ಅಭಿಪ್ರಾಯ / ಸಲಹೆಗಳು

ಹಲ್ಲೆ ಪ್ರಕರಣ

            ದಿನಾಂಕ: 08-06-2021 ರಂದು ಮಡಿಕೇರಿ ತಾಲ್ಲೂಕು ಕುಂಜಿಲ ಗ್ರಾಮದ ನಿವಾಸಿ ಎರಮು ಎಂಬುವವರಿಗೆ ಅದೇ ಗ್ರಾಮದ ನಿವಾಸಿ ರಜಾಕ್‌ ಎಂಬುವವರು ಜೀಪಿನಲ್ಲಿ ಹೋಗಿ ದಾರಿ ತಡೆದು ನಿಲ್ಲಿಸಿ ವೈಯಕ್ತಿಕ ವೈಷಮ್ಯದಿಂದ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ನಾಪೋಕ್ಲು ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಆಕಸ್ಮಿಕವಾಗಿ  ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು

            ದಿನಾಂಕ: 07-06-2021 ರಂದು ಸೋಮವಾರಪೇಟೆ ತಾಲ್ಲೂಕು ಕೊಡ್ಲಿಪೇಟೆ ಗ್ರಾಮದ ನಿವಾಸಿ ಪಂಚಾಯಿತಿ ವಾಟರ್‌ ಮ್ಯಾನ್‌ ಕೆಲಸ ಮಾಡಿಕೊಂಡಿರುವ ಮಣಿಮುತ್ತು ಎಂಬುವವರು ಪತ್ನಿಯೊಂದಿಗೆ ಕೆಲಕೊಡ್ಲಿ ಗ್ರಾಮದ ಹೇಮಾವತಿ ಹೊಳೆಯ ಬಳಿ ಮೋಟರ್‌ ಆನ್‌ ಮಾಡಲು ತೆರಳಿದ್ದು, ಸ್ನಾನ ಮಾಡುವ ಸಲುವಾಗಿ ಹೊಳೆಗೆ ಇಳಿದಿದ್ದಾಗ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು ಈ ಬಗ್ಗೆ ಮೃತರ ಪತ್ನಿ ನೀಡಿದ ದೂರಿನ ಮೇರೆ ಶನಿವಾರಸಂತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಅಪರಿಚಿತ ವ್ಯಕ್ತಿಯ ಕಳೇಬರ ಪತ್ತೆ.

            ದಿನಾಂಕ: 08-06-2021 ರಂದು ಸೋಮವಾರಪೇಟೆ ತಾಲ್ಲೂಕು ಮಕ್ಕಳ ಗುಡಿಬೆಟ್ಟದ ಕೆಳಭಾಗದ ಕಾಫಿ ತೋಟದೊಳಗೆ ಅಪರಿಚಿತ ವ್ಯಕ್ತಿಯೋರ್ವರ ಮೃತಶರೀರದ ತಲೆಬುರುಡೆ ಎಲುಬುಗಳು ಕಂಡುಬಂದಿದ್ದು ಈ ಬಗ್ಗೆ ರೋಷನ್‌ ಎಂಬುವವರು ನೀಡಿದ ದೂರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 09-06-2021 04:53 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ