ಅಭಿಪ್ರಾಯ / ಸಲಹೆಗಳು

ಹಲ್ಲೆ ಪ್ರಕರಣ

            ದಿನಾಂಕ: 07-11-2021 ರಂದು ಮಡಿಕೇರಿ ನಗರದ ನಿವಾಸಿ ಭಾಗಮಂಡಲ ಕೆನರಾ ಬ್ಯಾಂಕ್ ಉದ್ಯೋಗಿಯಾಗಿರುವ ಸತೀಶ್‌ ಬಾಬು ಎಂಬುವವರು ಹೊಟೇಲೊಂದರಲ್ಲಿ ಊಟಕ್ಕಾಗಿ ಹೋಗಿರುವಾಗ ತಾವೂರು ಗ್ರಾಮದ ನಿವಾಸಿ ಸುದೀರ್‌ ಎಂಬುವವರು ಬ್ಯಾಂಕ್‌ ವ್ಯವಹಾರದ ಬಗ್ಗೆ ಜಗಳ ಮಾಡಿ ಅವಾಚ್ಯ ಪದಗಳಿಂದ ಬೈದ ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಭಾಗಮಂಡಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಳವು ಪ್ರಕರಣ  

            ದಿನಾಂಕ: 05-11-2021 ರಂದು ಕುಶಾಲನಗರದ ಬಸವೇಶ್ವರ ಬಡಾವಣ ನಿವಾಸಿ ಬಶೀರ್‌ ಎಂಬುವವರು ಸಂಬಂದಿಕರ ವಿವಾಹ ಕಾರ್ಯಕ್ರಮಕ್ಕೆ ಕಾಸರಗೋಡು ಗೆ ಹೋಗಿ ವಾಪಾಸ್ಸು ದಿನಾಂಕ: 07-11-2021 ರಂದು ಬಂದು ನೋಡಿದಾಗ ಯಾರೋ ಕಳ್ಳರು ಮನೆಯ ಹಿಂಬಾಗಿಲನ್ನು ಮುರಿದು ಕಪಾಟಿನಲ್ಲಿ ಇಟ್ಟಿದ್ದ ₹. 1,32,881 ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

            ದಿನಾಂಕ: 06-11-2021 ರಂದು ಮಡಿಕೇರಿ ನಗರದ ನಿವಾಸಿ ಯಶವಂತ್‌ ಎಂಬುವವರು ಮಡಿಕೇರಿ ನಗರದಲ್ಲಿರುವ ಚರ್ಚ್‌ ಸೈಡ್‌ ಹೊಟೇಲ್‌ ಗೆ ಊಟ ತೆಗೆದುಕೊಳ್ಳಲು ಹೋಗಿದ್ದಾಗ ಯಕ್ಷಿತ್‌, ರೋಹಿತ್‌, ಲಿನೇಶ್‌, ಕವನ್‌, ದರ್ಶನ್‌, ದಿಶಾಂತ್‌, ಗೌತಮ್‌, ಮತ್ತು ಇತರರು ಹಳೆ ವೈಷಮ್ಯದಿಂದ ಹಲ್ಲೆ ಮಾಡಿ ಗಾಯಪಡಿಸಿ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 07-11-2021 ರಂದು ಪೊನ್ನಂಪೇಟೆ ತಾಲ್ಲೂಕು ಕಛೇರಿ ಮುಂಭಾಗದ ಸಾರ್ವಜನಿಕ ರಸ್ತೆಯಲ್ಲಿ ಕೆ-05-ಜೆಡ್-2517 ರ ಕಾರನ್ನು ಅದರ ಚಾಲಕ ರತನ್‌ ಪೆಮ್ಮಯ್ಯ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-09-ಇಕ್ಯೂ-9264 ರ ಸ್ಕೂಟರ್‌ಗೆ ಡಿಕ್ಕಿಪಡಿಸಿದ ಪರಿಣಾಂ ಸವಾರ ಮತ್ತು ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ದೂರಿನ ಮೇರೆ ಪೊನ್ನಂಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

            ದಿನಾಂಕ: 07-11-2021 ರಂದು ಮಡಿಕೇರಿ ತಾಲ್ಲೂಕು ತೊಂಬತ್ತುಮನೆ ನಿವಾಸಿ ಮಧು ಎಂಬುವವರು ಹಾಕತ್ತೂರು ಗ್ರಾಮದಲ್ಲಿರುವಾಗ ಅಲ್ಲಿಗೆ ಬಂದ ಚೂರಿಕಾಡು ನಿವಾಸಿ ಶರಣು ಮತ್ತು ತೊಂಬತ್ತುಮನೆ  ನಿವಾಸಿ ನಿತೀಶ್‌ ಎಂಬುವವರು ಹಳೆ ವೈಷಮ್ಯದಿಂದ ಕಲ್ಲಿನಿಂದ ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 08-11-2021 05:37 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080