ಅಭಿಪ್ರಾಯ / ಸಲಹೆಗಳು

ಕಳವು ಪ್ರಕರಣ ಪತ್ತೆ ಆರೋಪಿಗಳ ಬಂಧನ.

ಲಕ್ಷಾಂತರ ರೂಪಾಯಿ ಮೌಲ್ಯದ ಹಣ ಕಳವು ಮಾಡಿದ ಪ್ರಕರಣವೊಂದರಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ವಿರಾಜಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.

ದಿನಾಂಕ 04/04/2021ರಂದು ವಿರಾಜಪೇಟೆ ಸಮೀಪದ ಅರಮೇರಿ ಗ್ರಾಮದ ನಿವಾಸಿ ಪೊಯ್ಯೇಟಿರ ನಂದ ಎಂಬವರ ಮನೆಯಲ್ಲಿ ಯಾರೂ ಇಲ್ಲದೇ ಇದ್ದ ಸಮಯದಲ್ಲಿ ರಾತ್ರಿ ವೇಳೆ ಯಾರೋ ಕಳ್ಳರು ಮನೆಯ ಬಾಗಿಲಿನ ಬೀಗ ಮುರಿದು ಒಳ ಪ್ರವೇಶಿಸಿ ಮನೆಯೊಳಗಡೆ ಕೊಠಡಿಯ ಕಪಾಟಿನಲ್ಲಿದ್ದ ಸುಮಾರು ರೂ. 3,67,000/- ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿರುವ ಬಗ್ಗೆ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಕೈಗೊಳ್ಳಲಾಗಿತ್ತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾರವರ ಮಾರ್ಗದರ್ಶನದಂತೆ ವಿರಾಜಪೇಟೆ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಸಿ.ಟಿ.ಜಯಕುಮಾರ್‌ ರವರ ನಿರ್ದೇಶನದಲ್ಲಿ ತನಿಖೆ ಕೈಗೊಂಡ ವಿರಾಜಪೇಟೆ ವೃತ್ತ ನಿರೀಕ್ಷಕ ಬಿ.ಎಸ್.ಶ್ರೀಧರ್‌ ರವರ ನೇತೃತ್ವದ ಅಪರಾಧ ಪತ್ತೆ ತಂಡವು ಕಳವು ಪ್ರಕರಣವನ್ನು ಭೇದಿಸಿ ಆರೋಪಿಗಳಾದ ಅರಮೇರಿ ಗ್ರಾಮದ ನಿವಾಸಿ ನಟೇಶ ಹಾಗೂ ಮೈಸೂರು ಜಿಲ್ಲೆಯ ಹುಣಸೂರಿನ ಆಜಾದ್ ನಗರದ ನಿವಾಸಿ ಅಫ್ಸರ್ ಎಂಬವರನ್ನು ಬಂಧಿಸಿ ಅವರಿಂದ ಕಳವು ಮಾಡಲಾದ ರೂ.3,67,000/- ಮೌಲ್ಯದ ಚಿನ್ನಾಭರಣ, ರೂ.29,250/- ನಗದು ಹಾಗೂ ಕೃತ್ಯಕ್ಕೆ ಉಪಯೋಗಿಸಿದ್ದಾರೆನ್ನಲಾದ ಒಂದು ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದುಆರೋಪಿಗಳಿಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿರುತ್ತದೆ.

ಅಪರಾಧ ಪತ್ತೆ ಕಾರ್ಯಾಚರಣೆಯಲ್ಲಿ ವಿರಾಜಪೇಟೆ ಗ್ರಾಮಾಂತರ ಠಾಣೆಯ ಪಿಎಸ್ಐ ಸಿದ್ದಲಿಂಗ ಬಾನಸೆ, ಪಿಎಸ್ಐ ಹೆಚ್.ಎಸ್.ಬೋಜಪ್ಪ, ಎಎಸ್ಐ ಶ್ರೀಧರ್ ಮತ್ತು ಸಿಬ್ಬಂದಿಗಳಾದ ತೀರ್ಥ ಕುಮಾರ್, ರಾಮಪ್ಪ, ರವಿ, ನೆಹರು, ಮುಸ್ತಫಾ, ಚಂದ್ರಶೇಖರ್, ಪ್ರದೀಪ್, ಈರಪ್ಪ ಮತ್ತು ಸಿಡಿಆರ್ ವಿಭಾಗದ ರಾಜೇಶ್, ಗಿರೀಶ್ ಮುಂತಾದವರು ಪಾಲ್ಗೊಂಡಿದ್ದರು.

ಹಲ್ಲೆ ಪ್ರಕರಣ

ದಿನಾಂಕ : 11-04-2021 ರಂದು ಪೊನ್ನಂಪೇಟೆ ತಾಲ್ಲೂಕು ಶ್ರೀಮಂಗಲ ಗ್ರಾಮದ ನಿವಾಸಿ ಸಂಜು ಎಂಬುವವರಿಗೆ ಟಿ.ಶೆಟ್ಟಿಗೇರಿ ಗ್ರಾಮದ ನಿವಾಸಿ ಮಂಜು ಎಂಬುವವರು ಹಳೆ ವೈಷಮ್ಯದಿಂದ ಹಾಕಿ ಸ್ಟಿಕ್‍ ನಿಂದ ತಲೆಗೆ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಶ್ರೀಮಂಗಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 12-04-2021 03:32 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ