ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 10-02-2022 ರಂದು ಕುಶಾಲನಗರ ತಾಲ್ಲೂಕು ರಂಗಸಮುದ್ರ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಜೆಡ್-9850 ರ ಕಾರನ್ನು ಚಾಲಕಿ ರೇಖಾ ನಂಜಪ್ಪ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-12-ಎನ್-6413 ರ ಕಾರಿಗೆ ಡಿಕ್ಕಿಪಡಿಸಿದ ಪರಿಣಾಮ ಮೂವರು ಪ್ರಯಾಣಿಕರು ಗಾಯಗೊಂಡಿದ್ದು ಈ ಬಗ್ಗೆ ಮಾಚಯ್ಯ ಎಂಬುವವರು ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಳವು ಪ್ರಕರಣ

            ದಿನಾಂಕ 31-01-2022 ರಿಂದ 10-02-2022 ರ ನಡುವೆ ಸೋಮವಾರಪೇಟೆ ತಾಲ್ಲೂಕು ಕರ್ಕಳ್ಳಿ ಗ್ರಾಮದ ನಿವಾಸಿ ಮಹಿಳೆಯೊಬ್ಬರು ಕೆಲಸಕ್ಕೆ ಹೋಗುವ ಸಮಯದಲ್ಲಿ ಮನೆಯ ಹಿಂಬದಿಯ ಬಾಗಿಲಿಗೆ ಬೀಗ ಹಾಕದೆ ಹೋಗಿದ್ದ ಸಮಯದಲ್ಲಿ ಯಾರೋ ಕಳ್ಳರು ಮನೆಯ ಒಳಗೆ ನುಗ್ಗಿ ಬೀರುವಿನಲ್ಲಿ ಇಟ್ಟಿದ್ದ 1 ಲಕ್ಷ ಬೆಲೆಬಾಳುವ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಳವು ಪ್ರಕರಣ

            ದಿನಾಂಕ: 10-02-2022 ರಂದು ರಾತ್ರಿ ಪೊನ್ನಂಪೇಟೆ ತಾಲ್ಲೂಕು ಈಚೂರು ಗ್ರಾಮದ ನಿವಾಸಿ ರೈಯು ಎಂಬುವವರು ಅವರ ಮನೆಯಲ್ಲಿ ರುವಾಗ ಮನೆಯ ಸ್ನಾನದ ಕೋಣೆಯ ಕಿಟಕಿಯನ್ನು ಅಪರಿಚಿತ ವ್ಯಕ್ತಿಯೊಬ್ಬ ಮುರಿದು ಒಳನುಗ್ಗಿ ಟೇಬಲ್‍ ಮೇಲೆ ಇಟ್ಟಿದ್ದ ₹. 30,000 ಬೆಲೆಬಾಳುವ ಮೊಬೈಲ್‍ ಗಳನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರ ಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಅಕ್ರಮ ಲಾಟರಿ ಮಾರಾಟ ಪ್ರಕರಣ

                ದಿನಾಂಕ: 10-02-2022 ರಂದು ಸೋಮವಾರಪೇಟೆ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಕಾನ್ವೆಂಟ್‍ ಬಾಣೆ ನಿವಾಸಿ ಶಿವಕುಮಾರ್‍  ಎಂಬುವವರು ಅಕ್ರಮ ವಾಗಿ ಕೇರಳ ರಾಜ್ಯದ ಲಾಟರಿ ಟಿಕೇಟುಗಳನ್ನು ಸಾರ್ವಜನಿರಿಗೆ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಸೋವಾರಪೇಟೆ ಠಾಣೆ ಪಿಎಸ್‍ಐ ವಿರೂಪಾಕ್ಷ  ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 11-02-2022 08:06 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080