ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

            ದಿನಾಂಕ 08-09-2021 ರಂದು ಕುಶಾಲನಗರ ತಾಲ್ಲೂಕು ಕೂಡಿಗೆ ಗ್ರಾಮದ ಬಳಿ ಹೆದ್ದಾರಿ ರಸ್ತೆಯಲ್ಲಿ ಕೆಎ-12-ಯು-2941 ರ ಬೈಕನ್ನು ಸವಾರ ಸಚಿನ್‌ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-12-2364 ರ ವ್ಯಾನ್‌ ಗೆ ಹಿಂಬದಿಯಿಂದ ಡಿಕ್ಕಿಪಡಿಸಿದ ಪರಿಣಾಮ ಬೈಕ್‌ ಸವಾರ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಳವು ಪ್ರಕರಣ

            ದಿನಾಂಕ: 08-09-2021 ರಂದು ರಾತ್ರಿ ಪೊನ್ನಂಪೇಟೆ ತಾಲ್ಲೂಕು ಹೈಸೋಡ್ಲೂರು ಗ್ರಾಮದ ನಿವಾಸಿ ಬೊಳ್ಳಮ್ಮ ಎಂಬುವವರ ಮನೆಯ ಮೇಲ್ಚಾವಣಿ ಹಂಚನ್ನು ಯಾರೋ ಕಳ್ಳರು ತೆಗೆದು ಒಳನುಗ್ಗಿ ಮನೆಯಲ್ಲಿಟ್ಟಿದ್ದ ₹. 60,000 ಮೌಲ್ಯದ 150 ಕೆಜಿ ಕಾಳು ಮೆಣಸನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಶ್ರೀಮಂಗಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಮರ ಕಳವು ಪ್ರಕರಣ

            ದಿನಾಂಕ: 03-09-2021 ರಿಂದ 09-09-2021 ರ ನಡುವಿನ ದಿನಗಳಲ್ಲಿ ಸೋಮವಾರಪೇಟೆ ತಾಲ್ಲೂಕು ಕಿರಿಕೊಡ್ಲಿ ಗ್ರಾಮದ ಕಿರಿಕೊಡ್ಲಿ ಮಠಕ್ಕೆ ಸೇರಿದ ಜಾಗದಲ್ಲಿದ್ದ ₹. 20,000 ಬೆಲೆಬಾಳುವ 7 ಸಿಲ್ವರ್‌ ಓಕ್‌ ಮರಗಳನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಶನಿವಾರಸಂತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 10-09-2021 11:24 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ