ಅಭಿಪ್ರಾಯ / ಸಲಹೆಗಳು

ಕಳವು ಪ್ರಕರಣ ಪತ್ತೆ ಆರೋಪಿಗಳ ಬಂಧನ.

       ಕೊಡಗು ಜಿಲ್ಲೆಯ ಕುಶಾಲನಗರ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಬಸವೇಶ್ವರ ಬಡಾವಣೆ ಹಾಗೂ ಕಾವೇರಿ ಬಡಾವಣೆ ಯಲ್ಲಿ ನಡೆದ ಎರಡು ಮನೆ ಕಳ್ಳತನ ಹಾಗೂ ದಂಡಿನಪೇಟೆಯಲ್ಲಿ ನಡೆದ ಒಂದು ವಾಹನ ಕಳವು ಪ್ರಕರಣಗಳನ್ನು ಪತ್ತೆಹಚ್ಚುವಲ್ಲಿ ಕುಶಾಲನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

    ಸದರಿ ಕಳ್ಳತನ ಪ್ರಕರಣಗಳ ಪತ್ತೆಗಾಗಿ ಕುಶಾಲನಗರ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿ, ದಿನಾಂಕ 10-11-2021 ರಂದು ರಾತ್ರಿ ಗಸ್ತಿನಲ್ಲಿದ್ದ ಎಎಸ್ಐ ಶ್ರೀ ಮಂಜುನಾಥ ಹಾಗು ಸಿಬ್ಬಂದಿಗಳು ವಾಹನ ತಪಾಸಣೆ ನಡೆಸುವ ಸಂದರ್ಭದಲ್ಲಿ ವಾಹನವೊಂದರಲ್ಲಿ ಬಂದ ಶಂಕಿತ ವ್ಯಕ್ತಿಯನ್ನು ತಡೆದು ಪರಿಶೀಲನೆ ನಡೆಸಿ ಸದರಿ ವ್ಯಕ್ತಿಯನ್ನು ವಿಚಾರಣೆ ನಡೆಸಿ ಮೇಲ್ಕಾಣಿಸಿದ ಪ್ರಕರಣಗಳನ್ನು ಪತ್ತೆಮಾಡಿದ್ದು, ಆರೋಪಿತನಿಂದ ಕಳ್ಳತನ ಮಾಡಿದ 2 ಲಕ್ಷ ಮೌಲ್ಯದ 59.15 ಗ್ರಾಂ ತೂಕದ ಚಿನ್ನಾಭರಣ, 40,000 ಮೌಲ್ಯದ ಒಂದು ಹೊಂಡಾ ಆಕ್ಟೀವಾ, 70,000/0 ರೂ ಮೌಲ್ಯದ ಯಮಹಾ ಸ್ಕೂಟರ್ ಮತ್ತು 1 ಆಪಲ್ ಐಪೋನ್ ನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿರುತ್ತಾರೆ.

ಈ ಕಾರ್ಯಾಚರಣೆಯು ಶ್ರೀ ಎಂ. ಮಹೇಶ್, ಸಿಪಿಐ ಕುಶಾಲನಗರ ವೃತ್ತ ರವರ ನೇತೃತ್ವದಲ್ಲಿ ನಡೆದಿದ್ದು ಕಾರ್ಯಾಚರಣೆಯಲ್ಲಿ ಕುಶಾಲನಗರ ಪಟ್ಟಣ ಪೊಲೀಸ್ ಠಾಣೆಯ ಪಿಎಸ್ಐ ಮಾದೇಶ್, ಎಎಸ್ಐ ಮಂಜುನಾಥ್, ಗೋಪಾಲ್, ಸಿಬ್ಬಂದಿಯವರಾದ ಪ್ರಕಾಶ್, ಟಿ.ಎಸ್.ಸಜಿ, ಅರುಣ್ ಕುಮಾರ್, ರಂಜಿತ್, ಸೌಮ್ಯ, ಚಾಲಕರಾದ ಶ್ರೀ. ಶೇಷಪ್ಪ, ಸಿಡಿಆರ್ ವಿಭಾಗದ ಸಿಬ್ಬಂದಿಗಳಾದ ರಾಜೇಶ್ ಮತ್ತು ಗಿರೀಶ್ ರವವರು ಭಾಗಿಯಾಗಿದ್ದು, ಕಾರ್ಯಾಚರಣೆಯಲ್ಲಿ ಭಾಗಿಯಾದ ಪೊಲೀಸರ ಕಾರ್ಯವನ್ನು ಶ್ಲಾಘಿಸಲಾಗಿದೆ.

ಕೊಡಗು ಜಿಲ್ಲೆಯ ಸಾರ್ವಜನಿಕರು ಬೇರೆ ಊರುಗಳಿಗೆ ತೆರಳುವ ಸಂದರ್ಭದಲ್ಲಿ ಯಾವುದೇ ಬೆಲೆ ಬಾಳುವ ಚಿನ್ನಾಭರಣಗಳನ್ನು ಮನೆಯಲ್ಲಿಡಬಾರದೆಂದು ಹಾಗೂ ಹಾಗೆ ತೆರಳುವ ಸಂದರ್ಭ ದಲ್ಲಿ ತಮ್ಮ ಮನೆಗಳಲ್ಲಿ ಪರಿಚಯಸ್ಥರನ್ನು ಉಳಿದುಕೊಳ್ಳುವ ಬಗ್ಗೆ ನೋಡಿಕೊಳ್ಳುವುದು ಹಾಗೂ ಮನೆಯ ಹೊರಗೆ ಕಾಣುವಂತೆ ಬೀಗಗಳನ್ನು ಹಾಕದೇ ಒಳ್ಳೆಯ ಡೋರ್ಲಾಕ್ಗಳನ್ನು ಬಳಸುವಂತೆ ಹಾಗೂ ಮನೆಯ ಹೊರಗೆ ವಾಹನವನ್ನು ನಿಲ್ಲಿಸುವಾಗ ಸರಿಯಾದ ಭದ್ರತೆಯೊಂದಿಗೆ ನಿಲ್ಲಿಸಿ, ಇಂತಹ ಅಪರಾಧಗಳನ್ನು ತಡೆಗಟ್ಟುವಲ್ಲಿ ಪೊಲೀಸರೊಂದಿಗೆ ಸಹಕರಿಸಬೇಕೆಂದು ಸಾರ್ವಜನಿಕರಲ್ಲಿ ಕೋರಿರುತ್ತಾರೆ.

ರಸ್ತೆ ಅಪಘಾತ, ಚಾಲಕ ಸಾವು.

                ದಿನಾಂಕ; 09-10-2021 ರಂದು ಮಡಿಕೇರಿ ತಾಲ್ಲೂಕು ಕಡಗದಾಳು ಬೋಯಿಕೇರಿ ರಸ್ತೆಯಲ್ಲಿ ಕೆಎ-12-ಎಂಎ-0071 ರ ಮಾರುತಿ ಓಮ್ನಿ ವ್ಯಾನನ್ನು ಅದರ ಚಾಲಕ ಸತೀಶ್‌ ಎಂಬುವವರು ಅತಿವೇ ಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಬರೆಗೆ ಡಿಕ್ಕಿಯಾಗಿದ್ದರಿಂದ ಚಾಲಕ ಗಾಯಗೊಂಡು ಮೃತಪಟ್ಟಿದ್ದು ಈ ಬಗ್ಗೆ ಮೃತನ ಸಹೋದರಿ ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 14-11-2021 12:21 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080