ಅಭಿಪ್ರಾಯ / ಸಲಹೆಗಳು

ನಕಲಿ ನೋಂದಣಿ ಸಂಖ್ಯೆ ಬಳಿ  ವಂಚನೆ ಪ್ರಕರಣ

            ಮಡಿಕೇರಿ ತಾಲ್ಲೂಕು ಅವಂದೂರು ಗ್ರಾಮದ ನಿವಾಸಿ ಹರ್ಷಿತ್‌ ಎಂಬುವವರ ಬೈಕ್‌ ನೋಂದಣಿ ಸಂಖ್ಯೆ ಕೆಎ-12-ಆರ್‌-3434 ಆಗಿದ್ದು ಇದೇ ನೋಂದಣಿ ಸಂಖ್ಯೆಯನ್ನು ನಕಲು ಮಾಡಿ ಬಾಡಗ ಚೇರಂಬಾಣೆ ಗ್ರಾಮದ ನಿವಾಸಿ ಸುಬ್ಬಯ್ಯ ಎಂಬುವವರು ಅವರು ಚಾಲನೆ ಮಾಡುತ್ತಿದ್ದ ಬೈಕ್‌ ಗೆ ಅಳವಡಿಸಿಕೊಂಡು ವಂಚನೆ ಮಾಡಿದ್ದು ಈ ಬಗ್ಗೆ ದಿನಾಂಕ: 08-09-2021 ರಂದು ನೀಡಿದ ದೂರಿನ ಮೇರೆ ಭಾಗಮಂಡಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

            ದಿನಾಂಕ 08-09-2021 ರಂದು ಕುಶಾಲನಗರ ತಾಲ್ಲೂಕು ಕೂಡಿಗೆ ಗ್ರಾಮದ ಬಳಿ ಹೆದ್ದಾರೆ ರಸ್ತೆಯಲ್ಲಿ ಕೆಎ-45-ವೈ-5596 ರ ಬೈಕನ್ನು ಅದರ ಸವಾರ ತ್ಯಾಗರಾಜು ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರಿಗೆ ಡಿಕ್ಕಿಪಡಿಸಿದ ಪರಿಣಾಮ ಮಹಿಳೆ ಹಾಗೂ ಬೈಕ್‌ ಸವಾರರಿಬ್ಬರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ  ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಗಾಂಜಾ ಮಾರಾಟ ಪ್ರಕರಣ

            ದಿನಾಂಕ: 08-09-2021 ರಂದು ಪೊನ್ನಂಪೇಟೆ ತಾಲ್ಲೂಕು ಸುಳುಗೋಡು ಗ್ರಾಮದ ನಿವಾಸಿ ಕಿರಣ್‌ ಎಂಬುವವರು ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಪ್ರಕರಣವನ್ನು ಪೊನ್ನಂಪೇಟೆ ಠಾಣೆ ಪಿಎಸ್‌ಐ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.\

ಹಲ್ಲೆ ಪ್ರಕರಣ

            ದಿನಾಂಕ: 08-09-2021 ರಂದು ಕುಶಾಲನಗರ ತಾಲ್ಲೂಕು ತೊರೆನೂರು ಗ್ರಾಮದ ನಿವಾಸಿಗಳಾದ ಪ್ರತಾಪ್‌ ಮತ್ತು ಉಮೇಶ್‌ ಎಂಬುವವರು ವೈಯಕ್ತಿಕ ವೈಷಮ್ಯದಿಂದ ಪರಸ್ಪರ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿಕೊಂಡಿದ್ದು ಈ ಬಗ್ಗೆ ಉಭಯ ಕಡೆಯವರು ನೀಡಿದ ಪುಕಾರಿನ ಮೇರೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

                ದಿನಾಂಕ: 08-09-2021 ರಂದು ಕುಶಾಲನಗರ ತಾಲ್ಲೂಕು ತೊರೆನೂರು ಗ್ರಾಮದ ನಿವಾಸಿ  ಸುನಿಲ್‌ ಎಂಬುವವರು  ಅವರ ಹೊಟೇಲ್‌ ಮುಂಭಾಗದ  ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ  ಮದ್ಯವನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಮಾಡುತ್ತಿದ್ದ ಪ್ರಕರಣವನ್ನು ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಇತ್ತೀಚಿನ ನವೀಕರಣ​ : 09-09-2021 06:09 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ