ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 11-08-2021 ರಂದು ಮಡಿಕೇರಿ ನಗರದ ಚೈನ್‌ ಗೇಟ್‌ ಬಳಿ ಒಂದು ವಾಹನವನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಬಸ್‌ ತಂಗುದಾಣದ ಬಳಿ ನಿಂತಿದ್ದ ಬಾಮಾವತಿ ಎಂಬುವವರಿಗೆ ಡಿಕ್ಕಿಪಡಿಸಿದ ಪರಿಣಾಮ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದು ಈ ಬಗ್ಗೆ ನೀಡಿದ ದೂರಿನ ಮೇರೆ ಮಡಿಕೇರಿ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ನಕಲಿ ಕೋವಿಡ್‌ ಪರಿಕ್ಷಾ ವರದಿ ಪ್ರಕರಣ

                ದಿನಾಂಕ: 11-08-2021 ರಂದು ವಿರಾಜಪೇಟೆ ತಾಲ್ಲೂಕು ಅಮ್ಮತ್ತಿ ಗ್ರಾಮಪಂಚಾಯತಿ ವ್ಯಾತಿಯ ಕೋವಿಡ್‌ ಚೆಕ್‌ ಪೋಸ್ಟ್‌ ನಲ್ಲಿ ಕಂದಾಯ ಮತ್ತು ಪೊಲೀಸ್‌ ಇಲಾಖೆ ಸಿಬ್ಬಂದಿಯವರು ತಪಾಸಣೆ ಮಾಡುವಾಗ ಕೆಎಲ್-14-ಡಬ್ಲ್ಯೂ-396  ನೋಂದಣಿ ಸಂಖ್ಯೆಯ ಕಾರನ್ನು ಪರಿಶೀಲಿಸುವಾಗ ಅದರಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ವ್ಯಕ್ತಿಗಳ ಕೋವಿಡ್‌ ಪರಿಶೀಲನಾ ವರದಿ ತೋರಿಸುವಂತೆ ಸೂಚಿಸಿದಾಗ ಹಾಜರುಪಡಿಸಿದ RTPCR ವರದಿ ಪರಿಶೀಲಿಸಿದಾಗ ನಕಲಿ ವರದಿ ಎಂಬುದಾಗಿ ತಿಳಿದುಬಂದ ಮೇರೆ ವಿಚಾರಣೆ ಮಾಡಿದಾಗ ಹೆಸರುಗಳನ್ನು ಎಡಿಟ್‌ ಮಾಡಿ ನಕಲಿ ಕೋವಿಡ್‌ ಪರಿಕ್ಷಾ ವರದಿಯನ್ನು ಸೃಷ್ಟಿಸಿಕೊಂಡಿರುವುದಾಗಿ ಕಂಡುಬಂದಿದ್ದು ಈ ಬಗ್ಗೆ ನೀಡಿದ ದೂರಿನ ಮೇರೆ ವಿರಾಜಪೇಟೆ ಗ್ರಾಮಾಂತರ  ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

            ದಿನಾಂಕ: 11-08-2021 ರಂದು ವಿರಾಜಪೇಟೆ ತಾಲ್ಲೂಕು ಕಣ್ಣಂಗಾಲ ಗ್ರಾಮದ ನಿವಾಸಿ ಶಮನ್‌ ಎಂಬುವವರು ಬಸ್‌ ತಂಗುದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯವನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಮಾಡುತ್ತಿದ್ದ ಪ್ರಕಣವನ್ನು ವಿರಾಜಪೇಟೆ ಗ್ರಾಮಾಂತರ ಠಾಣೆ ಪಿಎಸ್‌ಐ ಸಿ.ವಿ ಶ್ರೀಧರ್‌ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 12-08-2021 06:42 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ