ಅಭಿಪ್ರಾಯ / ಸಲಹೆಗಳು

ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆ ಬೆದರಿಕೆ ಪ್ರಕರಣ

            ದಿನಾಂಕ: 09-02-2022 ರಂದು ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸಾರ್ವಜನಿಕರಿಂದ ಬಂದ ದೂರಿನ ಮೇರೆ ಪಂಚಾಯಿತಿಯ ಪುನೀತ್‍ ಕುಮಾರ್‍ ಎಂಬುವವರು ಚಂದ್ರಮಣಿ ಎಂಬುವವರೊಂದಿಗೆ ಸುಂಟಿಕೊಪ್ಪ ಕನ್ನಡ ವ‍್ರತ್ತದ ಬಳಿ ಹೆದ್ದಾರಿ ರಸ್ತೆಯ ಬದಿಯಲ್ಲಿ ದಿನೇಶ್‍ಕುಮಾರ್‍ ಎಂಬುವವರು ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗುವಂತೆ ಪಾನಿಪೂರಿ ವ್ಯಾಪಾರ ಮಾಡುತ್ತಿದ್ದವರನ್ನು ಪಂಚಾಯಿತಿಯಿಂದ ಕ್ರಮಬದ್ದ ಪರವಾನಗಿ ಪಡೆಯದೇ ವ್ಯಾಪಾರ ಮಾಡುತ್ತಿರುವ ಬಗ್ಗೆ ವಿಚಾರಿಸಿದಾಗ ದಿನೇಶ್‍ ಕುಮಾರ್‍ ರವರು ಏಕಾಏಕಿ ಅವಾಚ್ಯ ಪದಗಳಿಂದ ಬೈದು ಕೊಲೆ ಬೆದರಿಕೆ ಹಾಕಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸುಂಟಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಳವು ಪ್ರಕರಣ

            ದಿನಾಂಕ: 09-02-2022 ರಂದು ಸೋಮವಾರಪೇಟೆ ನಗರದ ಚೌಡ್ಲು ಗ್ರಾಮದ ಗಾಂಧಿನಗರ ನಿವಾಸಿ ಲಿಂಗರಾಜು ಎಂಬುವವರಿಗೆ ಸೇರಿದ ಆಲೆಕಟ್ಟೆ ರಸ್ತೆಯಲ್ಲಿರುವ ಕಾಫಿ ಮಳಿಗೆಯ ಡ್ರಾಯರನ್ನು ಯಾರೋ ಕಳ್ಳರು ಮುರಿದು ಅದರಲ್ಲಿಟ್ಟಿದ್ದ ₹.80,000 ರೂ ನಗದು ಹಣವನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 10-02-2022 06:02 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080