ಅಭಿಪ್ರಾಯ / ಸಲಹೆಗಳು

ಹಲ್ಲೆ ಪ್ರಕರಣ

ದಿನಾಂಕ 11-10-2021 ರಂದು ಪೊನ್ನಂಪೇಟೆ ತಾಲ್ಲೂಕು ಬೇಂಗೂರು ಗ್ರಾಮದ ನಿವಾಸಿ ಕಿಶೋರ್‌ ಎಂಬುವವರು ಪೊನ್ನಂಪೇಟೆಯ ವೈನ್‌ ಶಾಪ್‌ ನಲ್ಲಿ ಮದ್ಯಪಾನ ಮಾಡಲು ಹೋಗಿ ವಾಪಾಸ್ಸು ಮನಗೆ ಹೋಗಲು ಹೊರಟಾಗ ಮುಗುಟಗೇರಿ ಗ್ರಾಮದ ಪ್ರದೀಪ್‌ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿ ಕೈಯಿಂದ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಪೊನ್ನಂಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕೊಲೆ ಯತ್ನ  ಪ್ರಕರಣ

ಮಡಿಕೇರಿ ತಾಲ್ಲೂಕು ಮಕ್ಕಂದೂರು ಗ್ರಾಮದ ನಿವಾಸಿ ಯೋಗೇಶ್‌ ಎಂಬುವವರು ಸೋಮವಾರಪೇಟೆ ಪಟ್ಟಣದ ರೇಂಜರ್‌ ಬ್ಲಾಕ್‌ ನಲ್ಲಿ ಶಶಿ ಎಂಬುವವರ ಮನೆಯಲ್ಲಿ ವಾಸವಿದ್ದು ದಿನಾಂಕ: 09-10-2021 ರಂದು ಕಾನ್ವೆಂಟ್‌ ಬಾಣೆ ನಿವಾಸಿ ಸುಜೇತ್‌ ಎಂಬುವವರು ಇತರ ಮೂವರೊಂದಿಗೆ ಹೋಗಿ ಯೋಗೇಶ್‌ ರವರಿಗೆ ಹಲ್ಲೆ ಮಾಡಲು ಪ್ರಯತ್ನಿಸಿದಾಗ ತಪ್ಪಿಸಿಕೊಂಡು ರಸ್ತೆಯಲ್ಲಿ ಹೋಗುತ್ತಿರುವಾಗ ಕಾರಿನಲ್ಲಿ ಹಿಂಬಾಲಿಸಿಕೊಂಡು ಹೋಗಿ ಬಲವಂತವಾಗಿ ಕಾರಿನೊಳಗೆ ಕೂರಿಸಿಕೊಂಡು ಬಾಣಾವಾರ ಗ್ರಾಮದ ಕಡೆ ಕರೆದುಕೊಂಡು ಹೋಗಿ ಕಾರಿನಿಂದ ಇಳಿಸಿ ಕಾಡಿನೊಳಗೆ ಎಳೆದುಕೊಂಡು ಹೋಗಿ ವಿವಸ್ತ್ರಗೊಳಿಸಿ ಕೊಲೆ ಮಾಡುವ ಉದ್ದೇಶದಿಂದ ದೊಣ್ಣೆಯಿಂದ ಹಲ್ಲೆ ಮಾಡಿ ಗಾಯಪಡಿಸಿರುತ್ತಾರೆ.  ನಂತರ ಅವರಿಂದ ತಪ್ಪಿಸಿಕೊಂಡು ಕಾಡಿನಲ್ಲಿ ೨ ದಿನ ಕಳೆದು ಸ್ನೇಹಿತರಿಗೆ ವಿಚಾರ ತಿಳಿಸಿ ಆಸ್ಪತ್ರೆಯಲ್ಲಿ ಚಿಕಿತ್ಸಗೆ ದಾಖಲಾಗಿ ದಿನಾಂಕ 11-10-2021 ರಂದು ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ  ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 12-10-2021 01:23 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080