ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ, ಸ್ಕೂಟರ್ ಸವಾರ ಸಾವು.

            ದಿನಾಂಕ: 10-03-2021 ರಂದು ಸೋಮವಾರಪೇಟೆ ತಾಲ್ಲೂಕು ಗುಡ್ಡೆಹೊಸೂರು ಗ್ರಾಮದ ಬಳಿ ಹೆ್ದ್ದಾರಿ ರಸ್ತೆಯಲ್ಲಿ ಟಿಎಸ್‍-07-ಹೆಚ್.ಸಿ-9329 ರ ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-12-ಎಸ್-9840 ರ ಸ್ಕೂಟರ್‍ ಗೆ ಡಿಕ್ಕಿಪಡಿಸಿದ ಪರಿಣಾಮ ಗಾಯಗೊಂಡ ಸ್ಕೂಟರ್‍ ಸವಾರ ಮೋಹನ್‍ ಎಂಬುವವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಡಿಕ್ಕಿಪಡಿಸಿದ ನಂತರ ಕಾರಿನ ಚಾಲಕ ಕಾರನ್ನು ನಿಲ್ಲಿಸದೇ ಹೋಗಿದ್ದು ಈ ಬಗ್ಗೆ ಲೋಕೇಶ್‍ ಎಂಬುವವರು ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ, ಸ್ಕೂಟರ್ ಸವಾರ ಸಾವು.

            ದಿನಾಂಕ: 10-03-2021 ರಂದು ಪೊನ್ನಂಪೇಟೆ ತಾಲ್ಲೂಕು  ನಾಲ್ಕೇರಿ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-4235 ನೋಂದಣಿ ಸಂಖ್ಯೆಯ ಸ್ವರಾಜ್‍ ಮಜ್ದಾ ವಾಹನವನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-12-ಎ-7907 ರ ಸ್ಕೂಟರ್‍ ಗೆ ಡಿಕ್ಕಿಪಡಿಸಿದ ಪರಿಣಾಮ ಗಾಯಗೊಂಡಿದ್ದ ಸ್ಕೂಟರ್‍ ಸವಾರ ಪೂವಯ್ಯ ಎಂಬುವವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಿದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದು, ಡಿಕ್ಕಿಪಡಿಸಿದ ನಂತರ ಚಾಲಕ ಲಾರಿಯನ್ನು ನಿಲ್ಲಿಸದೇ ಹೋಗಿದ್ದು ಈ ಬಗ್ಗೆ ಯದುಕುಮಾರ್ ಎಂಬುವವರು ನೀಡಿದ ಪುಕಾರಿನ ಮೇರೆ ಕುಟ್ಟ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 10-03-2021 ರಂದು ಪೊನ್ನಂಪೇಟೆ ತಾಲ್ಲೂಕು ನಾಲ್ಕೇರಿ ಗ್ರಾಮದ ಬಳಿ ಮುಖ‍್ಯ ರಸ್ತೆಯಲ್ಲಿ ಕೆಎ-12-ಪಿ-7503 ರ ಓಮ್ನಿ ಕಾರನ್ನು ಅದರ ಚಾಲಕ ದೇವಯ್ಯ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-12-ಹೆಚ್-2228 ರ ಸ್ಕೂಟರ್‍ ಗೆ ಡಿಕ್ಕಿಪಡಿಸಿದ ಪರಿಣಾಮ ಸ್ಕೂಟರ್‍ ಸವಾರ ರಿಬ್ಬರು ಬಿದ್ದು ಗಾಯಗೊಂಡಿದ್ದು ಡಿಕ್ಕಿಪಡಿಸಿದ ನಂತ ಕಾರನ್ನು ಚಾಲಕ ನಿಲ್ಲಿಸದೇ ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಶ‍್ರೀಮಂಗಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 11-03-2021 04:13 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ