ಅಭಿಪ್ರಾಯ / ಸಲಹೆಗಳು

ಅಕ್ರಮ ಜೂಜಾಟ ಪ್ರಕರಣ

ಜಿಲ್ಲೆಯ ಶನಿವಾರಸಂತೆ ಠಾಣಾ ವ್ಯಾಪ್ತಿಯ ಕೂಡ್ಲೂರು ಗ್ರಾಮದಲ್ಲಿ ದಾಳಿ ಮಾಡಿದ ಶನಿವಾರಸಂತೆ ಪೊಲೀಸರು ಇಸ್ಪೀಟು ಜೂಜಾಟದಲ್ಲಿ ತೊಡಗಿದ್ದ 13 ಜನರನ್ನು ಬಂಧಿಸಿ, ಜೂಜಾಟಕ್ಕೆ ಬಳಸಿದ ₹. 30,450 ರೂ ನಗದು, 8 ವಾಹನಗಳನ್ನು ವಶಕ್ಕೆ ಪಡೆದಿದ್ದು, ಪೊಲೀಸರ ಈ ಕಾರ್ಯವನ್ನು ಶ್ಲಾಘಿಸಿದೆ

 ದಿನಾಂಕ 06.09.2021ರಂದು ದೊರೆತ ಖಚಿತ ಮಾಹಿತಿ ಮೇರೆಗೆ, ಶನಿವಾರಸಂತೆ ಠಾಣೆಯ ಪೋಲಿಸ್ ನಿರೀಕ್ಷಕರಾದ ಎಸ್. ಪರಶಿವಮೂರ್ತಿ ಮತ್ತು ಸಿಬ್ಬಂದಿಗಳು ಕೂಡ್ಲೂರು ಬೆಸೂರು ರಸ್ತೆಯ ಬಳಿ ದಾಳಿ ಮಾಡಿ ,ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 13ಜನ ಆರೋಪಿಗಳನ್ನು ದಸ್ತಗಿರಿ ಮಾಡಿದ್ದು ಜೂಜಾಟದಲ್ಲಿ ಪಣವಾಗಿಟ್ಟಿದ್ದ ರೂ 30,450 ಮತ್ತು 8 ವಾಹನಗಳನ್ನು ವಶ ಪಡಿಸಿ ಕೊಂಡಿರುತ್ತಾರೆ.

 ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ಪ್ರಕರಣ

            ದಿನಾಂಕ: 07-09-2021 ರಂದು ಸೋಮವಾರಪೇಟೆ ಪಟ್ಟಣದ ಗಣಪತಿ ದೇವಸ್ಥಾನದ ಬಳಿ ಹಣಕೋಡು ಗ್ರಾಮದ ನಿವಾಸಿ ರೌಡಿ ಶೀಟರ್‌ ಸುರೇಶ್‌ ಎಂಬುವವರು ಕಾರನ್ನು ರಸ್ತೆಗೆ ಅಡ್ಡವಾಗಿ ನಿಲ್ಲಿಸಿ ಸಾರ್ವಜನಿಕರಿಗೆ ತೊಂದೆರೆ ಕೊಡುತ್ತಿದ್ದರು. ಈ ಬಗ್ಗೆ ದೂರು ಬಂದ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪರಿಶೀಲನೆಗೆ ಮಾಡುವಾಗ ಸುರೇಶ್‌ ರವರು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ಮಾಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸೋಮವಾಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಕಳವು ಪ್ರಕರಣ

            ದಿನಾಂಕ: 06-09-2021 ರಂದು ಪೊನ್ನಂಪೇಟೆ ತಾಲ್ಲೂಕು ದೇವರಪುರ ಗ್ರಾಮದಲ್ಲರುವ ಶಿವಪುರಿ ಮಠದ ಕಿಟಕಿಯ ಸರಳುಗಳನ್ನು ಯಾರೋ ಕಳ್ಳರು ಮುರಿದು ಒಳನುಗ್ಗಿ ₹ 97,000 ಮೌಲ್ಯದ ವಿವಿಧ ದೇವರುಗಳ ಪ್ರತಿಮೆಗಳು ಹಾಗೂ ಚಿನ್ನಾಭರಣವನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ದೂರಿನ ಮೇರೆ ಗೋಣಿಕೊಪ್ಪ  ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 08-09-2021 06:03 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ