ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

                ದಿನಾಂಕ: 09-11-2021 ರಂದು ಮಡಿಕೇರಿ ನಗರದ ಕಮಾನು ಗೇಟ್‌ ಬಳಿ ಮಡಿಕೇರಿ –ಕುಶಾಲನಗರ ಹೆದ್ದಾರಿ ತಿರುವು ರಸ್ತೆಯಲ್ಲಿ ಕೆಎ-19-ಎಫ್-2992‌ ರ ಕೆ.ಎಸ್‌.ಆರ್.ಟಿ.ಸಿ ಬಸ್‌ ಚಾಲಕ ಸುದರ್ಶನ್‌ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ಬಸ್‌ ನಿರ್ವಾಹಕ ರಾಮಪ್ಪ ಎಂಬುವವರು ಬಸ್‌ ಬಾಗಿಲನ್ನು ಹಾಕದೇ ಇದ್ದುದರಿಂದ ಕಾರ್ತಿಕ್‌ ಎಂಬುವವರು ಬಸ್‌ ನಿಂದ ರಸ್ತೆಗೆ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

                ದಿನಾಂಕ: 09-11-2021 ರಂದು ಪೊನ್ನಂಪೇಟೆ ತಾಲ್ಲೂಕು ಬೀರುಗ  ಗ್ರಾಮದ ಇರ್ಪು ಮೆಸ್‌ ಬಳಿ ಮಲಯಾಳಿ ಪ್ರಮೋದ್‌ ಎಂಬುವವರು  ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ  ಮದ್ಯವನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಮಾಡುತ್ತಿದ್ದ ಪ್ರಕರಣವನ್ನು ಶ್ರೀಮಂಗಲ ಠಾಣೆ ಪೊಲೀಸರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ರಸ್ತೆ ಅಪಘಾತ ಪ್ರಕರಣ

                ದಿನಾಂಕ: 09-11-2021 ರಂದು ಪೊನ್ನಂಪೇಟೆ ತಾಲ್ಲೂಕು ಜೋಡುಬೀಟಿ ಅರವತ್ತೊಕ್ಲು ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-45-ಇ-1155 ರ ಬೈಕನ್ನು ಅದರ ಸವಾರ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಇಂದ ಬರುತ್ತಿದ್ದ ಕೆಎ-01-ಇಜೆಡ್-3933‌ ರ ಬೈಕ್‌ ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್‌ ಸವಾರರು ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 10-11-2021 04:00 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080