ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 08-03-2022 ರಂದು ಮಡಿಕೇರಿ ನಗರದ ರೇಸ್‍ ಕೋರ್ಸ್‍ ರಸ್ತೆಯಲ್ಲಿ ಕೆಎ-12-ಬಿ-2261 ರ ಆಟೋ ರಿಕ್ಷಾವನ್ನು ಚಾಲಕ ಶರವಣ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-12-ಬಿ-3894 ರ ಆಟೋ ರಿಕ್ಷಾಕ್ಕೆ ಡಿಕ್ಕಿಪಡಿಸಿ ರಸ್ತೆಯಲ್ಲಿ ಮಗುಚಿ ಬಿದ್ದ ಪರಿಣಾಮ ಚಾಲಕ ಶರವಣ ರವರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

                ದಿನಾಂಕ: 08-03-2022 ರಂದು ಕುಶಾಲನಗರ ತಾಲ್ಲೂಕು ಮಲ್ಲೇನಹಳ್ಳಿ ಗ್ರಾಮದ ನಿವಾಸಿ ಕೃಷ್ಣೇಗೌಡ ಎಂಬುವವರು ಅವರ ಅಂಗಡಿಯಲ್ಲಿ  ಅಕ್ರಮವಾಗಿ ಮದ್ಯವನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಮಾಡುತ್ತಿದ್ದ ಪ್ರಕರಣವನ್ನು ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

                ದಿನಾಂಕ 08-03-2022 ರಂದು ಕುಶಾಲನಗರ ತಾಲ್ಲೂಕು ಸುಂದರ ನಗರ ನಿವಾಸಿ ವೆಂಕಟೇಶ್‍ ಎಂಬುವವರಿಗೆ ಅದೇ ಗ್ರಾಮದ ನಿವಾಸಿಗಳಾದ ಕೃಪ, ನಾಗೇಶ್ ಮತ್ತು ತಿಮ್ಮೇಶ್ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿ ಗಾಯಪಡಿಸಿ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಗ್ರಾಮಾಂತರ  ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 08-03-2022 ರಂದು ಪೊನ್ನಂಪೇಟೆ ತಾಲ್ಲೂಕು ಅರವತ್ತೊಕ್ಲು ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಪಿ-9646 ರ ಕಾರನ್ನು ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಹಾರೂನ್ ಎಂಬುವವರಿಗೆ ಡಿಕ್ಕಿಪಡಿಸಿದ ಪರಿಣಾಮ ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 09-03-2022 06:00 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080