ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 07-10-2021 ರಂದು ಪೊನ್ನಂಪೇಟೆ ತಾಲ್ಲೂಕು ಹೈಡೊಸ್ಲೂರು ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-05-ಎಂಎ-4961 ರ ಕಾರನ್ನು ಅದರ ಚಾಲಕ ಸಿದ್ದು ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-22-ಬಿ-1957 ರ ಪಿಕ್‌ ಅಪ್‌ ವಾಹನಕ್ಕೆ ಡಿಕ್ಕಿಪಡಿಸಿದ ಪರಿಣಾಮ ಕಾರು ಚಾಲಕ ಮತ್ತು ಮಹಿಳೆಯೊಬ್ಬರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ‍ಶ್ರೀಮಂಗಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

            ದಿನಾಂಕ: 08-10-2021 ರಂದು ಪೊನ್ನಂಪೇಟೆ ತಾಲ್ಲೂಕು ವೆಸ್ಟ್‌ ನೆಮ್ಮಲೆ ಗ್ರಾಮದ ನಿವಾಸಿ ಜೀವನ್‌ ಎಂಬುವವರಿಗೆ ಅದೇ ಗ್ರಾಮದ ನಿವಾಸಿಗಳಾದ ಕಾರಿಯಪ್ಪ, ನಾಚಪ್ಪ ಮತ್ತು ಲೋಕೇಶ್‌ ಎಂಬುವವರು ವಿನಾಕಾರಣ ಅವಾಚ್ಯ ಪದಗಳಿಂದ ಬೈದು ದೊಣ್ಣೆಯಿಂದ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರ ಶ್ರೀಮಂಗಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

            ದಿನಾಂಕ 07-10-2021 ರಂದು ಸೋಮವಾರಪೇಟೆ ತಾಲ್ಲೂಕು ಕೊಡ್ಲಿಪೇಟೆ ಶಿವಪುರ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಬಿ-2557 ರ ಆಟೋರಿಕ್ಷಾವನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-13-3978 ರ ಬೈಕ್‌ ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್‌ ಸವಾರ ಯೋಗೇಶ್‌ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಶನಿವಾರಸಂತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 09-10-2021 11:05 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080