ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

          ದಿನಾಂಕ: 10.01.2022 ರಂದು ಕುಶಾಲನಗರ ತಾಲ್ಲೂಕು ಗುಡ್ಡೆಹೊಸೂರು ಗ್ರಾಮದ ಬಳಿ ಹೆದ್ದಾರಿ ರಸ್ತೆಯಲ್ಲಿ ಕೆಎ-12-ಎ-4705 ರ ಲಾರಿಯನ್ನು ಅದರ ಚಾಲಕ ಜನಾರ್ಧನ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-12-ಎಸ್‍-9878 ರ ಸ್ಕೂಟರ್ ಗೆ ಡಿಕ್ಕಿಪಡಿಸಿದ ಪರಿಣಾಮ ತೇಜಸ್‍ ಎಂಬುವವರು ರಸ್ತೆಗೆ ಬಿದ್ದು ಗಾಯಗೊಂಡವರಿಗೆ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮೃತಪಟ್ಟಿರುತ್ತಾರೆ. ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲಿಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

          ದಿನಾಂಕ: 10-01-2022 ರಂದು ಪೊನ್ನಂಪೇಟೆ ತಾಲ್ಲೂಕು ರಾಜಾಪುರ ಗ್ರಾಮದ ನಿವಾಸಿ ರೋಜಾ ಎಂಬುವವರಿಗೆ ಅದೇ ಗ್ರಾಮದ ನಿವಾಸಿಗಳಾದ ಶಂಕರ, ಸರಸ್ವತಿ, ರೋಷನ್, ಸಣ್ಣಮ್ಮ ಎಂಬುವವರು ದಾರಿ ತಡೆದು ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಪೊನ್ನಂಪೇಟೆ ಠಾಣೆ ಪೊಲಿಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

          ದಿನಾಂಕ: 10-01-2022 ರಂದು ಪೊನ್ನಂಪೇಟೆ ತಾಲ್ಲೂಕು ಭದ್ರಗೊಳ ಗ್ರಾಮ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಪಿ-5327 ರ ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-45-ಇ-6501 ರ ಬೈಕ್‍ ಗೆ ಡಿಕ್ಕಿಪಡಿಸಿದ ಪರಿಣಾಮ ಸವಾರ ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲಿಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 11-01-2022 07:11 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080