ಅಭಿಪ್ರಾಯ / ಸಲಹೆಗಳು

ಅಕ್ರಮ ಮಾರಾಟಕ್ಕಾಗಿ ಮದ್ಯ ಸಾಗಾಟ ಪ್ರಕರಣ

                ದಿನಾಂಕ: 10-05-2021 ರಂದು ಸೋಮವಾರಪೇಟೆ ತಾಲ್ಲೂಕು ಸುಂಟಿಕೊಪ್ಪ ಗದ್ದೆಹಳ್ಳ ಗ್ರಾಮದ ನಿವಾಸಿ  ಮಣಿ  ಎಂಬುವವರು ಗ್ರಾಮದಲ್ಲಿರುವ ಅಕ್ರಮವಾಗಿ ಸಾರ್ವಜನಿಕರಿಗೆ ಮದ್ಯ ಮಾರಾಟ  ಮಾರಾಟ ಮಾಡಲು ಮದ್ಯ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಸುಂಟಿಕೊಪ್ಪ  ಠಾಣೆ ಅಧಿಕಾರಿ  ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ರಸ್ತೆ ಅಪಘಾತ, ವ್ಯಕ್ತಿ ಸಾವು.

                ದಿನಾಂಕ: 10.05.2021 ರಂದು ಸೋಮವಾರಪೇಟೆ ತಾಲ್ಲೂಕು ಯಡವಾರೆ ಗ್ರಾಮದ ಬಳಿ ರಸ್ತೆಯಲ್ಲಿ ಕೆಎ-12-ಆರ್‍-4756 ರ ಬೈಕನ್ನು ಅದರ ಸವಾರ ಈರಪ್ಪ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಗಾಯಗೊಂಡವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಿದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದು ಈ ಬಗ್ಗೆ ಮೃತರ ಮಗ ನೀಡಿದ ದೂರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

                ದಿನಾಂಕ: 10.05.2021 ರಂದು ಸೋಮವಾರಪೇಟೆ  ತಾಲ್ಲೂಕು ತಾಕೇರಿ ಅಂಚೆ ಕಛೇರಿ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-165 ನೋಂದಣಿ ಸಂಖ್ಯೆಯ ಪಿಕ್ ಅಪ್‍ ವಾಹನವನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-12-ಎಲ್-4283 ರ ಬೈಕ್‍ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್‍ ಸವಾರರಾದ ಸುಧಾಕರ ಮತ್ತು ಅವರ ಪತ್ನಿ ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಳವು ಪ್ರಕರಣ

                ದಿನಾಂಕ: 10-05-2021 ರಂದು ಬೆಳಗ್ಗಿನ ಜಾವ ಗೋಣಿಕೊಪ್ಪ ನಗರದ ಅಪೋಲೊ ಮೆಡಿಕಲ್ಸ್ ಮಳಿಗೆಯ ಶೆಟರ್ಸ್ ತೆಗೆದು ಒಳಗೆ ಕ್ಯಾಷ್‍ ಬಾಕ್ಸ್‍ ನಲ್ಲಿಟ್ಟಿದ್ದ ₹. 68,000 ನಗದು ಹಣ, ಸಿ.ಸಿ ಕ್ಯಾಮೆರ ಮೊಡೆಮ್, ಮತ್ತು ಇಂಜೆಕ್ಷನ್‍ ಮತ್ತು ಮಾತ್ರೆಗಳನ್ನು ಈ ಹಿಂದೆ ಇದೇ ಮೆಡಿಕಲ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಹುಣಸೂರು ನಿವಾಸಿ ವಿರೂಪಾಕ್ಷ ಮತ್ತು ಇನ್ನೊಬ್ಬ ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ಮೆಡಿಕಲ್ಸ್ ನಿರ್ವಾಹಕ ಯೋಗಣ್ಣ ಎಂಬುವವರು ಸಿ.ಸಿ ಕ್ಯಾಮೆರಾದಲ್ಲಿ ಪರಿಶೀಲಿಸಿ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 11-05-2021 12:51 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080