ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ ಪ್ರಕರಣ

                ದಿನಾಂಕ: 08-07-2021 ರಂದು ಸೋಮವಾರಪೇಟೆ ಪಟ್ಟಣದ ನಿವಾಸಿ  ಮದನ್‌ ಕುಮಾರ್‌  ಎಂಬುವವರು ಪಟ್ಟಣದ  ಸಂತೆ ಮಾರುಕಟ್ಟೆಯ ಬಳಿ ಅಕ್ರಮವಾಗಿ  ಮದ್ಯವನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಸೋಮವಾರಪೇಟೆ ಠಾಣೆ ಪಿಎಸ್‌ಐ ಶ್ರೀಧರ್‌ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

 ಬಾಲ್ಯ ವಿವಾಹ ಪ್ರಕರಣ

            ದಿನಾಂಕ: 07-07-2021 ರಂದು ಕುಶಾಲನಗರ ದಂಡಿನಪೇಟೆ ನಿವಾಸಿಗಳಾದ ಮಾದ, ಮುರುಗಮ್ಮ ಮತ್ತು ಇತರರು ಸೇರಿ ಕೇಶವ್‌ ಎಂಬ ಯುವಕನೊಂದಿಗೆ ಅಪ್ರಾಪ್ತ ವಯಸ್ಕ ಹುಡುಗಿಯನ್ನ ದೇವಾಲಯದಲ್ಲಿ ವಿವಾಹ ಮಾಡಿಕೊಟ್ಟಿದ್ದು. ಈ ಬಗ್ಗೆ ದೊರೆತ ಮಾಹಿತಿ ಮೇರೆ ಜಿಲ್ಲಾ ಶಿಶು ಕಲ್ಯಾಣ ಇಲಾಕೆ ಅಧಿಕಾರಿಗಳು ಪರಿಶೀಲಿಸಿ ನೀಡಿದ ಪುಕಾರಿನ ಮೇರೆ ಕುಶಾಲನಗರ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

            ದಿನಾಂಕ: 08-07-2021 ರಂದು ಪೊನ್ನಂಪೇಟೆ ತಾಲ್ಲೂಕು ಕಿರುಗೂರು ಗ್ರಾಮದ ಹೊನ್ನಿಕೊಪ್ಪಲು ನಿವಾಸಿ ಸಂತೋಷ್‌, ಲೋಕೇಶ್‌ ಎಂಬುವವರಿಗೆ ಅವರ ಪಕ್ಕದ ಮನೆಯ ನಿವಾಸಿ ಸುಮಂತ್‌ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಪೊನ್ನಂಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

            ದಿನಾಂಕ: 08-07-2021 ರಂದು ಸೋಮವಾರಪೇಟೆ ತಾಲ್ಲೂಕು ಯಡೂರು ಗ್ರಾಮದ ನಿವಾಸಿ ಲಿಖಿತ್‌ ಎಂಬುವವರಿಗೆ ಅದೇ ಗ್ರಾಮದ ನಿವಾಸಿ ನವೀನ್‌ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಜೂಜಾಟ ಪ್ರಕರಣ

            ದಿನಾಂಕ: 08-07-2021 ರಂದು ವಿರಾಜಪೇಟೆ ಪಟ್ಟಣದ ಕೆಎಸ್‌ಆರ್‌.ಟಿ.ಸಿ ಬಸ್‌ ನಿಲ್ದಾಣದ ಬಳಿ ಜಾಖೀರ್‌ ಎಂಬುವವರ ಬಾಡಿಗೆ ಲೈನ್‌ ಮನೆಯಲ್ಲಿ ಅಕ್ರಮವಾಗಿ ಇಸ್ಪೀಟ್‌ ಜೂಜಾಟ ಆಡುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ನಗರ ಠಾಣೆ ಪಿ.ಎಸ್‍.ಐ ಜಗದೀಶ್ ಧೂಲಶೆಟ್ಟಿ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 09-07-2021 01:23 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ