಾವುದೇ ಉದ್ದೇಶಗಳಿಗೆ ಹಣವನ್ನು ಬಳಕೆ ಮಾಡದೇ ಹಂತ ಹಂತವಾಗಿ ಒಟ್ಟು ₹. 23,86,855 ಹಣವನ್ನು ದುರುಪಯೋಗ ಮಾಡಿಕೊಂಡಿರುವುದು ಸಂಘದ ಲೆಕ್ಕಪರಿಶೋಧನೆಯಿಂದ ಕಂಡು ಬಂದಿರುತ್ತದೆ. ಈ ಬಗ್ಗೆ ಸದರಿಯವರಿಗೆ  ಸಂಘದಿಂದ ನೋಟಿಸ್ ಜಾರಿ ಮಾಡಿದಾಗ ಅವರ ತಪ್ಪನ್ನು ಒಪ್ಪಿಕೊಂಡು ಹಣ ಮರುಪಾವತಿಸಿಲು ಸಮಯಾವಕಾಶ ಕೋರಿದ್ದು ಈ ಬಗ್ಗೆ ಸಂಘದ ಹಾಲಿ ಅಧ್ಯಕ್ಷರು ದಿನಾಂಕ: 07-02-2022 ರಂದು ನೀಡಿದ ಪುಕಾರಿನ ಮೇರೆ  ಕುಶಾಲನಗರ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಳವು ಪ್ರಕರಣ

                ದಿನಾಂಕ: 06-02-2022 ರಂದು ವಿರಾಜಪೇಟೆ ತಾಲ್ಲೂಕು ಅರಮೇರಿ ಗ್ರಾಮದ ನಿವಾಸಿ ತಿಮ್ಮಯ್ಯ ಎಂಬುವವರು ಅವರ ತೋಟದಿಂದ ಕಾಫಿಯನ್ನು ಕುಯ್ದು ತೋಟದಲ್ಲಿ ಇಟ್ಟಿರುವಾಗ 6 ಚೀಲದಲ್ಲಿಟ್ಟಿದ್ದ ₹. 10,000 ಮೌಲ್ಯದ ಅಂದಾಜು 300 ಕೆಜಿ ಹಸಿ ಕಾಫಿಯನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು, ವಿರಾಜಪೇಟೆ ಚಿಕ್ಕಪೇಟೆ ನಿವಾಸಿ ಕಿಶೋರ್ ಎಂಬುವವರ ಮೇಲೆ ಗುಮಾನಿ ಇರುವ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 08-02-2022 07:15 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080